ಬೈರಕುಪ್ಪ ಸೇತುವೆ: ಕರ್ನಾಟಕ-ಕೇರಳ ಸಂಪರ್ಕ, ದಶಕದ ಕನಸಿಗೆ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ಮರುಜೀವ!

Gowthami K   | Kannada Prabha
Published : Jun 28, 2026, 08:53 AM IST
Priyanka Gandhi

ಸಾರಾಂಶ

ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಅವರು, ಕರ್ನಾಟಕ ಮತ್ತು ಕೇರಳವನ್ನು ಸಂಪರ್ಕಿಸುವ ಬೈರಕುಪ್ಪ ಸೇತುವೆ ಯೋಜನೆಯನ್ನು ತ್ವರಿತಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಬಂಡೀಪುರ ಅರಣ್ಯ ಮಾರ್ಗವನ್ನು ತಪ್ಪಿಸಿ, ಕಬಿನಿ ನದಿಗೆ ಅಡ್ಡಲಾಗಿ ಸೇತುವೆ ನಿರ್ಮಿಸುವ ಈ ಯೋಜನೆಯು 30 ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು.

ವಯನಾಡ್‌: ಕರ್ನಾಟಕ ಮತ್ತು ಕೇರಳವನ್ನು ಸಂಪರ್ಕಿಸಲಿರುವ ಬೈರಕುಪ್ಪ ಯೋಜನೆಯನ್ನು ತ್ವರಿತಗೊಳಿಸುವ ನಿಟ್ಟಿನಲ್ಲಿ ಎರಡೂ ರಾಜ್ಯಗಳ ಸರ್ಕಾರಗಳು ಸಮನ್ವಯದೊಂದಿಗೆ ಕೆಲಸ ಮಾಡುತ್ತಿವೆ ಎಂದು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ‘ಈ ಯೋಜನೆಗೆ ಅರಣ್ಯ ಪ್ರದೇಶದ ಬದಲು ಕಂದಾಯ ಭೂಮಿಯನ್ನು ಬಳಸಲು ನಿರ್ಧರಿಸಲಾಗಿದೆ. ಇದರಿಂದ ಸೇತುವೆಗೆ ಅನುಮೋದನೆ ಸಿಗುವುದು ಸುಲಭವಾಗಬಹುದು. ಈ ಬಗ್ಗೆ ಕರ್ನಾಟಕ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದೇನೆ ಹಾಗೂ ಆ ಸ್ಥಳಕ್ಕೂ ಭೇಟಿ ನೀಡಿದ್ದೇನೆ. ಕೇಂದ್ರ ರಸ್ತೆ ಮೂಲಸೌಕರ್ಯ ನಿಧಿಯನ್ನು ಬಳಸಿಕೊಂಡು ಈ ಯೋಜನೆಯನ್ನು ಪೂರ್ಣಗೊಳಿಸಲಾಗುವುದು’ ಎಂದು ಹೇಳಿದರು.

ಯೋಜನೆ ಹಿನ್ನೆಲೆ?:

ಕರ್ನಾಟಕದ ಕೊಡಗು ಜಿಲ್ಲೆಯ ಬೈರಕುಪ್ಪದಿಂದ ಕಬಿನಿ ನದಿಗೆ ಅಡ್ಡಲಾಗಿ ಸೇತುವೆ ಕಟ್ಟಿದರೆ ಅದು ಕೇರಳದ ಪೆರಿಕಲ್ಲೂರನ್ನು ಸಂಪರ್ಕಿಸುತ್ತದೆ. ಇದರಿಂದಾಗಿ ಬಂಡೀಪುರ ಅರಣ್ಯ ಮಾರ್ಗವನ್ನು ಬಳಸದೆಯೇ ವಾಹನಗಳು ಸುಲಭವಾಗಿ ಉಭಯ ರಾಜ್ಯಗಳ ನಡುವೆ ಸಂಚಾರ ಮಾಡಬಹುದು. ಜೊತೆಗೆ ಸಮಯ ಮತ್ತು ಸಂಚಾರದ ಅವಧಿಯೂ ಕಡಿತವಾಗುತ್ತದೆ. 30 ವರ್ಷಗಳ ಹಿಂದೆಯೇ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗಿತ್ತಾದರೂ ಯೋಜನೆ ನೆಲ ಬಿಟ್ಟು ಮೇಲೆ ಎದ್ದಿಲ್ಲ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Illegal Foreign Migrants: ರಾಜ್ಯದಲ್ಲಿ 13,675 ಅಕ್ರಮ ವಿದೇಶಿ ವಲಸಿಗರ ಪತ್ತೆ: ಬೆಂಗಳೂರಲ್ಲೇ 10,650! ಗೃಹ ಸಚಿವರೇ ಕ್ರಮ ಯಾವಾಗ?
ಕಾಂಗ್ರೆಸ್ಸಿಗೆ ಹೆಚ್ಚು ಅಡ್ಡಮತ ಬಂದಿದ್ದು ಬೆಳಗಾವಿಯಿಂದ! 4-5 ಮತ ನಿರೀಕ್ಷಿಸಿದ್ದ ಕೈಗೆ ಸಿಕ್ಕಿದ್ದು ಭರ್ಜರಿ 11!