SHOCKING NEWS: ಕಿತ್ತೂರು ವಿಜಯೋತ್ಸವ ಭಜನಾ ಸ್ಪರ್ಧೆ ವೇಳೆಯೇ ಕಲಾವಿದ ಹೃದಯಾಘಾತದಿಂದ ಸಾವು!

By Kannadaprabha News  |  First Published Oct 28, 2024, 2:00 PM IST

ಮೂರು ದಿನಗಳ ಕಾಲ ನಡೆದ ವೀರರಾಣಿ ಕಿತ್ತೂರು ಚನ್ನಮ್ಮನ ವಿಜಯೋತ್ಸವದ ನಿಮಿತ್ತ ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಶನಿವಾರ ರಾತ್ರಿ ಏರ್ಪಡಿಸಿದ್ದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದ ಹೃದಯಾಘಾತದಿಂದ ವೇದಿಕೆಯಲ್ಲೇ ಕುಸಿದುಬಿದ್ದು ಸಾವಿಗೀಡಾದ ಘಟನೆ ನಡೆದಿದೆ.


 ಕಿತ್ತೂರು (ಅ.28): ಮೂರು ದಿನಗಳ ಕಾಲ ನಡೆದ ವೀರರಾಣಿ ಕಿತ್ತೂರು ಚನ್ನಮ್ಮನ ವಿಜಯೋತ್ಸವದ ನಿಮಿತ್ತ ಬೆಳಗಾವಿ ಜಿಲ್ಲೆ ಕಿತ್ತೂರಿನಲ್ಲಿ ಶನಿವಾರ ರಾತ್ರಿ ಏರ್ಪಡಿಸಿದ್ದ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಕಲಾವಿದ ಹೃದಯಾಘಾತದಿಂದ ವೇದಿಕೆಯಲ್ಲೇ ಕುಸಿದುಬಿದ್ದು ಸಾವಿಗೀಡಾದ ಘಟನೆ ನಡೆದಿದೆ.

ಕಿತ್ತೂರು ತಾಲೂಕಿನ ಬಸಾಪೂರ ಗ್ರಾಮದ ಈರಪ್ಪ ಪಕ್ಕೀರಪ್ಪ ಬಬಲಿ (48) ಮೃತ ಕಲಾವಿದ. ಕಿತ್ತೂರು ವಿಜಯೋತ್ಸವ ಅಂಗವಾಗಿ ವೇದಿಕೆಯಲ್ಲಿ ಶನಿವಾರ ರಾತ್ರಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಭಜನಾ ಸ್ಪರ್ಧೆ ನಡೆಯಿತು. ವೇದಿಕೆಯಲ್ಲಿ ತಂಡದೊಂದಿಗೆ ಭಾಗಿಯಾಗಿ ವೇದಿಕೆಯಿಂದ ನಿರ್ಗಮಿಸುವ ಸಮಯದಲ್ಲಿ ತೀವ್ರ ಹೃದಯಾಘಾತದಿಂದ ಕುಸಿದುಬಿದ್ದಿದ್ದಾರೆ. 

Tap to resize

Latest Videos

undefined

ಕೆರೆ ಕೋಡಿಲ್ಲಿ ಕೊಚ್ಚಿಹೋದ ಪ್ರಕರಣ; ಸಾವನ್ನೇ ಗೆದ್ದು ಬಂದ ಯುವತಿ!

ಕೂಡಲೇ ಕಲಾವಿದನನ್ನು ಸರ್ಕಾರಿ ತಾಲೂಕಾಸ್ಪತ್ರೆಗೆ ಒಯ್ಯಲಾಯಿತಾದರೂ ಅಷ್ಟೊತ್ತಿಗಾಗಲೇ ಅಸುನೀಗಿದ್ದಾರೆ ಎಂದು ವೈದ್ಯರು ಖಚಿತಪಡಿಸಿದರು. ಕಲಾವಿದ ಈರಪ್ಪನಿಗೆ ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಮೃತ ಕಲಾವಿದನ ಮನೆಗೆ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಬೇಟಿ ನೀಡಿ ಸಾಂತ್ವನ ಹೇಳಿದರು.

click me!