
ಬೆಂಗಳೂರು, (ಜುಲೈ.03): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕೊರೊನಾ 2ನೇ ಅಲೆಯ ಬಳಿಕ 3ನೇ ಹಂತದ ಅನ್‌ಲಾಕ್ ಮಾರ್ಗಸೂಚಿ ಬಿಡುಗಡೆ ಮಾಡಿದ್ದಾರೆ.
ಇಂದು (ಶನಿವಾರ) ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ಕೋವಿಡ್ ಉಸ್ತುವಾರಿ ಸಚಿವರ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನ್‌ಲಾಕ್ 3.O ಜಾರಿಗೊಳಿಸುವ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಜುಲೈ 5ರ ಮುಂಜಾನೆ 5 ಗಂಟೆಯಿಂದ ಅನ್‌ಲಾಕ್ 3.O ಅನ್ವಯವಾಗಲಿದ್ದು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಅನ್‌ಲಾಕ್ ಅನ್ವಯವಾಗಲಿದೆ. ಇನ್ನು ಪ್ರಮುಖವಾಗಿ ಜುಲೈ 5ರಿಂದ ವೀಕೆಂಡ್ ಕರ್ಫ್ಯೂ ರದ್ದು ಮಾಡಲಾಗಿದೆ. ಆದ್ರೆ, ದಿನದ ನೈಟ್ ಕರ್ಫ್ಯೂ ರಾತ್ರಿ 9ರಿಂದ ಬೆಳಗ್ಗೆ 5 ಗಂಟೆ ವರೆಗೆ ಇರಲಿದೆ. ಇನ್ನು ಯಾವುದ್ಕೆಲ್ಲಾ ಅವಕಾಶ? ಯಾವುದಕ್ಕೆ ಇಲ್ಲ ಎನ್ನುವ ಮುಖ್ಯಾಂಶಗಳು ಈ ಕೆಳಗಿನಂತಿವೆ.
ಯಾವುದಕ್ಕೆಲ್ಲಾ ಅವಕಾಶ?
* ಸರ್ಕಾರಿ, ಖಾಸಗಿ ಕಚೇರಿಗಳಲ್ಲಿ ಶೇಕಡಾ 100ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ.
* ಎಲ್ಲಾ ಮಾಲ್‌ಗಳು ಓಪನ್ ಮಾಡಲು ಅವಕಾಶ ನೀಡಲಾಗಿದೆ.
* ರಾಜ್ಯದಲ್ಲಿ ದೇವಾಲಯಗಳನ್ನು ತೆರೆಯಲು ಗ್ರೀನ್ ಸಿಗ್ನಲ್.( ಭಕ್ತರಿಗೆ ದೇವಾಲಯ ಪ್ರವೇಶ, ದೇವರ ದರ್ಶನ ಮತ್ತು ಆರತಿ ಸೇವೆಗಷ್ಟೇ ಅವಕಾಶ)
* ಬಾರ್ಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ.
* ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಇರುವುದಿಲ್ಲ.
* ರಾಜ್ಯಾದ್ಯಂತ ಪ್ರತಿದಿನ ಸಂಜೆ 9ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಜಾರಿ ಇರುತ್ತೆ.
* ಧಾರ್ಮಿಕ, ರಾಜಕೀಯ ಇತರ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ.
* ಪಬ್ ಹಾಗೂ ಸಿನಿಮಾ ಹಾಲ್ಗಳು ಕೂಡ ತೆರೆಯಲು ಅವಕಾಶ ನೀಡಲಾಗಿಲ್ಲ.
* ಮಾರ್ಕೆಟ್‌ಗಳ ಓಪನ್ ಇರುವುದಿಲ್ಲ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ