ಬಿ.ಎಸ್.ಯಡಿಯೂರಪ್ಪ ಮಾಜಿ ಸಿಎಂ ಮಾತ್ರವಲ್ಲ, ನಾಳೆಯಿಂದ ಡಾಕ್ಟರ್‌ ಆಗಲಿದ್ದಾರೆ

By Sathish Kumar KH  |  First Published Jul 20, 2023, 3:52 PM IST

ಕರ್ನಾಟಕ ರೈತಪರ ಹೋರಾಟಗಾರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆಯಿಂದ ಮಾಜಿ ಸಿಎಂ ಮಾತ್ರವಲ್ಲ, ಡಾಕ್ಟರ್‌ ಬಿ.ಎಸ್.ಯಡಿಯೂರಪ್ಪ ಆಗಲಿದ್ದಾರೆ. 


ಶಿವಮೊಗ್ಗ (ಜು.20): ರಾಜ್ಯದಲ್ಲಿ ರೈತರ ಪರವಾಗಿ ಹೋರಾಟ ಮಾಡಿದ ಮತ್ತು ರಾಜ್ಯದ ಮುಖ್ಯಮಂತ್ರಿಯಾಗಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಇನ್ನುಮುಂದೆ ನಾವೆಲ್ಲರೂ ಡಾಕ್ಟರ್‌ ಯಡಿಯೂರಪ್ಪ ಅಂತ ಕರಿಬೇಕು. ಇದಕ್ಕೆ ಕಾರಣ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್‌ ಪದವಿ ಪ್ರಮಾಣ ಮಾಡುತ್ತಿದೆ.

ಹೌದು, ಜು.21ರಂದು ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪ ನಾಯಕ ಕೃಷಿ‌ ಮತ್ತು ತೋಟಗಾರಿಕೆ ವಿವಿ 8 ನೇ ಘಟಿಕೋತ್ಸವದಲ್ಲಿ ಮಾಜಿ‌ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರಿಗೆ ಗೌರವ ಡಾಕ್ಟರೇಟ್ ನೀಡಲಾಗುತ್ತಿದೆ‌. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ‌ ಅವರು ರೈತ ನಾಯಕ ಎಂದು ಕರೆಸಿಕೊಂಡವರು. ಇವರು ಮುಖ್ಯಮಂತ್ರಿಯಾಗಿದ್ದಾಗ ಪ್ರತ್ಯೇಕ ಕೃಷಿ ಆಯವ್ಯಯ ಮಂಡಿಸಿ  ದೇಶಕ್ಕೆ ಮಾದರಿಯಾಗಿದ್ದಾರೆ. ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಕ್ಷೇತ್ರದಲ್ಲಿ ವಿನೂತನ ಯೋಜನೆಗಳನ್ನು ಸಾಕಾರಗೊಳಿಸಿದ ಸಮಾಜಮುಖಿ‌ ಚಿಂತಕರಾಗಿದ್ದಾರೆ. 

Tap to resize

Latest Videos

ರೈತರಿಗೆ ಹೆಣ್ಣು ಕೊಡ್ತಿಲ್ಲ: ಕನ್ಯಾಭಾಗ್ಯ ಯೋಜನೆ ಜಾರಿಗೆ ತಂದು ಮದುವೆ ಮಾಡಿಸಿ

ಇನ್ನು ಪ್ರಮುಖವಾಗಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಆರಂಭಕ್ಕೆ ಮುನ್ನುಡಿ ಬರೆದಿದ್ದಾರೆ. ಆದ್ದರಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್‌ ಪ್ರಶಸ್ತಿ ಪ್ರದಾನ ಮಾಡಿ ಅವರನ್ನು ಗೌರವಿಸಲಿದೆ ಎಂದು ವಿವಿ ಕುಲಪತಿ ಡಾ.ಆರ್.ಸಿ.ಜಗದೀಶ ತಿಳಿಸಿದರು.

ಕುಲಪತಿ ಆರ್ ಸಿ ಜಗದೀಶ್ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ: ಶಿವಮೊಗ್ಗದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ವಿ.ಸಿ. ಜಗದೀಶ್ ಮಾತನಾಡಿ, ಕಳೆದ ಒಂದು ದಶಕದ ಹಿಂದೆ ವಿಶ್ವವಿದ್ಯಾಲಯ ಸ್ಥಾಪನೆಯಾಗಿದೆ. ವಿಶ್ವವಿದ್ಯಾಲಯದಲ್ಲಿ ಕೃಷಿ , ಅರಣ್ಯ ಮತ್ತು ತೋಟಗಾರಿಕೆಗೆ ಸಂಬಂದ ಪಟ್ಟ ಶಿಕ್ಷಣ ನೀಡಲಾಗುತ್ತಿದೆ. ಈ ಬಾರಿಯ ಘಟಿಕೋತ್ಸವದ ಅಧ್ಯಕ್ಷತೆಯನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ವಹಿಸಲಿದ್ದಾರೆ. ಕೃಷಿ ಸಚಿವರ ಎನ್. ಚಲುವರಾಯ ಸ್ವಾಮಿಯವರ ಗೌರವ ಉಪಸ್ಥಿತಿ ಇರಲಿದೆ. ಡಾ.ವೀರೇಂದ್ರ ಹೆಗ್ಗಡೆಯವರು ಮುಖ್ಯ ಅತಿಥಿಗಳಾಗಿ ಘಟಿಕೋತ್ಸವದ ಭಾಷಣ ನೀಡಲಿದ್ದಾರೆ. 

409 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ: ಇನ್ನು ವಿಶ್ವವಿದ್ಯಾಲಯದ 8ನೇ ಘಟಿಕೋತ್ಸದಲ್ಲಿ ಕೃಷಿ ,ತೋಟಗಾರಿಕೆ, ಅರಣ್ಯ ವಿಭಾಗಗಳಲ್ಲಿ 409 ವಿಧ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ. 101ವಿಧ್ಯಾರ್ಥಿಗಳು ಸ್ನಾತಕೋತ್ತರ ಪದವಿ ಹಾಗು 23 ವಿಧ್ಯಾರ್ಥಿಗಳು ಪಿಎಚ್ ಡಿ ಪದವಿ ಪಡೆಯುತ್ತಿದ್ದಾರೆ. ಅತ್ಯುತ್ತಮ ಶೈಕ್ಷಣಿಕ ಸಾಧನೆ ಮಾಡಿದ 8 ವಿಧ್ಯಾರ್ಥಿಗಳು ಚಿನ್ನದ ಪದಕಕ್ಕೆ ಭಾಜನರಾಗಿದ್ದು ಒಟ್ಟು 15 ಚಿನ್ನದ ಪದಕ ನೀಡಲಾಗುವುದು. ಒಟ್ಟಾರೆ ಈ ಬಾರಿಯ ಘಟಿಕೋತ್ಸವದಲ್ಲಿ 37 ಚಿನ್ನದ ಪದಕ‌ಗಳನ್ನು ನೀಡಲಾಗುವುದು ಎಂದರು.

ಬರ ಪೀಡಿತ ರಾಜ್ಯವೆಂದು ಘೋಷಿಸಲಿ: ಯಡಿಯೂರಪ್ಪ ಆಗ್ರಹ

ಸಂಸದ ವೀರೇಂದ್ರ ಹೆಗ್ಗಡೆ, ರಾಜ್ಯಪಾಲ ಥಾವರಚಂದ್‌ ಗೆಹ್ಲೋಟ್‌ ಭಾಗಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ 8ನೇ ಘಟಿಕೋತ್ಸವವನ್ನು ಜುಲೈ 21ರ 2023 (ಶುಕ್ರವಾರ) ರಂದು ಸಾಯಂಕಾಲ 04.00 ಗಂಟೆಗೆ ಇರುವಕ್ಕಿ ಆವರಣದಲ್ಲಿ ನಿಗದಿಪಡಿಸಲಾಗಿದೆ. ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ ಧರ್ಮಾಧಿಕಾರಿಯಾದ  ಪದ್ಮವಿಭೂಷಣ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು, ಘಟಿಕೋತ್ಸವದ ಮುಖ್ಯ ಅತಿಥಿಗಳಾಗಿ ಆಗಮಿಸಿ ಘಟಿಕೋತ್ಸವ ಭಾಷಣ ನೆರವೇರಿಸಲು ಒಪ್ಪಿಗೆ ನೀಡಿರುತ್ತಾರೆ. ಜೊತೆಎ, ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್‌ ಚಂದ್ ಗೆಫ್ಲೋಟ್ ಘಟಿಕೋತ್ಸವದ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಕ್ಷಮ ಪದವಿ ಸ್ವೀಕರಿಸುವ ಚಿನ್ನದ ಪದಕ ವಿಜೇತರು ಕಾರ್ಯಕ್ರಮದಲ್ಲಿ ಮತ್ತು ಘಟಿಕೋತ್ಸವದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು. ಮುಂದುವರೆದು ಘಟಿಕೋತ್ಸವದ ಕಾರ್ಯಕ್ರಮದಲ್ಲಿ ಬಿಳಿ ಮತ್ತು ಬಿಳಿ (White & White dress) ಸಮವಸ್ತ್ರವನ್ನು ಧರಿಸತಕ್ಕದ್ದು ಎಂದು ಕುಲಪತಿ ತಿಳಿಸಿದ್ದಾರೆ. 

click me!