ರಾಮಾಯಣ ಮಹಾಕಾವ್ಯದ ಮಹತ್ವವನ್ನು ಅರಿಯಿರಿ :ಸಚಿವ ಸುಧಾಕರ್

Published : Oct 28, 2023, 06:40 PM IST
ರಾಮಾಯಣ ಮಹಾಕಾವ್ಯದ ಮಹತ್ವವನ್ನು ಅರಿಯಿರಿ :ಸಚಿವ ಸುಧಾಕರ್

ಸಾರಾಂಶ

ರತ್ನಾಕರನಿಂದ ಮಹರ್ಷಿ ವಾಲ್ಮೀಕಿ‌ಯಾಗಿ‌  ಹಿಂದುಗಳ ಪವಿತ್ರ ಗ್ರಂಥ ರಾಮಾಯಣ ರಚಿಸಿದವರು. ಈ ಗ್ರಂಥದಲ್ಲಿ ಅವರ ವ್ಯಕ್ತಿತ್ವ , ಜ್ಞಾನ, ದಾರ್ಶನಿಕರಾಗಿಯೂ, ಸಮಾಜ ಸುಧಾರಕರಾಗಿ ಕಾಣಬಹುದು. ಕುಟುಂಬದಲ್ಲಿ ಹೇಗೆ ಇರಬೇಕು ಎಂಬುದನ್ನು ತನ್ನ ಮಹಾಕಾವ್ಯ. ಮಹಾಕಾವ್ಯಗಳನ್ನು ಓದುವ ಮೂಲಕ ಮಹರ್ಷಿ ವಾಲ್ಮೀಕಿ‌ಯಾಗಲು ಪ್ರಯತ್ನಿಸಬೇಕು‌ ಎಂದು ಸಚಿವ ಸುಧಾಕರ್ ತಿಳಿಸಿದರು.

ವರದಿ- ರವಿಕುಮಾರ್, ವಿ, ಏಷ್ಯಾನೆಟ್ ಸುವರ್ಣ ನ್ಯೂಸ್

ಚಿಕ್ಕಬಳ್ಳಾಪುರ (ಅ.28) : ರಾಮಾಯಣ ಎಂಬ ಮಹಾನ್ ಗ್ರಂಥ ರಚನೆ ಮಾಡಿದ ಕಾರಣಕ್ಕೆ ವಾಲ್ಮೀಕಿ ಆದಿಕವಿಯಾದದ್ದು. ಮಹರ್ಷಿ ವಾಲ್ಮೀಕಿ ಅಪ್ಪಟ ಜ್ಞಾನವಂತ, ಸುಸಂಸ್ಕೃತ, ಸಂಸ್ಕಾರವಂತ. ಹಾಡಿಗಳಲ್ಲಿ ಬೆಳೆದು ಬದುಕಿದ್ದರೂ ಇಡೀ ಜಗತ್ತಿಗೆ ತಾವು ಬದುಕಿದಂತೆಯೇ ಬದುಕಬೇಕು ಎಂಬುದನ್ನು ಹೇಳುತ್ತಲೇ ಆರ್ಯ ಜನಾಂಗದ ಆದರ್ಶಗಳನ್ನು ತಮ್ಮ ಮಹಾಕಾವ್ಯದ ಮೂಲಕವೇ ಸಾರಿ ಹೇಳಿದವರು ವಾಲ್ಮೀಕಿ ಎಂದು ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ. ಸುಧಾಕರ್ ರವರು ತಿಳಿಸಿದರು.

ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ಮಹರ್ಷಿ ವಾಲ್ಮೀಕಿ ರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. 

ಮಹರ್ಷಿ ವಾಲ್ಮೀಕಿ ಜಯಂತಿಯಂದೇ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ

ರತ್ನಾಕರನಿಂದ ಮಹರ್ಷಿ ವಾಲ್ಮೀಕಿ‌ಯಾಗಿ‌  ಹಿಂದುಗಳ ಪವಿತ್ರ ಗ್ರಂಥ ರಾಮಾಯಣ ರಚಿಸಿದವರು. ಈ ಗ್ರಂಥದಲ್ಲಿ ಅವರ ವ್ಯಕ್ತಿತ್ವ , ಜ್ಞಾನ, ದಾರ್ಶನಿಕರಾಗಿಯೂ, ಸಮಾಜ ಸುಧಾರಕರಾಗಿ ಕಾಣಬಹುದು. ಕುಟುಂಬದಲ್ಲಿ ಹೇಗೆ ಇರಬೇಕು ಎಂಬುದನ್ನು ತನ್ನ ಮಹಾಕಾವ್ಯ. ಮಹಾಕಾವ್ಯಗಳನ್ನು ಓದುವ ಮೂಲಕ ಮಹರ್ಷಿ ವಾಲ್ಮೀಕಿ‌ಯಾಗಲು ಪ್ರಯತ್ನಿಸಬೇಕು‌ ಎಂದರು. ‌‌‍

ನಗರದ ವಾಪಸಂದ್ರದ ದೇವಾಲದ ಮುಂಭಾಗದಿಂದ ಬಿ.ಬಿ.ರಸ್ತೆಯ ಒಕ್ಕಲಿಗರ ಕಲ್ಯಾಣ ಮಂಟಪದವರೆಗೂ ಹೂವಿನ ಪಲ್ಲಕ್ಕಿಗಳ ಅದ್ದೂರಿ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಿದರು. 

ಶಾಸಕರಾದ ಪ್ರದೀಪ್ ಈಶ್ವರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಸಮುದಾಯದ ಮಕ್ಕಳು ಶೈಕ್ಷಣಿಕವಾಗಿ ಬೆಳೆಯಬೇಕು. ಇವರು ಶೈಕ್ಷಣಿಕವಾಗಿ ಬೆಳೆಯಲು ನನ್ನ ವೈಯುಕ್ತಿಕ ಸಹಕಾರದೊಂದಿಗೆ ಉನ್ನತ ಶಿಕ್ಷಣ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಅಂದರೆ ವೈದ್ಯಕೀಯ ಶಿಕ್ಷಣ ಪಡೆಯಲು ಪ್ರೋತ್ಸಾಹ ನೀಡುತ್ತೇನೆ ಎಂದರು.

ಈ ವೇಳೆ ಕಳೆದ ಸಾಲಿನ ಎಸ್.ಎಸ್.ಎಲ್.ಸಿ‌ ಮತ್ತು ಪಿ.ಯು.ಸಿ ಪರೀಕ್ಷೆಯಲ್ಲಿ‌ ಅತಿ‌ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ ಬಹುಮಾನ ವಿತರಿಸಲಾಯಿತು.

ನಂತರ ವಾಲ್ಮೀಕಿ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳನ್ನು ಪಡೆದ ಫಲಾನುಭವಿಗಳಿಗೆ ಹಾಗೂ ಮಹಿಳಾ‌‌ ಸ್ವಸಹಾಯ ಸಂಘದ ಮಹಿಳೆಯರಿಗೆ ಸಹಾಯಧನ ಸೌಲಭ್ಯದ ಚೆಕ್ ಗಳನ್ನು ವಿತರಿಸಿದರು. ಇನ್ಜೂ ಇದೇ ವೇಳೆ ಬಿ.ವಿ.ಶಿವಕುಮಾರ್ ರವರು ಮಹರ್ಷಿ ವಾಲ್ಮೀಕಿ ಯವರ  ಕುರಿತು ವಿಶೇಷ ಉಪನ್ಯಾಸ ವನ್ನು ನೀಡಿದರು.

ಇಂದು ಮಹರ್ಷಿ ವಾಲ್ಮೀಕಿ ಜಯಂತಿ: ಎಂದೂ ಬಾಡದ ದೇವಕುಸುಮ ವಾಲ್ಮೀಕಿ ಋಷಿ

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿಲ್.ನಾಗೇಶ್, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಸೇರಿ ಹಲವು ಅಧಿಕಾರಿಗಳು ಹಾಗೂ  ವಾಲ್ಮೀಕಿ ನಾಯಕ ಸಂಘದ ವಿವಿಧ ಪದಾಧಿಕಾರಿಗಳು ಹಾಜರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್