
ಬೆಂಗಳೂರು (ಸೆ.13) : ಶಾಲೆ ಹಾಗೂ ಅಂಗನವಾಡಿ ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸಿ ಆರೋಗ್ಯವಂತರನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಕೆಎಂಎಫ್ ಸಹಯೋಗದೊಂದಿಗೆ ಆರಂಭಿಸಲಾದ ಕ್ಷೀರಭಾಗ್ಯ ಯೋಜನೆಗೆ ಅಂತಾರಾಷ್ಟ್ರೀಯ ಡೇರಿ ಫೆಡರೇಷನ್ ಪ್ರಶಸ್ತಿ ನೀಡಿ ಗೌರವಿಸಿದೆ. ಅಂತಾರಾಷ್ಟ್ರೀಯ ಡೇರಿ ಫೆಡರೇಷನ್ ಡೇರಿ ಉದ್ಯಮದ ವಿವಿಧ ವಿಭಾಗಗಳಲ್ಲಿ ಹೊಸ ಅವಿಷ್ಕಾರ ಹಾಗೂ ಸಾಧನೆಗಳನ್ನು ಮಾಡುತ್ತಿರುವ ಸಂಸ್ಥೆಗಳಿಗೆ ಪ್ರಶಸ್ತಿ ನೀಡುತ್ತಿದೆ. ಈ ವರ್ಷ ಈ ಪ್ರಶಸ್ತಿ ಪುರಸ್ಕಾರಕ್ಕೆ 144 ದೇಶಗಳಿಂದ ಅರ್ಜಿಗಳು ಸಲ್ಲಿಸಲಾಗಿತ್ತು. ಈ ಪೈಕಿ ರಾಜ್ಯ ಸರ್ಕಾರ ಮತ್ತು ಕೆಎಂಎಫ್ ಸಹಯೋಗದ ಕ್ಷೀರಾಭಾಗ್ಯ ಕಾರ್ಯಕ್ರಮವನ್ನು ಗುರುತಿಸಿ ‘ಇನ್ನೋವೇಷನ್ ಇನ್ ಸ್ಕೂಲ್ ಮಿಲ್ಕ್ ಪೋಗ್ರಾಂ" ಪ್ರಶಸ್ತಿ ನೀಡಲಾಗಿದೆ.
ಕೆಎಂಎಫ್ ಬಗ್ಗೆ ಪ್ರಧಾನಿ ಮೋದಿ ಪ್ರಶಂಸೆ, 5 ದಶಕಗಳಿಂದ ಉತ್ತಮ ಕಾರ್ಯ: ನಮೋ
ಉತ್ತರ ಪ್ರದೇಶ(Uttara pradesh)ದ ನೋಯ್ಡಾ(Noida)ದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಡೇರಿ ಫೆಡರೇಷನ್(International Dairy Federation)ನ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ.ಸತೀಶ್(B.C.Satish), ಮಾರುಕಟ್ಟೆವಿಭಾಗದ ನಿರ್ದೇಶಕ ರಘುನಂದನ್(Raghunandan), ಮಾರುಕಟ್ಟೆವಿಭಾಗದ ಅಪರ ನಿರ್ದೇಶಕ ಸತೀಶ ಅವರು ಅಂತಾರಾಷ್ಟ್ರೀಯ ಡೇರಿ ಫೆಡರೇಷನ್‌ನ ಪ್ರಧಾನ ನಿರ್ದೇಶಕ ಕ್ಯಾರೋಲಿನ್ ಇಮೊಂಡ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.
ಮಕ್ಕಳಿಗೆ ಉಚಿತ ಹಾಲು:
ರಾಜ್ಯದಲ್ಲಿ ಕ್ಷೀರ ಭಾಗ್ಯ ಯೋಜನೆಯು ಈಗಾಗಲೇ 9 ವರ್ಷ ಪೂರೈಸಿದ್ದು, ಸದ್ಯ ಯೋಜನೆಯಡಿ ರಾಜ್ಯದಲ್ಲಿ ಒಟ್ಟಾರೆ 55,683 ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿನ 1ರಿಂದ 10ನೇ ತರಗತಿಯ ಅಂದಾಜು 64 ಲಕ್ಷ ವಿದ್ಯಾರ್ಥಿಗಳು ಮತ್ತು 64 ಸಾವಿರ ಅಂಗನವಾಡಿಗಳಲ್ಲಿ 6 ತಿಂಗಳಿನಿಂದ 6 ವರ್ಷದವರೆಗಿನ 39.50 ಲಕ್ಷ ಮಕ್ಕಳು ಸೇರಿ ಒಟ್ಟಾರೆ ಒಂದು ಕೋಟಿಗೂ ಅಧಿಕ ಮಕ್ಕಳಿಗೆ 150 ಮಿ.ಲೀ ಹಾಲನ್ನು ವಾರದಲ್ಲಿ 5 ದಿನಗಳವರೆಗೆ ನೀಡಲಾಗುತ್ತಿದೆ.Milk Price Rise: ರಾಜ್ಯದ ಜನತೆಗೆ ಮತ್ತೊಂದು ಶಾಕ್: ಇಂದಿನಿಂದ ಹಾಲಿನ ದರ 3 ರೂ ಹೆಚ್ಚಳ..?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ