ಶಕ್ತಿ ಯೋಜನೆಗೆ 2 ವರ್ಷ; ಮಹಿಳೆಯರಿಗೆ ಉಚಿತ ಟಿಕೆಟ್ ನೀಡಲು ₹12,092 ಕೋಟಿ ಖರ್ಚು!

Published : Jun 17, 2025, 01:30 PM IST
Shakti Scheme

ಸಾರಾಂಶ

ಶಕ್ತಿ ಯೋಜನೆಯಡಿ 478 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಪ್ರಯಾಣ. 12,092 ಕೋಟಿ ರೂ. ಮೌಲ್ಯದ ಉಚಿತ ಟಿಕೆಟ್ ವಿತರಣೆ. ಧಾರ್ಮಿಕ ಕೇಂದ್ರಗಳು ಮತ್ತು ಪ್ರವಾಸಿ ತಾಣಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಳ.

ಬೆಂಗಳೂರು (ಜೂ.17): ಕರ್ನಾಟಕ ಸರ್ಕಾರವು ಶಕ್ತಿ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದು 2 ವರ್ಷಗಳು ಪೂರ್ಣಗೊಂಡಿದ್ದು, ಈವರೆಗೂ (16.06.2025) 478 ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ನಿಗಮದಲ್ಲಿ ಬಸ್ಸುಗಳಲ್ಲಿ ಪ್ರಯಾಣಿಸಿದ್ದಾರೆ. ಇದೀಗ ಮಹಿಳೆಯರು ಸಂಚರಿಸಿದ ಉಚಿತ ಟಿಕೆಟ್ ಮೌಲ್ಯ 12,092 ಕೋಟಿ ರೂ.ಗಳಾಗಿರುತ್ತದೆ.

ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ನೀಡಿದ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರಿಗೆ ಸರ್ಕಾರಿ ಸಾರಿಗೆ ನಿಗಮದಲ್ಲಿ ಉಚಿತ ಪ್ರಯಾಣದ ಭರವಸೆ ನೀಡಿತ್ತು. ಪಂಚ ಗ್ಯಾರಂಟಿಗಳ ಭರವಸೆಯಿಂದ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಮೊದಲು ಶಕ್ತಿ ಯೋಜನೆ ಜಾರಿಗೆ ತಂದಿದೆ. ಈ ಶಕ್ತಿ ಯೋಜನೆ ಜಾರಿಗೆ ಬಂದು ಇದೀಗ 2 ವರ್ಷಗಳು ಪೂರ್ಣಗೊಂಡಿದೆ. ನಮ್ಮ ರಾಜ್ಯದಲ್ಲಿ ಸರಿಸುಮಾರು 3.5 ಕೋಟಿ ಮಹಿಳಾ ಜನಸಂಖ್ಯೆಯಿದೆ. ಅಂದರೆ, ಪ್ರತಿನಿತ್ಯ ರಾಜ್ಯ ಸಾರಿಗೆ ಸಂಸ್ಥೆಯ 4 ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಹಾಗೂ ಬಿಎಂಟಿಸಿ ಸೇರಿ ಎಲ್ಲ ನಿಗಮಗಳಲ್ಲಿ ಸರಾಸರಿ 65,47,945.20 ಮಹಿಳೆಯರು ಸಂಚಾರ ಮಾಡಿದಂತಾಗಿದೆ.

ಧಾರ್ಮಿಕ ಕೇಂದ್ರ ಹಾಗೂ ಪ್ರವಾಸಿ ತಾಣಗಳು ಹೌಸ್‌ಫುಲ್:

ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮಾಡಲು ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಮಹಿಳೆಯರ ಪ್ರಯಾಣದ ಮಟ್ಟ ಹೆಚ್ಚಾಗಿದೆ. ರಾಜ್ಯದಾದ್ಯಂತ ಎಲ್ಲ ಧಾರ್ಮಿಕ ಕೇಂದ್ರಗಳು ಹಾಗೂ ಪ್ರವಾಸಿ ತಾಣಗಳು ಬಹುತೇಕವಾಗಿ ಭರ್ತಿಯಾಗುತ್ತಿವೆ. ಇನ್ನು ಮಹಿಳೆಯರು ತಮ್ಮ ಬಳಿ ಇರುವ ಸರ್ಕಾರದಿಂದ ನೀಡಲಾಗಿರುವ ಭಾವಚಿತ್ರವಿರುವ ಅಧಿಕೃತ ಗುರುತಿನ ಚೀಟಿಗಳಾದ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪ್ಯಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಸೇರಿ ಇತರೆ ಚೀಟಿಗಳನ್ನು ಕಂಡಕ್ಟರ್‌ಗೆ ತೋರಿಸಿ ಉಚಿತವಾಗಿ ಪ್ರಯಾಣ ಮಾಡಬಹುದು. 

ಸಾರಿಗೆ ಸುರಕ್ಷಾ ರೂ. 1 ಕೋಟಿ ಅಪಘಾತ ಪರಿಹಾರ ವಿಮಾ ಯೋಜನೆ:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ತನ್ನ ಸಿಬ್ಬಂದಿಗಳ ಅವಲಂಬಿತರ ಜೀವನಕ್ಕೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕರ್ತವ್ಯದಲ್ಲಿರುವಾಗ ಅಥವಾ ಕರ್ತವ್ಯದಲ್ಲಿಲ್ಲದ ಸಂದರ್ಭದಲ್ಲಿ ಅಪಘಾತದಿಂದ ಮೃತಪಟ್ಟಲ್ಲಿ ರೂ.1 ಕೋಟಿ ಅಪಘಾತ ವಿಮಾ ಪರಿಹಾರ ಒದಗಿಸುವ ಸಾರಿಗೆ ಸುರಕ್ಷಾ ಅಪಘಾತ ವಿಮಾ ಯೋಜನೆಯನ್ನು ಜಾರಿಗೆ ತಂದಿರುತ್ತದೆ. ಇದುವರೆವಿಗೂ 26 ಜನ ನೌಕರರ ಕುಟುಂಬದವರಿಗೆ ತಲಾ ರೂ. 1 ಕೋಟಿಗಳ ಅಪಘಾತ ವಿಮಾ ಮೊತ್ತವನ್ನು ವಿತರಿಸಲಾಗಿದ್ದು, ಈವರೆಗೂ 26 ಸಿಬ್ಬಂದಿಗಳ ಅವಲಂಭಿತರಿಗೆ ಒಟ್ಟು ರೂ.26 ಕೋಟಿ ಪರಿಹಾರ ನೀಡಲಾಗಿದೆ.

ನೌಕರರ ಕುಟುಂಬ ಕಲ್ಯಾಣ ಪರಿಹಾರ ಯೋಜನೆ: ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಮತ್ತಿತರ ಕಾರಣಗಳಿಂದ ಮರಣವನ್ನಪ್ಪುವ ನೌಕರರ ಸಂಖ್ಯೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿರುವ ವಿಷಯವನ್ನು ಮನಗಂಡು, ಈ ಕಾರಣದಿಂದ ಮೃತರಾಗುವ ಕುಟುಂಬದ ಅವಲಂಬಿತರು ಅನುಭವಿಸುವ ಕಷ್ಟಗಳನ್ನು ಗಮನಿಸಲಾಗಿದೆ. 

ನೌಕಕರಿಗೆ ನೆರವಾಗಲು ಹೆಚ್ಚಿನ ಮೊತ್ತದ ಪರಿಹಾರವನ್ನು ನೀಡುವ ಸದುದ್ದೇಶದಿಂದ ಹಾಗೂ ವಿವಿಧ ಕಾರ್ಮಿಕ ಸಂಘಟನೆಗಳಿಂದ ಬೇಡಿಕೆ ಬಂದ ಹಿನ್ನಲೆಯಲ್ಲಿ ನೌಕರರ ಕುಟುಂಬ ಕಲ್ಯಾಣ ಯೋಜನೆಯಡಿ ನೀಡಲಾಗುತ್ತಿದ್ದ ಪರಿಹಾರ ಮೊತ್ತವಾದ ರೂ. 3 ಲಕ್ಷಗಳನ್ನು ದಿನಾಂಕ: 01.11.2023 ರಿಂದ ರೂ.10 ಲಕ್ಷಗಳಿಗೆ ಹೆಚ್ಚಿಸಿ ಮರಣ ಪ್ರಕರಣಗಳಿಗೆ ಅನ್ವಯವಾಗುವಂತೆ ಜಾರಿಗೆ ತರಲಾಗಿರುತ್ತದೆ. ಈ ಪರಿಷ್ಕೃತ ಪರಿಹಾರ ಯೋಜನೆ ಅಡಿ ಇದುವರೆವಿಗೂ 125 ಪ್ರಕರಣಗಳಲ್ಲಿ ತಲಾ ರೂ.10 ಲಕ್ಷಗಳಂತೆ ಒಟ್ಟು ರೂ.12.5 ಕೋಟಿಗಳ ಪರಿಹಾರ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌