ವಾತಾವರಣದಲ್ಲಿ ತೀವ್ರ ಬದಲಾವಣೆ: ಇಂದು ರಾಜ್ಯದ 17 ಜಿಲ್ಲೆಗಳಲ್ಲಿ ಮಳೆ, ಈ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆ ಎಚ್ಚರಿಕೆ

Published : Sep 15, 2026, 06:35 AM IST
Karnataka weather forecast today

ಸಾರಾಂಶ

ಹವಾಮಾನ ಇಲಾಖೆಯು ದಕ್ಷಿಣ ಒಳನಾಡಿನಲ್ಲಿ ತೀವ್ರ ಹವಾಮಾನ ಬದಲಾವಣೆಯಿಂದಾಗಿ ಗುಡುಗು ಮಿಂಚಿನ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೈಸೂರು, ಕೊಡಗು, ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ ಸಾಧಾರಣ ಮಳೆಯಾಗುವ ಸಾಧ್ಯತೆ

ಬೆಂಗಳೂರು (ಸೆ.15): ವಾತಾವರಣದಲ್ಲಿ ತೀವ್ರ ಬದಲಾವಣೆ ಹಿನ್ನೆಲೆ ಇಂದು(ಸೆ.15) ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಮಿಂಚಿನ ಸಹಿತ ಭಾರೀ ಮಳೆಯಾಗಲಿರುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಒಳನಾಡು ಈ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ದಕ್ಷಿಣ ಒಳನಾಡು ಕರ್ನಾಟಕದಿಂದ ತಮಿಳನಾಡು ಮೂಲಕ ನೈರುತ್ಯ ಬಂಗಾಳ ಕೊಲ್ಲಿವರೆಗೆ ತೀವ್ರ ಹವಾಮಾನ ಬದಲಾವಣೆಯಿಂದಾಗಿ ಇಂದು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಗುಡುಗು ಮಿಂಚಿನ ಸಹಿತ ಮಳೆಯಾಗಲಿದೆ ಎಂದು ಎಂದು ತಿಳಿಸಿದೆ.

ಮೈಸೂರು, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಗಂಟೆಗೆ 40 ಕಿಮೀ ನಿಂದ 50 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದಂತೆ ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ ತುಮಕೂರು, ವಿಜಯನಗರ, ಬಳ್ಳಾರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಯೆಲ್ಲೋ ಅಲರ್ಟ್ ಇರುವ ಜಿಲ್ಲೆಗಳು:

ಮೈಸೂರು, ಕೊಡಗು, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ವಿಜಯನಗರ ಬಳ್ಳಾರಿ ಜಿಲ್ಲೆಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇಂದು ಬೆಂಗಳೂರಿನ ಹವಾಮಾನ ಹೇಗಿರಲಿದೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿ ಕೆಲವು ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ವಾತಾವರಣದಲ್ಲಿನ ಗರಿಷ್ಠ ತಾಪಮಾನ ಸುಮಾರು 32 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್‌ ಇರಲಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ವೇಳೆ ಕರಾವಳಿ ಕರ್ನಾಟಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಹಿನ್ನೆಲೆ ಮೀನುಗಾರರಿಗೆ ಯಾವುದೇ ವಿಶೇಷ ಎಚ್ಚರಿಕೆ ನೀಡಿಲ್ಲ, ಇನ್ನು ಉತ್ತರ ಒಳನಾಡಿನಲ್ಲಿ ಮಳೆಯ ಪ್ರಭಾವ ತೀವ್ರ ಕ್ಷಿಣಿಸಿದ್ದು, ಬಹುತೇಕ ಇಂದು ಒಣಹವೆ ಮುಂದುವರಿಯಲಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

K.R.S ಅಷ್ಟೇ ಅಲ್ಲ... ಸರ್ ಎಂ. ವಿಶ್ವೇಶ್ವರಯ್ಯ ಅವರ ಬಗ್ಗೆ ಯಾರಿಗೂ ತಿಳಿಯದ 10 ಸತ್ಯಗಳು!
1.3 ಲಕ್ಷ ರೂ ಅಡ್ವಾನ್ಸ್‌ನಲ್ಲಿ ಪೈಂಟಿಂಗ್, ನಿರ್ವಹಣೆಗೆ 1.11 ಲಕ್ಷ ಮುರಿದುಕೊಂಡ ಬೆಂಗಳೂರು ಮನೆ ಮಾಲೀಕ