ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಸುತ್ತಲೂ ಹಲವೆಡೆ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಅನಾಮಿಕ ವ್ಯಕ್ತಿ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಾಕ್ಷಿ ದೂರುದಾರ ನೀಡಿದ ಸೂಚನೆಯಂತೆ ಏಳು ಮತ್ತು ಎಂಟನೇ ಸ್ಥಳಗಳಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಅಗೆದು ಪರಿಶೀಲನೆ ನಡೆಸಿದರೂ ಯಾವುದೇ ಅವಶೇಷಗಳು ಲಭಿಸಿಲ್ಲ. ಏಳು ಮತ್ತು ಎಂಟನೆಯ ಸ್ಥಳಗಳು ನದಿ ಬದಿಯಲ್ಲಿಯೇ ಇದ್ದು ಮರಳು ಮಿಶ್ರಿತ ಮಣ್ಣಾದ ಕಾರಣ ಸುಲಭವಾಗಿ ಅಗೆದು ಕಾರ್ಯಾಚರಣೆ ನಡೆಸಲಾಯಿತು. ಶುಕ್ರವಾರವೂ ಕಾರ್ಯಾಚರಣೆ ವೀಕ್ಷಿಸಲು ಜನಜಂಗುಳಿ ಸೇರಿತ್ತು. ಅನಾಮಿಕ ಗುರುತಿಸಿದ 13 ಜಾಗಗಳ ಪೈಕಿ ಈವರೆಗೂ ಒಂದರಿಂದ ಎಂಟರವರೆಗಿನ ಸ್ಥಳಗಳು ನದಿ ಬದಿಯಲ್ಲಿಯೇ ಇವೆ. ಅಗೆದ ಪ್ರದೇಶಗಳಲ್ಲಿ ಕೇವಲ ಆರನೇಯ ಸ್ಥಳದಲ್ಲಿ ಮಾತ್ರ ಒಂದು ಅವಶೇಷ ಪತ್ತೆಯಾಗಿತ್ತು. ಶನಿವಾರ ಅಂದರೆ ಇಂದು ನದಿ ಬದಿಯಿಂದ ಮೇಲ್ಬಾಗದಲ್ಲಿ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿರುವ ಅರಣ್ಯ ಪ್ರದೇಶದಲ್ಲಿ ಇರುವ ಒಂಬತ್ತನೆಯ ಸ್ಥಳದಿಂದ ಅಗೆಯುವ ಕಾರ್ಯ ಆರಂಭವಾಗಲಿದೆ.

09:26 PM (IST) Aug 02
09:02 PM (IST) Aug 02
ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಸಾಧ್ಯತೆಗಳ ಕುರಿತು ಅಧ್ಯಯನ ನಡೆಸಲು ರಾಜ್ಯ ಸರ್ಕಾರ ಸಮಿತಿ ರಚಿಸಿದೆ. ಈ ಸಮಿತಿ ಆಂಧ್ರಪ್ರದೇಶದಲ್ಲಿ ಅನುಸರಿಸಿದ ಮಾದರಿಯನ್ನು ಅಧ್ಯಯನ ಮಾಡಿ ಮೂರು ತಿಂಗಳೊಳಗೆ ವರದಿ ಸಲ್ಲಿಸಲಿದೆ.
08:48 PM (IST) Aug 02
08:37 PM (IST) Aug 02
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಬಗ್ಗೆ 'ಭೀಮ' ಎಂಬುವವರ ದೂರಿನ ತನಿಖೆ ನಡೆಯುತ್ತಿರುವಾಗಲೇ, ಹೊಸ ದೂರು ದಾಖಲಾಗಿದೆ. ಸಾಮಾಜಿಕ ಹೋರಾಟಗಾರ ಜಯನ್ ಟಿ, 15 ವರ್ಷಗಳ ಹಿಂದೆ ಹೆಣ್ಣು ಮಗಳ ಅನುಮಾನಾಸ್ಪದ ಸಾವಿನ ಬಗ್ಗೆ ದೂರು ನೀಡಿದ್ದಾರೆ.
08:35 PM (IST) Aug 02
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಗ್ರಾಹಕ ಅನುಭವದಲ್ಲಿ ಏರ್‌ಪೋರ್ಟ್ಸ್ ಕೌನ್ಸಿಲ್ ಇಂಟರ್‌ನ್ಯಾಷನಲ್‌ನಿಂದ ಲೆವೆಲ್-4 ಮಾನ್ಯತೆ ಪಡೆದಿದೆ. ಫೆಬ್ರವರಿಯಲ್ಲಿ ಲೆವೆಲ್-3 ಪಡೆದಿದ್ದ ವಿಮಾನ ನಿಲ್ದಾಣವು ಈಗ ಮುಂದಿನ ಹಂತಕ್ಕೆ ಏರಿದೆ.
08:02 PM (IST) Aug 02
ಈ ಪ್ರಕರಣವು 2021 ರಲ್ಲಿ ಹಾಸನದ ಗನ್ನಿಕಾಡಾದ ಫಾರ್ಮ್‌ಹೌಸ್‌ನಲ್ಲಿ ಮತ್ತು ಬೆಂಗಳೂರಿನ ಪ್ರಜ್ವಲ್ ಅವರ ನಿವಾಸದಲ್ಲಿ ನಡೆದ ಎರಡು ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದೆ.
08:01 PM (IST) Aug 02
07:43 PM (IST) Aug 02
Prajwal Revanna Case Judgement: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾ*ಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ತೀರ್ಪಿಗೆ ಕಾಂಗ್ರೆಸ್ 'ಮಾಡಿದ್ದುಣ್ಣೋ ಮಾರಾಯ' ಎಂದು ಪ್ರತಿಕ್ರಿಯಿಸಿದೆ. ನ್ಯಾಯಾಲಯವು 11.5 ಲಕ್ಷ ದಂಡವನ್ನೂ ವಿಧಿಸಿದೆ.
07:35 PM (IST) Aug 02
ಕರ್ನಾಟಕದಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರ ಸರ್ಕಾರ ಇನ್ನೂ ಅನುಮೋದನೆ ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವರು ಲೋಕಸಭೆಯಲ್ಲಿ ತಿಳಿಸಿದ್ದಾರೆ. ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಲು ರಾಜ್ಯ ಸರ್ಕಾರ ಪದೇ ಪದೇ ಮನವಿ ಮಾಡಿದ್ದರೂ, ಕೇಂದ್ರದಿಂದ ಇನ್ನೂ ಸ್ಪಂದನೆ ಸಿಕ್ಕಿಲ್ಲ.
07:01 PM (IST) Aug 02
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಅಪರಾಧಿಗೆ ಶಿಕ್ಷೆಯಾದರೂ, ಅಪರಾಧ ಮುಚ್ಚಿಟ್ಟವರಿಗೆ ಶಿಕ್ಷೆಯಾಗದಿರುವುದನ್ನು ಪ್ರಶ್ನಿಸಿ ನಟ ಪ್ರಕಾಶ್ ರೈ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
06:35 PM (IST) Aug 02
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾ*ಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಈ ತೀರ್ಪಿನ ಕುರಿತು ನಟ ಚೇತನ್ ಕುಮಾರ್ ಮತ್ತು ನಟಿ ರಮ್ಯಾ ಪ್ರತಿಕ್ರಿಯಿಸಿದ್ದಾರೆ. ನ್ಯಾಯ ವ್ಯವಸ್ಥೆಯ ಮೇಲಿನ ನಂಬಿಕೆ ಪುನಃಸ್ಥಾಪನೆಯಾಗಿದೆ ಎಂದು ಚೇತನ್ ಹೇಳಿದ್ದಾರೆ.
06:31 PM (IST) Aug 02
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾ1ಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಎಸ್ಐಟಿ ತಂಡವು ತನಿಖೆಯ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ಬಹಿರಂಗಪಡಿಸಿದೆ. ಸಂತ್ರಸ್ಥೆಯ ಸಹಕಾರದಿಂದ ನ್ಯಾಯ ದೊರಕಿದೆ ಎಂದು ಎಸ್ಐಟಿ ಮುಖ್ಯಸ್ಥರು ತಿಳಿಸಿದ್ದಾರೆ.
06:25 PM (IST) Aug 02
ಬೆಂಗಳೂರಿನಲ್ಲಿ ಮೆಟ್ರೋ ಮೂಲಕ ದಾನಿಯ ಅಂಗಾಂಗವನ್ನು ಸಾಗಿಸಿ ಯುವಕನಿಗೆ ಯಕೃತ್ ಕಸಿ ಮಾಡುವ ಮೂಲಕ ಜೀವದಾನ ನೀಡಲಾಗಿದೆ. ಸಂಚಾರ ದಟ್ಟಣೆಯನ್ನು ತಪ್ಪಿಸಲು ಮೆಟ್ರೋವನ್ನು ಬಳಸಲಾಯಿತು. ಲಿವರ್ ಸಾಗಣೆ ಪ್ರತಿ ಹೆಜ್ಜೆ ಹೇಗಿತ್ತು ನೋಡಿ…
06:17 PM (IST) Aug 02
ಹೆಚ್ಚಿನ ವೀಡಿಯೊಗಳನ್ನು ಪ್ರಜ್ವಲ್ ಸ್ವತಃ ತಮ್ಮ ಬಲಗೈಯಿಂದ ಚಿತ್ರೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ, ತಂಡವು ಜಪಾನ್ ಮತ್ತು ಟರ್ಕಿಯಂತಹ ದೇಶಗಳಲ್ಲಿ ಯಶಸ್ವಿಯಾಗಿ ಬಳಸಲಾಗುವ ತನಿಖಾ ತಂತ್ರಗಳನ್ನು ಎರವಲು ಪಡೆದುಕೊಂಡಿದೆ ಎಂದು ಮೂಲಗಳು ತಿಳಿಸಿವೆ.
06:04 PM (IST) Aug 02
ಲೋಕಸಭಾ ಚುನಾವಣೆಗೂ ಮುನ್ನ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಕಲೆ ವಿಡಿಯೋಗಳು ವೈರಲ್ ಆಗಿದ್ದವು. ವಿದೇಶದಿಂದ ಬಂದಿಳಿದ ಪ್ರಜ್ವಲ್ ರೇವಣ್ಣನನ್ನು ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
05:22 PM (IST) Aug 02
05:13 PM (IST) Aug 02
05:12 PM (IST) Aug 02
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಅತ್ಯಾ*ಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ನಟಿ ರಮ್ಯಾ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.
04:16 PM (IST) Aug 02
ಕೆ.ಆರ್. ನಗರದ ಮನೆಗೆಲಸದವಳ ಮೇಲಿನ ಅತ್ಯಾ1ಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಸಾಬೀತಾಗಿದೆ. ಶಿಕ್ಷೆ ಪ್ರಮಾಣ ಪ್ರಕಟವಾಗಿದ್ದು, ಮುಂದಿನ ಕಾನೂನು ಹೋರಾಟದ ಬಗ್ಗೆ ತಿಳಿಯಿರಿ.
03:00 PM (IST) Aug 02
ಆಗಸ್ಟ್‌ನಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗಿಗಳಿಗೆ ಸಾಲು ಸಾಲು ರಜೆಗಳು ಬರುತ್ತಿವೆ. ಮುಂದಿನ ವಾರ ಕೇವಲ 4 ದಿನಗಳು ಮಾತ್ರ ಶಾಲೆಗಳು ನಡೆಯಲಿದ್ದು, 3 ದಿನಗಳು ರಜಾ ದಿನಗಳಾಗಿವೆ. ಯಾವ ದಿನ ಏಕೆ ರಜೆ? ಇದೆ ಎಂದು ಇಲ್ಲಿ ತಿಳಿದುಕೊಳ್ಳೋಣ.
02:33 PM (IST) Aug 02
01:26 PM (IST) Aug 02
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾ1ಚಾರ ಪ್ರಕರಣದ ವಿಚಾರಣೆ ಬೆಂಗಳೂರಿನಲ್ಲಿ ಆರಂಭವಾಗಿದೆ. ಪ್ರಾಸಿಕ್ಯೂಷನ್ ಮತ್ತು ಆರೋಪಿ ಪರ ವಕೀಲರ ವಾದಗಳು ಮುಕ್ತಾಯಗೊಂಡಿವೆ. ಶಿಕ್ಷೆ ಪ್ರಮಾಣವನ್ನು ಇಂದು ಪ್ರಕಟಿಸುವ ಸಾಧ್ಯತೆ ಇದೆ.
12:55 PM (IST) Aug 02
12:23 PM (IST) Aug 02
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಅತ್ಯಾ1ಚಾರ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ. ಇಂದು ಮತ್ತೆ ವಿಚಾರಣೆ ನಡೆಸಿದ ಕೋರ್ಟ್ ಶಿಕ್ಷೆಯ ಪ್ರಮಾಣವನ್ನು ಮಧ್ಯಾಹ್ನ 2.45ಕ್ಕೆ ಪ್ರಕಟಿಸುವುದಾಗಿ ಹೇಳಿದೆ. ಹೀಗಾಗಿ ಇಂದು ಮಧ್ಯಾಹ್ನ ಶಿಕ್ಷೆಯ ಪ್ರಮಾಣ ಪ್ರಕಟಗೊಳ್ಳಲಿದೆ.
12:21 PM (IST) Aug 02
12:07 PM (IST) Aug 02
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ದೂರು ನೀಡಿದ ವ್ಯಕ್ತಿಗೆ ಬೆದರಿಕೆ ಹಾಕಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಎಸ್‌ಐಟಿ ತನಿಖಾ ತಂಡದ ಇನ್ಸ್‌ಪೆಕ್ಟರ್ ಒಬ್ಬರು ದೂರು ವಾಪಸ್ ಪಡೆಯುವಂತೆ ಒತ್ತಡ ಹೇರುತ್ತಿದ್ದಾರೆ ಎಂದು ದೂರುದಾರರು ವಕೀಲರ ಮೂಲಕ ತಿಳಿಸಿದ್ದಾರೆ.
11:32 AM (IST) Aug 02
11:05 AM (IST) Aug 02
10:38 AM (IST) Aug 02
10:21 AM (IST) Aug 02
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರಿಗೆ ವಿಮಾ ಪರಿಹಾರ ನಿರಾಕರಿಸಲು ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಮೋಟಾರು ವಾಹನ ಕಾಯ್ದೆಗೆ ತಿದ್ದುಪಡಿ ತಂದು ಮದ್ಯಪಾನ ಚಾಲನೆ ಪ್ರಕರಣಗಳಲ್ಲಿ ವಿಮಾ ಕಂಪನಿಗಳ ಹೊಣೆಗಾರಿಕೆಯಿಂದ ಮುಕ್ತಿ ನೀಡಬೇಕೆಂದು ನ್ಯಾಯಾಲಯ ಹೇಳಿದೆ.
08:24 AM (IST) Aug 02
ಹೊಳೆಹೊನ್ನೂರು ಸಮೀಪದ ಕೂಡ್ಲಿ ಗ್ರಾಮದ ಪಾರ್ವತಿ ಬ್ರಹ್ಮೇಶ್ವರ ದೇವಸ್ಥಾನದ ಅರ್ಚಕರಿಗೆ ನೀಡಲಾಗಿದ್ದ ಸರ್ಕಾರಿ ಚೆಕ್ ಬೌನ್ಸ್ ಆಗಿದೆ. ₹35,600 ಮೌಲ್ಯದ ಚೆಕ್‌ನಲ್ಲಿ ಹಣವಿಲ್ಲದ ಕಾರಣ ಅರ್ಚಕರು ಜೀವನ ನಿರ್ವಹಣೆ ಕಷ್ಟಕರ ಎಂದು ಅಳಲು ತೋಡಿಕೊಂಡಿದ್ದಾರೆ.
07:53 AM (IST) Aug 02
07:38 AM (IST) Aug 02