
ಬೆಂಗಳೂರು, (ಫೆ.13): ವೀರಶೈವ ಲಿಂಗಾಯಿತರನ್ನು ಒಬಿಸಿಗೆ ಸೇರ್ಪಡೆ ಮಾಡಲು ಅಡ್ಡಿಯಾಗಿದ್ದು ಕೇಂದ್ರ ಸರ್ಕಾರ ಎಂದು ದಿಂಗಾಲೇಶ್ವರ ಶ್ರೀ ಗಳು ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ ಅಧಿಕಾರಕ್ಕೆ ಬರಲು ಬಹುಸಂಖ್ಯಾತ ವೀರಶೈವ ಲಿಂಗಾಯಿತರ ಬೆಂಬಲ ಕಾರಣವಾಗಿತ್ತು. ಈಗ ವೀರಶೈವ ಲಿಂಗಾಯಿತರಿಗೆ ಅನ್ಯಾಯವಾದರೆ ಅದರ ಪರಿಣಾಮ ಏನಾಗುತ್ತದೆ ಎಂದು ಅರ್ಥ ಮಾಡಿಕೊಳ್ಳಬೇಕು ಎಂದು ಪರೋಕ್ಷವಾಗಿ ಬಿಜೆಪಿಗೆ ಎಚ್ಚರಿಕೆ ನೀಡಿದರು.
ಸಿಎಂಗೆ ಮತ್ತೊಂದು ಟೆನ್ಷನ್, ಮೀಸಲಾತಿ ಹೋರಾಟಕ್ಕೆ ಇನ್ನೊಂದು ಸಮುದಾಯ ಅಖಾಡಕ್ಕೆ
ಈ ಹೋರಾಟದಲ್ಲಿ ವೀರಶೈವ ಲಿಂಗಾಯಿತ ಸಮುದಾಯದ ಪ್ರಮುಖ ಮಠಗಳ ಸ್ವಾಮಿಗಳು ಬಾಯಿ ಮುಚ್ಚಿಕೊಂಡು ಕೂರಬಾರದು. ನಿಮ್ಮ ನಿಲುವು ಏನು ಎಂಬುದನ್ನು ಮೊದಲು ಸ್ಪಷ್ಟಪಡಿಸಿ ಎಂದರು.
ನಾವು ನಮ್ಮ ಸಮಾಜವನ್ನೇ ಅಲಕ್ಷ್ಯ ಮಾಡಿದ್ದಕ್ಕೆ ಈಗ ಪ್ರಾಯಶ್ಚಿತ್ತ ಅನುಭವಿಸಬೇಕಾಗಿದೆ. ಈಗ ಸಮಸ್ತ ವೀರಶೈವ ಲಿಂಗಾಯಿತರನ್ನು ಒಬಿಸಿಗೆ ಸೇರ್ಪಡೆ ಮಾಡುವವರೆಗೆ ನಾವು ಹೋರಾಟ ಮಾಡಬೇಕು. ಯಾವುದೇ ಪರಿಸ್ಥಿತಿಯಲ್ಲಿ ಸಮುದಾಯ ಒಡೆಯದಂತೆ ನೋಡಿಕೊಂಡಿದ್ದೇವೆ. ಈಗ ಸಮುದಾಯಕ್ಕೆ ಏನುಬೇಕೋ ಅದನ್ನು ಕೊಡಬೇಕಾಗಿದೆ ಎಂದು ಕರೆ ಕೊಟ್ಟರು.
ಅಂದು ಯಡಿಯೂರಪ್ಪ ತುರ್ತು ಸಚಿವ ಸಂಪುಟ ಸಭೆ ಕರೆದು ವೀರಶೈವ ಲಿಂಗಾಯಿತರನ್ನು ಒಬಿಸಿ ಗೆ ಸೇರ್ಪಡೆ ಮಾಡಲು ನಿರ್ಧಾರ ಮಾಡಿದ್ದರು. ಆದರೆ ಇದ್ದಕ್ಕಿದ್ದಂತೆ ಹಿಂದೆ ಸರಿದರು. ಅಂದು ಅವರು ನಿರ್ಧಾರ ಕೈಗೊಂಡಿದ್ದಿದ್ದರೆ ಪಂಚಮಸಾಲಿ ಜಗದ್ಗುರುಗಳು ಕಾಲಿಗೆ ಬೊಬ್ಬೆ ಬರುವ ಹಾಗೆ ಪಾದಯಾತ್ರೆ ಮಾಡಬೇಕಾಗಿರಲಿಲ್ಲ ಎಂದು ಹೇಳಿದರು.
ಯಡಿಯೂರಪ್ಪನವರು ವೀರಶೈವ ಲಿಂಗಾಯಿತರು ಎಂಬ ಕಾರಣಕ್ಕೆ ನಮ್ಮನ್ನು ಒಬಿಸಿ ಗೆ ಸೇರ್ಪಡೆ ಮಾಡುವ ಶಿಫಾರಸ್ಸು ಮಾಡಿ ಎಂದು ನಾವು ಕೇಳಲ್ಲ. ಆದರೆ ವೀರಶೈವ ಲಿಂಗಾಯಿತರ ಪರಿಸ್ಥಿತಿಯನ್ನು ಅವಲೋಕನ ಮಾಡಿ ಬಳಿಕ ಶಿಫಾರಸ್ಸು ಮಾಡಿ. ರಾಜ್ಯ ಸರ್ಕಾರದ ಶಿಫಾರಸ್ಸನ್ನು ಕೇಂದ್ರ ಸರ್ಕಾರ ನಿರ್ಲಕ್ಷಿಸದೆ ಪರಿಗಣಿಸಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ