ರಾಜ್ಯದಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ, ಹಲವು ಜಿಲ್ಲೆಗಳಲ್ಲಿ ರೆಡ್, ಆರೇಂಜ್, ಯೆಲ್ಲೋ​ ಅಲರ್ಟ್

By Suvarna News  |  First Published Jun 14, 2021, 6:08 PM IST

* ರಾಜ್ಯಕ್ಕೆ ಮುಂದಿನ ಮೂರು ದಿನ ಭಾರೀ ಮಳೆ
* ವ್ಯಾಪಕ ಮಳೆಯ ಎಚ್ಚರಿಕೆ ಕೊಟ್ಟ ರಾಜ್ಯ ಹವಮಾನ ಇಲಾಖೆ 
* ರಾಜ್ಯದ ಹಲವು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್ ಘೋಷಣೆ..!
* ಹಲವು ಪ್ರದೇಶಗಳಿಗೆ ಆರೆಂಜ್​​ ಅಲರ್ಟ್​, ಯೆಲ್ಲೋ ಅಲರ್ಟ್​ ಘೋಷಣೆ
 


ಬೆಂಗಳೂರು, (ಜೂನ್.14): ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಮಳೆ ಜೋರಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಜೂನ್​ 17ರ ತನಕ ಆರೆಂಜ್ ಅಲರ್ಟ್​ ನೀಡಲಾಗಿದ್ದು, ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿಯುವ ಸಾಧ್ಯತೆ ಇದೆ. 

Latest Videos

undefined

ರಾಜ್ಯ ಹವಮಾನ ಇಲಾಖೆ  ವ್ಯಾಪಕ ಮಳೆಯ ಎಚ್ಚರಿಕೆ ಕೊಟ್ಟಿದ್ದು, ಮುಂಜಾಗ್ರತಾ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ರೆಡ್, ಆರೇಂಜ್ ಹಾಗೂ ಯೆಲ್ಲೋ​ ಅಲರ್ಟ್ ಘೋಷಣೆ ಮಾಡಲಾಗಿದೆ. 

KRS ನೀರಿನ ಮಟ್ಟ 82.54 ಅಡಿಗೆ ಕುಸಿತ: ಕಳೆದ ವರ್ಷಕ್ಕಿಂತ 8 ಅಡಿ ಕಡಿಮೆ

ಬೆಂಗಳೂರಿನಲ್ಲೂ ಮುಂದಿನ ಎರಡು ದಿನ ಮಳೆಯಾಗಲಿದೆ. ಭಾರೀ ಗಾಳಿ ಬೀಸುವ ಹಿನ್ನೆಲೆ ಮೀನಗಾರರು ಇಂದಿನಿಂದ ಜೂನ್​​ 17ರವರೆಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ.

ಪೂರ್ವ ಅರಬ್ಬೀ ಸಮುದ್ರದಲ್ಲಿ ಒಂದು ವಾಯುಭಾರ ಕುಸಿತ ಆಗಿ ಕರ್ನಾಟಕದ ಕರಾವಳಿ ಪ್ರದೇಶ ಸಮೀಪಿಸಿದ್ದು, ಇದರ ಪರಿಣಾಮ ಕರಾವಳಿ ಪ್ರದೇಶಗಳಲ್ಲಿ ಇಂದಿನಿಂದ 18ರವರೆಗೆ ವ್ಯಾಪಕ ಮಳೆಯಾಗಲಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ 20 ಸೆ.ಮೀಗೂ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ.

ಕರಾವಳಿ ಪ್ರದೇಶಗಳಲ್ಲಿ ಜೂನ್​ 16 ಮತ್ತು 17ರಂದು ಭಾರೀ ಮಳೆಯಾಗುವ ಹಿನ್ನೆಲೆ ಆರೆಂಜ್​​ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಜೂನ್​ 18ರಂದು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್​ ಘೋಷಿಸಲಾಗಿದೆ.

ಇನ್ನು ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಜೂನ್​ 17ರವರೆಗೆ ವ್ಯಾಪಕ ಮಳೆಯಾಗಲಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಗಳಲ್ಲಿ  ಆರೆಂಜ್ ಅಲರ್ಟ್​  ಘೊಷಣೆ ಮಾಡಲಾಗಿದೆ.

ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ವಿಜಯಪುರ, ಬಾಗಲಕೋಟೆ, ರಾಯಚೂರು ಜಿಲ್ಲೆಗಳಿಗೆ ಮೂರು ದಿನ ಯೆಲ್ಲೋ ಅಲರ್ಟ್​ ಘೋಷಣೆಯಾಗಿದೆ.

click me!