KMF ಗ್ರಾಹಕರೇ ಆತಂಕ ಬೇಡ; ನಂದಿನಿ ಹಾಲು ಸಂಪೂರ್ಣ ಸುರಕ್ಷಿತ, ತಪ್ಪು ಮಾಹಿತಿ ಹರಡುವವರ ಮೇಲೆ ಕಾನೂನು ಕ್ರಮ ಎಚ್ಚರಿಕೆ!

Published : Feb 17, 2026, 09:34 AM IST
KMF Nandini Milk Safety Legal Action Warned Against Spreading Fake News

ಸಾರಾಂಶ

ಸಾಮಾಜಿಕ ಜಾಲತಾಣಗಳಲ್ಲಿ ನಂದಿನಿ ಉತ್ಪನ್ನಗಳ ಗುಣಮಟ್ಟದ ಕುರಿತು ಹರಡುತ್ತಿರುವ ವದಂತಿಗಳನ್ನು ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ತಳ್ಳಿಹಾಕಿದೆ. ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು FSSAI ಮಾನದಂಡಗಳ ಅಡಿ ಸಂಪೂರ್ಣ ಸುರಕ್ಷಿತವಾಗಿದ್ದು, ಗ್ರಾಹಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟನೆ

ಬೆಂಗಳೂರು (ಫೆ. 17): ಸಾಮಾಜಿಕ ಜಾಲತಾಣಗಳಲ್ಲಿ ನಂದಿನಿ ಉತ್ಪನ್ನಗಳ ಗುಣಮಟ್ಟದ ಕುರಿತು ಹರಿದಾಡುತ್ತಿರುವ ವದಂತಿಗಳಿಗೆ ಕೆಎಂಎಫ್ ಬ್ರೇಕ್ ಹಾಕಿದೆ. ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಸಂಪೂರ್ಣ ಸುರಕ್ಷಿತವಾಗಿದ್ದು, ಗ್ರಾಹಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ವದಂತಿಗಳಿಗೆ ಕಿವಿಗೊಡಬೇಡಿ: ಕೆಎಂಎಫ್ ಮನವಿ

ಕಳೆದ ಕೆಲವು ದಿನಗಳಿಂದ ಸೋಶಿಯಲ್ ಮೀಡಿಯಾಗಳಲ್ಲಿ ನಂದಿನಿ ಉತ್ಪನ್ನಗಳು ಸೇವನೆಗೆ ಯೋಗ್ಯವಲ್ಲ ಎಂಬ ಆಧಾರರಹಿತ ಪೋಸ್ಟ್‌ಗಳು ಹರಿದಾಡುತ್ತಿವೆ. ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿರುವ ಕೆಎಂಎಫ್, 'ನಂದಿನಿ ಬ್ರಾಂಡ್‌ನೊಂದಿಗೆ ದಶಕಗಳಿಂದ ಬೆಳೆದಿರುವ ಕೋಟ್ಯಂತರ ಗ್ರಾಹಕರಲ್ಲಿ ಅನಗತ್ಯ ಗೊಂದಲ ಮೂಡಿಸುವ ಪ್ರಯತ್ನ ನಡೆಯುತ್ತಿದೆ. ಇಂತಹ ಸುಳ್ಳು ಮಾಹಿತಿಗಳು ಸತ್ಯಕ್ಕೆ ದೂರವಾದವು' ಎಂದು ತಿಳಿಸಿದೆ.

Fssai ಮಾನದಂಡಗಳ ಪಾಲನೆ

ನಂದಿನಿ ಉತ್ಪನ್ನಗಳ ತಯಾರಿಕೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುತ್ತಿಲ್ಲ ಎಂದು ಸಂಸ್ಥೆ ಹೇಳಿದೆ. ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರ (FSSAI) ನಿಗದಿಪಡಿಸಿರುವ ಎಲ್ಲಾ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸ್ವಚ್ಛ ಪರಿಸರದಲ್ಲಿ ಉತ್ಪನ್ನಗಳನ್ನು ಸಿದ್ಧಪಡಿಸಲಾಗುತ್ತಿದ್ದು, ಗುಣಮಟ್ಟದ ಪರೀಕ್ಷೆಗಳ ನಂತರವೇ ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಪ್ರಕಟಣೆಯಲ್ಲಿ ವಿವರಿಸಲಾಗಿದೆ.

ತಪ್ಪು ಮಾಹಿತಿ ಹರಡುವವರ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ

ನಂದಿನಿ ಬ್ರಾಂಡ್‌ನ ಘನತೆಗೆ ಧಕ್ಕೆ ತರುವ ನಿಟ್ಟಿನಲ್ಲಿ ದುರುದ್ದೇಶಪೂರಿತವಾಗಿ ಸುಳ್ಳು ಸುದ್ದಿ ಹರಡುತ್ತಿರುವವರ ವಿರುದ್ಧ ಕೆಎಂಎಫ್ ಎಚ್ಚರಿಕೆ ನೀಡಿದ್ದು, ಆಧಾರರಹಿತ ಆರೋಪ ಮಾಡುವವರ ಮತ್ತು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ಈಗಾಗಲೇ ಸಂಬಂಧಪಟ್ಟ ವಿಭಾಗಗಳಿಗೆ ಸೂಚನೆ ನೀಡಲಾಗಿದೆ" ಎಂದು ಮಹಾಮಂಡಳಿ ಎಚ್ಚರಿಕೆ ನೀಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ಬೇರೆಯವರಿಗೂ ಮಕ್ಕಳಿದ್ದಾರೆ..' : ಮಗಳ ಪರೀಕ್ಷೆಗಾಗಿ 20 ದಿನ ಬೇಲ್ ಕೋರಿದ್ದ ಪವಿತ್ರಾಗೌಡ ಅರ್ಜಿ ವಜಾ
ಮಣ್ಣಾಗಿದ್ದ ಗೋಡೆಗಳಿಗೆ ಸ್ವಂತ ಹಣದಲ್ಲೇ ಬಣ್ಣ ತುಂಬಿದ ಕನಕಗಿರಿ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು!