ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ಮಾಡಿಕೊಳ್ಳಿ ಅಧಿಕಾರಿಗಳಿಗೆ ಸರ್ಕಾರದ ಸಿಎಸ್‌ ಸೂಚನೆ, ಯಾವಾಗ ಆರಂಭ?

Published : Oct 28, 2026, 08:35 AM IST
Suvarna Vidhana Soudha

ಸಾರಾಂಶ

ಪ್ರಸಕ್ತ ಸಾಲಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 7ರಿಂದ 18ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಪೂರ್ವ ಸಿದ್ಧತೆಗಳನ್ನು ಆರಂಭಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರು: ಪ್ರಸಕ್ತ ಸಾಲಿನ ಚಳಿಗಾಲದ ಅಧಿವೇಶನವು ಡಿ.7ರಿಂದ 18ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದ್ದು, ಅದಕ್ಕೆ ಸಿದ್ಧತೆ ಆರಂಭಿಸುವಂತೆ ಅಧಿಕಾರಿಗಳಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಸೂಚನೆ ನೀಡಿದ್ದಾರೆ. ಪ್ರತಿಬಾರಿಯಂತೆ ಈ ಬಾರಿಯೂ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸಲು ಸರ್ಕಾರ ಮುಂದಾಗಿದೆ. ಅ.15ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಚಳಿಗಾಲದ ಅಧಿವೇಶನ ನಡೆಸುವ ಕುರಿತು ಚರ್ಚೆ ನಡೆಸಲಾಗಿತ್ತು. ಈ ವೇಳೆ ಡಿ.7ರಿಂದ 10 ದಿನ ಅಧಿವೇಶನ ನಡೆಸಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಅದರಂತೆ ಡಿ.7ರಿಂದ 18ರವರೆಗೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುವ ಸಾಧ್ಯತೆಯಿದ್ದು, ಅದಕ್ಕಾಗಿ ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿದ್ದಾರೆ.

ಚಳಿಗಾಲ ಅಧಿವೇಶನಕ್ಕೆ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಬೆಳಗಾವಿ

ಪ್ರಸಕ್ತ ಸಾಲಿನ ವಿಧಾನಮಂಡಳ ಚಳಿಗಾಲದ ಅಧಿವೇಶನವನ್ನು ಯಶಸ್ವಿಗೊಳಿಸಲು ಎಲ್ಲ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ಈ ಮೂಲಕ ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಳೆದ ಬುಧವಾರ ಜರುಗಿದ ಚಳಿಗಾಲ ಅಧಿವೇಶನ-2026ರ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಈ ಬಾರಿಯ ಚಳಿಗಾಲದ ಅಧಿವೇಶನದ ಸಿದ್ಧತೆಗೆ ಸಮಯಾವಕಾಶವಿದೆ. ಅಧಿವೇಶನದ ಯಶಸ್ಸಿಯಾಗಿ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಹೇಳಿದ್ದಾರೆ.

ಅಧಿವೇಶನದ ಯಶಸ್ಸಿಗೆ ಉಪ ಸಮಿತಿಗಳನ್ನು ರಚಿಸಲಾಗುವುದು. ಎಲ್ಲ ಅಧಿಕಾರಿಗಳು ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಅಧಿವೇಶನಕ್ಕೆ ಆಗಮಿಸುವ ಸಚಿವರು, ಗಣ್ಯರಿಗೆ ಸೂಕ್ತ ವಸತಿ, ಊಟ ಹಾಗೂ ಸಾರಿಗೆ ವ್ಯವಸ್ಥೆಯನ್ನು ಒದಗಿಸಬೇಕು. ಅಧಿವೇಶನಕ್ಕಾಗಿ ಆಗಮಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು, ಸಚಿವರಿಗೆ ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ನಿಗಾ ವಹಿಸಬೇಕು. ಅಧಿವೇಶನಕ್ಕೆ ಆಗಮಿಸುವ ಗಣ್ಯರಿಗೆ ಸೂಕ್ತ ವಸತಿ ವ್ಯವಸ್ಥೆ ಒದಗಿಸಬೇಕು.‌ ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ವಸತಿಗಾಗಿ ಗುರುತಿಸಲಾಗುವ ಹೋಟೆಲ್‌ಗಳ ಮಾಲೀಕರೊಂದಿಗೆ ಚರ್ಚಿಸಿ ಕೊಠಡಿಗಳನ್ನು ಕಾಯ್ದಿರಿಸುವಂತೆ ತಿಳಿಸಿದ್ದಾರೆ.

ಅಧಿವೇಶನದ ಸಂದರ್ಭದಲ್ಲಿ ಸುವರ್ಣ ವಿಧಾನಸೌಧದಲ್ಲಿ ಅಂತರ್ಜಾಲ ಸಂಪರ್ಕದಲ್ಲಿ ಯಾವುದೇ ಅಡೆತಡೆಗಳು ಆಗಬಾರದು. ಗಣ್ಯರು, ಅಧಿಕಾರಿಗಳು, ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ಅಧಿವೇಶನಕ್ಕೆ ಆಗಮಿಸುವ ಸಿಬ್ಬಂದಿಗಳ ವಸತಿ‌ ಪ್ರದೇಶಗಳಲ್ಲಿ ತುರ್ತು ವೈದ್ಯಕೀಯ ತಂಡಗಳನ್ನು ನಿಯೋಜಿಸಬೇಕು. ಒಟ್ಟಾರೆಯಾಗಿ ಪ್ರಸಕ್ತ ಚಳಿಗಾಲದ‌ ಅಧಿವೇಶನ ಸಂದರ್ಭದಲ್ಲಿ ಯಾವುದೇ ಲೋಪಗಳಿಗೆ ಆಸ್ಪದ‌ ನೀಡಬಾರದು. ಎಲ್ಲ ಇಲಾಖೆಯ ಅಧಿಕಾರಿ, ಸಿಬ್ಬಂದಿ ತಮ್ಮ‌ ಜವಾಬ್ದಾರಿಗಳನ್ನು ಅರಿತು ಅಧಿವೇಶನ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನಿರ್ದೇಶನ ನೀಡಿದ್ದಾರೆ.

ಸಭೆಯಲ್ಲಿ ಪೋಲಿಸ್ ಆಯುಕ್ತ ಪ್ರಕಾಶ ನಿಕಮ್, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಾಮರಾಜನ್.ಕೆ, ಪ್ರಶಿಕ್ಷಣಾರ್ಥಿ ಐಎಎಸ್ ಅಧಿಕಾರಿ ರೋಹಿತ್ ಸಿಂಗ್, ಅಪರ‌ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಡಿಸಿಪಿ ನಾರಾಯಣ ಬರಮನಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

49 ಕೊಟ್ರೆ ಸಾಕು, ಕೇವಲ 5 ನಿಮಿಷದಲ್ಲಿ ಹೆಲ್ಮೆಟ್ ಕ್ಲೀನ್ ಮೈಸೂರಿನ ಸ್ಟಾರ್ಟ್ ಅಪ್ ಹೊಸ ಪ್ರಯತ್ನ
ತಮಿಳುನಾಡು ನಿಷೇಧ, ಬೆಂಗಳೂರು ಬ್ಲೂಲೈನ್ ಮೆಟ್ರೋ ಕಾಮಗಾರಿ ಮತ್ತಷ್ಟು ತಡ! ಏರ್‌ಪೋರ್ಟ್ ಸಂಪರ್ಕ ಕಥೆಯೇನು?