KEA: ಇಂದಿನಿಂದ 22ರ ವರೆಗೆ ವಿವಿಧ ನೇಮಕಾತಿ ಪರೀಕ್ಷೆ: ಹುದ್ದೆಗಳು, ಪರೀಕ್ಷೆ ಸ್ಥಳ, ನಿಯಮಗಳ ವಿವರ ಇಲ್ಲಿದೆ

Kannadaprabha News   | Kannada Prabha
Published : Nov 20, 2026, 06:28 AM IST
KEA written exam schedule

ಸಾರಾಂಶ

KEA written exam schedule ನವೆಂಬರ್ 20 ರಿಂದ 22 ರವರೆಗೆ ವಿವಿಧ ಇಲಾಖೆಗಳ ಹುದ್ದೆಗಳಿಗೆ ಕೆಇಎ ಲಿಖಿತ ಪರೀಕ್ಷೆಗಳನ್ನು ನಡೆಸಲಿದೆ. ಪ್ರಾಂಶುಪಾಲರು, ಕಾರಾಗೃಹ ಮತ್ತು ಎಸ್‌ಡಿಎ ಹುದ್ದೆಗಳಿಗೆ ಪರೀಕ್ಷೆಗಳು ನಡೆಯಲಿದ್ದು, ವೆಬ್ ಕಾಸ್ಟಿಂಗ್ ಮೂಲಕ ತೀವ್ರ ನಿಗಾ ವಹಿಸಲಾಗಿದೆ.

ಬೆಂಗಳೂರು (ನ.20): ವಿವಿಧ ಇಲಾಖೆಗಳ ಹುದ್ದೆಗಳಿಗೆ ನ.20ರಿಂದ 22ರವರೆಗೆ ಲಿಖಿತ ಪರೀಕ್ಷೆಗಳನ್ನು ನಡೆಸಲು ಸಕಲ ಸಿದ್ದತೆ ಮಾಡಿಕೊಂಡಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

ಯಾವ್ಯಾವ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ?

ಪ್ರಾಂಶುಪಾಲರ ಹಾಗೂ ಕಾರಾಗೃಹ ಹಾಗೂ ಕೆಇಎ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ನ.20ರಂದು ಕನ್ನಡ ಪರೀಕ್ಷೆ ನಡೆಯಲಿದೆ. ಪ್ರಾಂಶುಪಾಲರ ಹುದ್ದೆಗೆ ಬೆಳಗಿನ ಅವಧಿಯಲ್ಲಿ ಕನ್ನಡ ಪರೀಕ್ಷೆ ನಡೆದರೆ ಮಧ್ಯಾಹ್ನದ ನಂತರ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದೆ. ಕನ್ನಡ ಪರೀಕ್ಷೆಯು ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ.

ಕೆಇಎ ಎಸ್‌ಡಿಎ ಪರೀಕ್ಷೆಗೆ 246 ಮಂದಿ ಅರ್ಜಿ

ಪ್ರಾಂಶುಪಾಲರ ಪರೀಕ್ಷೆಗೆ 2,850 ಮಂದಿ ಕಾರಾಗೃಹ ಮತ್ತು ಕೆಇಎ ಎಸ್‌ಡಿಎ ಪರೀಕ್ಷೆಗೆ 246 ಮಂದಿ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರು ಮತ್ತು ಕಲಬುರಗಿದಲ್ಲಿ ಪರೀಕ್ಷೆ ನಡೆಯಲಿದೆ. ಉಳಿಕೆ ಮೂಲ ವೃಂದಕ್ಕೆ ಸಂಬಂಧಿಸಿದಂತೆ ಕಾರಾಗೃಹ ಇಲಾಖೆಯ ವಿವಿಧ ಹುದ್ದೆಗಳಿಗೆ ನ.21ರಂದು ಸಾಮಾನ್ಯ ಜ್ಞಾನ ಪರೀಕ್ಷೆ ನಡೆಯಲಿದೆ. ಒಟ್ಟು 60,481 ಮಂದಿ ಅರ್ಜಿ ಸಲ್ಲಿಸಿದ್ದು, ಏಳು ಜಿಲ್ಲೆಗಳ 148 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.

ಪ್ರಾಂಶುಪಾಲರು, ಕಾರಾಗೃಹ, ಕೆಇಎ ಎಸ್‌ಡಿಎಗೆ ಕನ್ನಡ ಪರೀಕ್ಷೆ

ವಸತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ನ.22ರಂದು ಪರೀಕ್ಷೆ‌ ನಡೆಯಲಿದ್ದು, 84,581 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಅದೇ ದಿನ ಪಿಯು ಕಾಲೇಜಿನ ಪ್ರಾಂಶುಪಾಲರ ಹುದ್ದೆಯ ಪತ್ರಿಕೆ-2ರ ಪರೀಕ್ಷೆ ನಡೆಯಲಿದೆ. ಇದೇ ಹುದ್ದೆಗೆ ಡಿ.5ರಂದು ಪತ್ರಿಕೆ-3 ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.

ವೆಬ್ ಕಾಸ್ಟಿಂಗ್ ಮೂಲಕ ಪರೀಕ್ಷಾ ಕೇಂದ್ರಗಳ ಮೇಲೆ ತೀವ್ರ ನಿಗಾ ಇಡುವ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಪರೀಕ್ಷಾ ಉಸ್ತುವಾರಿಗಳಾಗಿರುತ್ತಾರೆ ಎಂದು ಅವರು ವಿವರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗೆ ಶುಭಸುದ್ದಿ: ಕೃಷಿ ಆದಾಯ ಹೆಚ್ಚಳಕ್ಕೆ ₹75 ಕೋಟಿ ವೆಚ್ಚದಲ್ಲಿ ‘ಸಿಎಂ ಕೃಷಿ ವಿಸ್ತಾರ’ ಯೋಜನೆಗೆ ಸಂಪುಟ ಅಸ್ತು
ಬಸವ ಮಂಟಪ ಪುಸ್ತಕ ವಿವಾದ: ಲೇಖಕ ರವಿ ಹಂಜ್ ವಿರುದ್ಧ ಎಫ್‌ಐಆರ್, ನಿನ್ನೆ ಏನೇನಾಯ್ತು?