ಹಾವೇರಿ ಜಿಲ್ಲಾಧಿಕಾರಿ ವರ್ಗಾವಣೆಗೆ ಕಸಾಪ ಅಧ್ಯಕ್ಷ ಜೋಶಿ ವಿರೋಧ

Published : Oct 23, 2022, 12:06 PM IST
ಹಾವೇರಿ ಜಿಲ್ಲಾಧಿಕಾರಿ ವರ್ಗಾವಣೆಗೆ ಕಸಾಪ ಅಧ್ಯಕ್ಷ ಜೋಶಿ ವಿರೋಧ

ಸಾರಾಂಶ

ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಒಂದಾದ ಮೇಲೊಂದು ಸಮಸ್ಯೆಗಳು ಸೃಷ್ಟಿಯಾಗುತ್ತಿರುವುದನ್ನು ನೋಡಿದರೆ ಇದೊಂದು ಶಾಪಗ್ರಸ್ತ ಸಮ್ಮೇಳನವಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್‌ ಜೋಶಿ ಬೇಸರ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು (ಅ.23): ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಒಂದಾದ ಮೇಲೊಂದು ಸಮಸ್ಯೆಗಳು ಸೃಷ್ಟಿಯಾಗುತ್ತಿರುವುದನ್ನು ನೋಡಿದರೆ ಇದೊಂದು ಶಾಪಗ್ರಸ್ತ ಸಮ್ಮೇಳನವಾಗುತ್ತಿದೆ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಮಹೇಶ್‌ ಜೋಶಿ ಬೇಸರ ವ್ಯಕ್ತಪಡಿಸಿದ್ದಾರೆ. 

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೆ ಹಲವು ಸಲ ದಿನಾಂಕ ನಿಗದಿಪಡಿಸಿ, ಮುಂದೂಡಲಾಗುತ್ತಿದೆ. ಇದೀಗ 2023ರ ಜನವರಿ ಮೊದಲ ವಾರದಲ್ಲಿ ಸಮ್ಮೇಳನ ಆಯೋಜಿಸಲು ದಿನಾಂಕ ನಿಗದಿಯಾಗಿದೆ. ಸಮ್ಮೇಳನದ ಯಶಸ್ಸಿಗೆ ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿಯೇ ಹಾವೇರಿ ಜಿಲ್ಲಾಧಿಕಾರಿಯಾಗಿದ್ದ ಎಸ್‌.ಬಿ.ಶೆಟ್ಟಣ್ಣ ಅವರನ್ನು ವರ್ಗಾವಣೆ ಮಾಡಿರುವುದು ಸರಿಯಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಆಡಳಿತ ಸುಧಾರಣೆ ಹೆಸರಿನಲ್ಲಿ ಶುಕ್ರವಾರ ಕೆಲ ಐಎಎಸ್‌ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದೆ. 

ನ.11ಕ್ಕೆ ಹಾವೇರಿ ಸಾಹಿತ್ಯ ಸಮ್ಮೇಳನ ಅಸಾಧ್ಯ: ಮಹೇಶ್‌ ಜೋಶಿ

ಆಡಳಿತದ ಹಿತದೃಷ್ಟಿಯಿಂದ ಅಧಿಕಾರಿಗಳು, ಸಿಬ್ಬಂದಿಗಳನ್ನು ವರ್ಗಾವಣೆ ಮಾಡುವುದಕ್ಕೆ ಯಾವುದೇ ಆಕ್ಷೇಪ ಇಲ್ಲ. ಆದರೆ ಕೆಲವು ಮಹತ್ವದ ಯೋಜನೆಗಳು, ಕಾರ್ಯಕ್ರಮಗಳ ಜಾರಿಗೆ ಸಂಬಂಧಿಸಿದ ಅಧಿಕಾರಿಗಳು ಸಮರ್ಥವಾಗಿ ಕೆಲಸ ಮಾಡುತ್ತಿರುವಾಗ ಏಕಾಏಕಿ ಅಂತಹವರನ್ನು ವರ್ಗಾವಣೆ ಮಾಡುವುದು ಎಷ್ಟರ ಮಟ್ಟಿಗೆ ಸೂಕ್ತ ಎಂದು ಪ್ರಶ್ನಿಸಿದ್ದಾರೆ. ಹಾವೇರಿ ಜಿಲ್ಲಾಧಿಕಾರಿ ವರ್ಗಾವಣೆಯನ್ನು ಕೈಬಿಟ್ಟು, ಉದ್ದೇಶಿತ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಯಶಸ್ವಿಯಾಗಿ ನಡೆಯಲು ಅವಕಾಶ ಮಾಡಿಕೊಡಬೇಕು ಡಾ. ಮಹೇಶ ಜೋಶಿ ಸರ್ಕಾರವನ್ನು ಆಗ್ರಹಿಸಿದ್ದಾರೆ.

ನ.1ಕ್ಕೆ ಪ್ರತಿ ಮನೆಯಲ್ಲೂ ಕನ್ನಡ ಧ್ವಜ ಹಾರಿಸಿ: ಕನ್ನಡಿಗರ ಸ್ವಾಭಿಮಾನದ ಪ್ರತೀಕವಾದ ಕನ್ನಡದ ಧ್ವಜವನ್ನು ರಾಜ್ಯೋತ್ಸವದ ದಿನದಂದು ಎಲ್ಲ ಕನ್ನಡಿಗರು ತಮ್ಮ ಮನೆಯ ಮೇಲೆ ಹಾರಿಸುವ ಮೂಲಕ, ಕನ್ನಡದ ಕಣ್ವ ಬಿ.ಎಂ.ಶ್ರೀಕಂಠಯ್ಯ ಅವರು ರಚಿಸಿದ ‘ಏರಿಸಿ ಹಾರಿಸಿ ಕನ್ನಡದ ಬಾವುಟ, ಹಾರಿಸಿ ತೋರಿಸಿ ಕೆಚ್ಚೆದೆಯ ಬಾವುಟ’ ಎನ್ನುವಂತೆ ಅರ್ಥಪೂರ್ಣವಾಗಿ ಕನ್ನಡ ಪ್ರೇಮವನ್ನು ಮೆರೆಯೋಣ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕರೆ ನೀಡಿದೆ.

ನವೆಂಬರ್‌ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ಪ್ರತಿಯೊಬ್ಬ ಕನ್ನಡಿಗರು ಸಂಭ್ರಮದಿಂದ ಆಚರಿಸುತ್ತಾರೆ. ಅದರೊಂದಿಗೆ ಈ ಬಾರಿ ಪ್ರತಿಯೊಬ್ಬ ಕನ್ನಡಿಗನೂ ನಮ್ಮ ಭಾಷೆ, ಸಂಸ್ಕೃತಿ, ಪರಂಪರೆಯ ದ್ಯೋತಕವಾದ ಕನ್ನಡದ ಧ್ವಜವನ್ನು ಸ್ವಇಚ್ಛೆಯಿಂದ, ಹೆಮ್ಮೆಯಿಂದ ಮನೆ, ಮನೆಯ ಮೇಲೆ ಹಾರಿಸುವ ಮೂಲಕ ಕನ್ನಡದ ಹಬ್ಬವನ್ನು ಸಂಭ್ರಮಿಸೋಣ. ನಾಡಿನಾದ್ಯಂತ ಹಳದಿ ಕೆಂಪು ಬಣ್ಣವು ರಾರಾಜಿಸಲಿ, ಸ್ಫೂರ್ತಿಯ ಸೆಲೆ ಎಲ್ಲೆಡೆಯೂ ಪಸರಿಸಲಿ. ಎಲ್ಲರ ಮನ-ಮನೆಯಲ್ಲೂ ಕನ್ನಡತನ ಮೆರೆಯಲಿ ಎಂದು ಕಸಾಪ ಅಧ್ಯಕ್ಷ ಡಾ. ಮಹೇಶ ಜೋಶಿ ಆಶಯ ವ್ಯಕ್ತಪಡಿಸಿದ್ದಾರೆ. 

ನಾಡಗೀತೆಗೆ ಅವಮಾನ: ಕ್ರಮಕ್ಕೆ ಕಸಾಪ ಅಧ್ಯಕ್ಷ ಮಹೇಶ್‌ ಜೋಶಿ ಆಗ್ರಹ

ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ-ಕನ್ನಡಿಗ-ಕರ್ನಾಟಕ ಎನ್ನುವ ಧ್ಯೇಯದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯೋತ್ಸವದ ಈ ಸಂದರ್ಭದಲ್ಲಿ ಕನ್ನಡಿಗರೆಲ್ಲರೂ ಉತ್ಸಾಹದಿಂದ ಕನ್ನಡ ಹಬ್ಬದಲ್ಲಿ ಪಾಲ್ಗೊಳ್ಳೋಣ. ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಸಾರುವ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ರಾಜ್ಯೋತ್ಸವವನ್ನು ವೈಭವಪೂರ್ಣವಾಗಿ ಆಚರಿಸಬೇಕಾಗಿದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್