
ಮಂಡ್ಯ (ಅ.30): ಕೇರಳದ ಚರ್ಚ್‌ನಲ್ಲಿ ಬಾಂಬ್ ಸ್ಫೋಟಗೊಂಡ ಹಿನ್ನೆಲೆ ಕರ್ನಾಟಕದ ಗಡಿಭಾಗ ಹಾಗೂ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಇಲಾಖೆ ಹೈಅಲರ್ಟ್ ಆಗಿದೆ.
ಮಂಡ್ಯದ ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ಕೆಆರ್‌ಎಸ್ ಬೃಂದಾವನದಲ್ಲಿ ಹೈಅಲರ್ಟ್ ಆಗಿರುವ ಪೊಲೀಸ್ ಸಿಬ್ಬಂದಿ. ಕೆಆರ್‌ಎಸ್ ಡ್ಯಾಂ ವೀಕ್ಷಣೆಗೆ ಬರುವ ಪ್ರತಿಯೊಬ್ಬ ಪ್ರವಾಸಿಗರನ್ನು ತೀವ್ರ ತಪಾಸಣೆ ನಡೆಸುತ್ತಿರುವ ಭದ್ರತಾ ಪಡೆ ಸಿಬ್ಬಂದಿ. ಪಿಎಸ್‌ಐ ಶ್ಯಾಮಲಾ ನೇತೃತ್ವದಲ್ಲಿ ತಪಾಸಣೆ. ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯಿಂದ ಪ್ರವಾಸಿಗರ ಚಲನವಲನದ ಮೇಲೆ ತೀವ್ರ ನಿಗಾ ಇಡಲಾಗಿದೆ. ಗೇಟ್ ಬಳಿಯೇ ತಪಾಸಣೆ ನಡೆಸಿ ಒಳಗೆ ಬಿಡುತ್ತಿರುವ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ ಸಿಬ್ಬಂದಿ. ಮೆಟಲ್ ಡಿಟೆಕ್ಟರ್ ಬಳಸಿ ಪ್ರವಾಸಿಗರು ಬ್ಯಾಗ್, ಬಾಡಿ ತಪಾಸಣೆ ನಡೆಸಿ ಒಳಬಿಡುತ್ತಿರುವ ಸಿಬ್ಬಂದಿ.
ಕೇರಳ ಬಾಂಬ್ ಸ್ಫೋಟದಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿಕೆ, ಐವರ ಸ್ಥಿತಿ ಚಿಂತಾಜನಕ!
ಕೆಆರ್‌ಎಸ್ ಡ್ಯಾಂ ನೋಡಲೆಂದೇ ಪ್ರತಿನಿತ್ಯ ಸಾವಿರಾರು ಸಂಖ್ಯೆಯಲ್ಲಿ ಬರುವ ಪ್ರವಾಸಿಗರು. ರಾಜ್ಯ ಮಾತ್ರವಲ್ಲದೇ ಹೊರರಾಜ್ಯಗಳಿಂದ ಪ್ರವಾಸಿಗರು ಬರುತ್ತಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪ್ರತಿಯೊಬ್ಬರನ್ನೂ ತಪಾಸಣೆ ನಡೆಸಿ ಒಳಬಿಡುತ್ತಿರುವ ಸಿಬ್ಬಂದಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ