ರಾಜ್ಯದಲ್ಲಿಂದು ವರ್ಷದ ಮೊದಲ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Published : Jan 13, 2025, 08:49 AM ISTUpdated : Jan 13, 2025, 08:59 AM IST
 ರಾಜ್ಯದಲ್ಲಿಂದು ವರ್ಷದ ಮೊದಲ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಸಾರಾಂಶ

ಶ್ರೀಲಂಕಾದ ಪೂರ್ವ ಕರಾವಳಿ ಹಾಗೂ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನವೆರಿ 13,14 ರಂದು ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು (ಜ.13) ಶ್ರೀಲಂಕಾದ ಪೂರ್ವ ಕರಾವಳಿ ಹಾಗೂ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನವೆರಿ 13,14 ರಂದು ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: ಜನವರಿ 13-14ರಂದು ಬೆಂಗಳೂರಿಗೆ ಈ ವರ್ಷದ ಮೊದಲ ಮಳೆ! ಚಳಿ ಜತೆಗೆ ಮಳೆಯ ಧಮಾಕಾ!

ಕರಾವಳಿ ಕರ್ನಾಟಕ, ಉತ್ತರ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗಿರಲಿದೆ. ವಿಜಯಪುರ, ಬೀದರ್, ಕಲಬುರ್ಗಿ, ಬಾಗಲಕೋಟೆ, ಧಾರವಾಡ, ಬೆಳಗಾವಿ, ಬಳ್ಳಾರಿ ಜಿಲ್ಲೆಗಳಲ್ಲಿ ಮಂಜು ಕವಿದ ವಾತವರಣವಿರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಚಳಿ ಜೊತೆ ಮಳೆ:

ಬೆಂಗಳೂರಲ್ಲಿ ಕಳೆದ ಕೆಲವು ದಿನಗಳಿಂದ ಚಳಿ ತೀವ್ರವಾಗಿದೆ. ಜೊತೆಗೆ ಶುಷ್ಕ ವಾತಾವರಣವಿದೆ ಇದೀಗ ಇಂದಿನಿಂದ (ಜ.13,14)ರಂದು ಬೆಂಗಳೂರಿನಲ್ಲಿ ವರ್ಷದ ಮೊದಲ ಮಳೆ ಬೀಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಮುಸ್ಲಿಂ ಪವಿತ್ರ ಕ್ಷೇತ್ರ ಮೆಕ್ಕಾದಲ್ಲಿ ಕಂಡು ಕೇಳರಿಯದ ಮಳೆ: ಪ್ರವಾಹಕ್ಕೆ ಕೊಚ್ಚಿ ಹೋದ ಕಾರುಗಳು

ಬೆಂಗಳೂರಿನ ಕೆಲವು  ಪ್ರದೇಶಗಳಲ್ಲಿ ಮಂಜಿನಿಂದ ಕೂಡಿದ್ದು, ಕೆಲವೆಡೆ ಲಘು ಮಳೆಯಾಗಲಿದೆ ಎಂದು IMD ತಿಳಿಸಿದೆ.  IMD ಅಂಕಿಅಂಶಗಳ ಪ್ರಕಾರ, ಬೆಂಗಳೂರು ನಗರದಲ್ಲಿ ಜನವರಿ ಸರಾಸರಿ ದೈನಂದಿನ ಕನಿಷ್ಠ ತಾಪಮಾನ 15.8 ° C ಆಗಿದೆ. ಶುಕ್ರವಾರ, ನಗರದಲ್ಲಿ ಕನಿಷ್ಠ ತಾಪಮಾನ 17.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. HAL ವಿಮಾನ ನಿಲ್ದಾಣದಲ್ಲಿ 16.3°C ಮತ್ತು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 17°C ದಾಖಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವ ಪೊಲೀಸ್ ಸಿಬ್ಬಂದಿಗೆ ಡಿಜಿ ಐಜಿಪಿ ಡಾ ಸಲೀಂ ಖಡಕ್ ಎಚ್ಚರಿಕೆ
ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ