Karnataka Politics: ಒಂದೇ ವಿಮಾನದಲ್ಲಿ ಖರ್ಗೆ, ಡಿಕೆಶಿ ದಿಢೀರ್ ದೆಹಲಿಗೆ, ಹೆಚ್ಚಿದ ಕುತೂಹಲ!

Kannadaprabha News, Ravi Janekal |   | Kannada Prabha
Published : Mar 09, 2026, 04:22 AM IST
Kharge and DK Shivakumar head to Delhi in the same flight

ಸಾರಾಂಶ

ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಬಳಿಕ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತ ಚರ್ಚೆಗಳ ನಡುವೆ ಈ ಜಂಟಿ ಪ್ರಯಾಣ  ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

ಕಲಬುರಗಿ (ಮಾ.9): ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಭಾನುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಒಂದೇ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಯಿತು.

ಇದನ್ನೂ ಓದಿ: ಚಿತ್ತಾಪುರ: ಪ್ರಿಯಾಂಕ್ ಜನ ಸಾಮಾನ್ಯರ ಧ್ವನಿಯಾಗಿ ಕೆಲಸ ಮಾಡುತ್ತಿದ್ದಾರೆ, ಅಪಪ್ರಚಾರ ಮಾಡುವವರಿಗೆ ಖರ್ಗೆ ಎಚ್ಚರಿಕೆ

ಸಮಾರಂಭದ ಬಳಿಕ ಖರ್ಗೆ ಮತ್ತು ಡಿಕೆಶಿ ಒಂದೇ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದರು. ದೆಹಲಿಯಲ್ಲಿ ನಡೆದ ತಮ್ಮ ಸ್ನೇಹಿತರೊಬ್ಬರ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಡಿಕೆಶಿ ದೆಹಲಿಗೆ ತೆರಳಿದ್ದು, ಸೋಮವಾರವೇ ಅವರು ಬೆಂಗಳೂರಿಗೆ ಮರಳಲಿದ್ದಾರೆ. 

ಇದನ್ನೂ ಓದಿ: 'ಟ್ರಂಪ್ ಒಬ್ಬ ಸರ್ವಾಧಿಕಾರಿ, ಮೋದಿ ಅವನ ಗುಲಾಮ' : ಚಿತ್ತಾಪುರದಲ್ಲಿ ಪ್ರಧಾನಿ ವಿರುದ್ಧ ಖರ್ಗೆ ಕಟು ವಾಗ್ದಾಳಿ

ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತ ಗೊಂದಲ ಮುಂದುವರಿದಿರುವುದರ ನಡುವೆಯೇ ಖರ್ಗೆ ಜೊತೆ ಡಿಕೆಶಿ ಪ್ರಯಾಣ ಬೆಳೆಸಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಯಿತು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

₹200 ಲಕ್ಷ ಸಾಲ ಮಾಡಿರುವ ಪ್ರಧಾನಿ ಮೋದಿ: ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ
Jr NTR Bangalore visit: ಕರ್ನಾಟಕ ನನ್ನ ಅಮ್ಮನ ಮನೆ: ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲೇ ಭಾಷಣ ಮಾಡಿದ ಎನ್‌ಟಿಆರ್