* ಕೊಡಗಿನ ಕಾವೇರಿ ಪವಿತ್ರ ತೀರ್ಥೋದ್ಭವ
* ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ
* ಈ ಬಾರಿ ತಲಕಾವೇರಿ ಪುಣ್ಯ ಕ್ಷೇತ್ರದಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ
ಕೊಡಗು, (ಸೆ.30): ಪ್ರತೀ ವರ್ಷದಂತೆ ಈ ವರ್ಷವೂ ಜಿಲ್ಲೆಯ ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ (Cauvery Theerthodhbava) ಮುಹೂರ್ತ ಫಿಕ್ಸ್ ಆಗಿದೆ.
ಕೊಡಗಿನ (Kodagu) ತಲಕಾವೇರಿಯಲ್ಲಿರುವ ತೀರ್ಥ ಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಭಾನುವಾರ ಮಧ್ಯಾಹ್ನ 1 ಗಂಟೆ 11 ನಿಮಿಷಕ್ಕೆ ಮಕರ ಲಗ್ನದಲ್ಲಿ ಕಾವೇರಿ ತೀರ್ಥ ರೂಪದಲ್ಲಿ ಉಗಮವಾಗಲಿದೆ.ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಇದೆ.
ಮಹದೇಶ್ವರ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ
ಜೀವ ನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಮಾತೆ ಕಾವೇರಿ ಜಲರೂಪದಲ್ಲಿ ದರ್ಶನ ಕೊಡುತ್ತಾಳೆ ಎಂದು ನಂಬಲಾಗುವ ಪವಿತ್ರ ತೀರ್ಥೋದ್ಭವ ಕಳೆದ ಬಾರಿ ಅ.17ರ ಮುಂಜಾನೆ 7.03ಕ್ಕೆ ನಡೆದಿತ್ತು.
ಪ್ರತಿ ವರ್ಷವೂ ತುಲಾ ಮಾಸದಲ್ಲಿ ನಡೆಯುವ ಈ ಜಾತ್ರೆಗೆ ಸೆ.15ರಿಂದಲೇ ಸಿದ್ಧತೆ ಶುರುವಾಗುತ್ತದೆ. ಅಕ್ಟೋಬರ್ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗುತ್ತದೆ.
ಇದುವರೆಗೂ ಕಾವೇರಿ ಭಕ್ತರ ಉತ್ಸಾಹಕ್ಕೆ ಯಾವುದೇ ಅಡ್ಡಿಯಾಗಿರಲಿಲ್ಲ. ಆದರೆ ಕೊರೋನಾದಿಂದಾಗಿ ಕಳೆದ ವರ್ಷ ಕಾವೇರಿ ಜಾತ್ರೆ ಸಂಪೂರ್ಣ ಕಳೆಗುಂದಿತ್ತು. ಹೆಚ್ಚಿನ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿರಲಿಲ್ಲ. ಹಾಗಾಗಿ ದೂರದೂರುಗಳಿಂದ ತೀರ್ಥೋದ್ಭವಕ್ಕೆ ಆಗಮಿಸಬೇಕಿದ್ದ ಭಕ್ತರಿಗೆ ನಿರಾಸೆಯಾಗಿತ್ತು.