ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಬುಧವಾರ ನಡೆದ ಕಾರ್ಮಿಕ ಮತ್ತು ಸಾರಿಗೆ ನೌಕರರ ಸಂಘಟನೆಗಳ ಮುಖಂಡರ ಸಭೆ ಯಾವುದೇ ಒಮ್ಮತದ ತೀರ್ಮಾನಕೈಗೊಳ್ಳದೆ ವಿಫಲಗೊಂಡಿತು.
ಬೆಂಗಳೂರು (ಮಾ.09): ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಬುಧವಾರ ನಡೆದ ಕಾರ್ಮಿಕ ಮತ್ತು ಸಾರಿಗೆ ನೌಕರರ ಸಂಘಟನೆಗಳ ಮುಖಂಡರ ಸಭೆ ಯಾವುದೇ ಒಮ್ಮತದ ತೀರ್ಮಾನಕೈಗೊಳ್ಳದೆ ವಿಫಲಗೊಂಡಿತು. ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಶೇ.7ರಿಂದ 10ರಷ್ಟುವೇತನ ಹೆಚ್ಚಿಸುವ ಭರವಸೆಯನ್ನು ಸಾರಿಗೆ ಸಂಘಟನೆಗಳ ಮುಖಂಡರು ತಿರಸ್ಕರಿಸಿದ್ದು ಶೇ.25ರಷ್ಟುವೇತನ ಹೆಚ್ಚಿಸಬೇಕು ಎಂದು ಪಟ್ಟು ಹಿಡಿದಿದ್ದರು. ಸಾರಿಗೆ ಸಚಿವ ಬಿ. ಶ್ರೀರಾಮುಲು ಅವರು ಮುಖಂಡರ ಮನವೊಲಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.
ಹೀಗಾಗಿ ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆ ವಿಫಲಗೊಂಡಿದೆ. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಶ್ರೀರಾಮುಲು ಅವರು, ಚುನಾವಣೆ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಸಾರಿಗೆ ನೌಕರರ ವೇತನ ಪರಿಷ್ಕರಣೆ ಸಮಸ್ಯೆ ಇತ್ಯರ್ಥ ಮಾಡುತ್ತೇವೆ. ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸಿ ಇನ್ನೆರಡು ದಿನಗಳೊಳಗೆ ಮತ್ತೆ ಸಭೆ ಕರೆಯುವುದಾಗಿ ತಿಳಿಸಿದರು. ವೇತನ ಪರಿಷ್ಕರಣೆ ಬಗ್ಗೆ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮಗಳ ನಿರ್ದೇಶಕರು, ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಚರ್ಚೆ ಮಾಡಲಾಗಿದೆ.
ನಾನು ಬೋನ್ನಲ್ಲಿದ್ದರೂ ಹುಲಿನೇ, ಜೈಲ್ನಲ್ಲಿದ್ದರೂ ಹುಲಿನೇ: ಜನಾರ್ದನ ರೆಡ್ಡಿ
ಸಾರಿಗೆ ನೌಕರರು ಪರ್ಸೆಂಟೇಜ್ ಲೆಕ್ಕದಲ್ಲಿ ವೇತನ ಏರಿಕೆಗೆ ಬೇಡಿಕೆ ಇಟ್ಟಿದ್ದಾರೆ. ಪ್ರಸ್ತುತ ಸಾರಿಗೆ ಇಲಾಖೆ ನಷ್ಟದಲ್ಲಿ ನಡೆಯುತ್ತಿದೆ. ಹೊಸ ಹೊಸ ಬಸ್ಗಳನ್ನು ಬಿಟ್ಟಿದ್ದು, ಸೇವಾ ಮನೋಭಾವದಿಂದ ಕೆಲಸ ಮಾಡುತ್ತಿದ್ದೇವೆ ಎಂದರು. ಕೋವಿಡ್ ಸಂದರ್ಭದಲ್ಲಿ ನಷ್ಟದಲ್ಲಿದ್ದಾಗ ಸಾರಿಗೆ ನಿಗಮಗಳಿಗೆ ಮುಖ್ಯಮಂತ್ರಿಯವರು ಸಾಕಷ್ಟುಅನುದಾನ ಕೊಟ್ಟಿದ್ದಾರೆ. ಇಂದಿನ ಚರ್ಚೆಯಲ್ಲಿ ಶೇ.10ರಷ್ಟುವೇತನ ಹೆಚ್ಚಳ ಮಾಡುವುದಾಗಿ ತಿಳಿಸಿದ್ದೇವೆ. ಅದರೆ, ನೌಕರರು 2014ರ ನಂತರ ಈವರೆಗೂ ಪರಿಷ್ಕರಣೆ ಆಗಿಲ್ಲ. ನೌಕರರ ಬೇಡಿಕೆ ಬಗ್ಗೆ ಗುರುವಾರ ಅಥವಾ ಶುಕ್ರವಾರ ಮುಖ್ಯಮಂತ್ರಿಯವರೊಂದಿಗೆ ಚರ್ಚೆ ಮಾಡಿದ ಬಳಿಕ ಸಭೆ ಕರೆಯುತ್ತೇನೆ ಎಂದು ಹೇಳಿದರು.
ಮಾ.24ರಿಂದ ಮುಷ್ಕರ- ಬಿಎಂಟಿಸಿ ಸಂಘ: ಇಂದಿನ ಸಭೆಯಲ್ಲಿ ನಡೆದಿದ್ದು ಕೇವಲ ಚೌಕಾಸಿಯಷ್ಟೆ. ನಮ್ಮ ಬೇಡಿಕೆಗೆ ಅಧಿಕಾರಿಗಳು ಒಪ್ಪಿಲ್ಲ. ಸರ್ಕಾರಿ ನೌಕರರು ಮುಷ್ಕರ ಮಾಡಿದರೆ ಬೇಡಿಕೆ ಈಡೇರಿಸುತ್ತಾರೆ. ಆದರೆ, ಸಾರಿಗೆ ನೌಕರರಿಗೆ ಶೇ.7ರಿಂದ 10ರಷ್ಟುಮಾತ್ರ ವೇತನ ಪರಿಷ್ಕರಣೆ ಮಾಡುವುದಕ್ಕೆ ಸಹಮತವಿಲ್ಲ. ವೇತನ ಪರಿಷ್ಕರಣೆ ಆಗದಿದ್ದಲ್ಲಿ ಮತ್ತೆ ಬೀದಿಗಿಳಿದು ಮುಷ್ಕರ ನಡೆಸುತ್ತೇವೆ. ಮಾಚ್ರ್ 24ರಿಂದ ಸಾರಿಗೆ ನೌಕರರು ಕುಟುಂಬದ ಸಮೇತ ಮುಷ್ಕರದಲ್ಲಿ ಪಾಲ್ಗೊಳ್ಳುತ್ತೇವೆ ಎಂದು ಬಿಎಂಟಿಸಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ಎಚ್ಚರಿಕೆ ನೀಡಿದರು.
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಕೋಟೆ ಮೇಲೆ ಬಿಜೆಪಿ ಕಣ್ಣು
ಸಭೆಯಲ್ಲಿ ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದೇವೆ. ಮುಖ್ಯವಾಗಿ ವೇತನ ಹೆಚ್ಚಳದ ಬಗ್ಗೆ ಚರ್ಚೆ ಮಾಡಲಾಯಿತು. ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡಲಾಗಿದೆ. ಸಾರಿಗೆ ನೌಕರರಿಗೆ ಶೇ.25ರಷ್ಟು ಮಾಡಬೇಕೆಂಬ ಬೇಡಿಕೆ ಇಟ್ಟಿದ್ದೇವೆ. ಈ ಬೇಡಿಕೆಯನ್ನು ಮುಖ್ಯಮಂತ್ರಿಯರವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನದ ಬಗ್ಗೆ ತಿಳಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ ಎಂದು ಸಾರಿಗೆ ನೌಕರರ ಸಂಘದ ಅಧ್ಯಕ್ಷ ಅನಂತ ಸುಬ್ಬರಾವ್ ತಿಳಿಸಿದರು.