
ಮಂಗಳೂರು (ನ.20): ಗಡಿನಾಡು ಕಾಸರಗೋಡಿನಲ್ಲಿ ಪಡಿತರ ಚೀಟಿಯಲ್ಲಿ ಕನ್ನಡ ಭಾಷೆ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಕೇರಳ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಕಾರ್ಯದರ್ಶಿ ಅವರು ಇಲಾಖಾ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ಈ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ ಪ್ರಕಾಶ ಮತ್ತೀಹಳ್ಳಿ, ಕಾಸರಗೋಡು ಶಾಸಕ ಎನ್.ಎ.ನೆಲ್ಲಿಕುನ್ನು, ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್, ಸದಸ್ಯ ಎ.ಆರ್.ಸುಬ್ಬಯ್ಯ ಕಟ್ಟೆ ಭೇಟಿ ಮಾಡಿ ಕಾಸರಗೋಡು ಕನ್ನಡಿಗರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಮನವಿ ಸಲ್ಲಿಸಿದ್ದರು.
ಕಾಸರಗೋಡಿನಲ್ಲಿ ಎಲ್ಲ ಗುರುತಿನ ಚೀಟಿಗಳು ಮಲಯಾಳಂ ಹಾಗೂ ಇಂಗ್ಲಿಷ್ ಭಾಷೆಯಲ್ಲಿದ್ದು, ಭಾಷಾ ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಪರಿಗಣಿಸಿ, ರೇಶನ್ ಕಾರ್ಡ್ ಹಾಗೂ ಗುರುತಿನ ಚೀಟಿಗಳನ್ನು ಮುದ್ರಿಸುವಾಗ ಕನ್ನಡ ಭಾಷೆ ಅಳವಡಿಸುವಂತೆ ಕೋರಲಾಗಿತ್ತು.
ಅದರಂತೆ ಕೇರಳ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಕಾರ್ಯದರ್ಶಿ ಅವರು ತಮ್ಮ ಇಲಾಖೆಯ ಆಯುಕ್ತರಿಗೆ ಸೂಚನೆ ನೀಡಿದ್ದಾರೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ