
ಬೆಂಗಳೂರು (ಜು.02) ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹೆಲವು ಜಿಲ್ಲೆಗಳಲ್ಲಿ ಅಲರ್ಟ್ ನೀಡಲಾಗಿದೆ. ತಗ್ಗು ಪ್ರದೇಶದ ಜನರಿಗೆ ಅತೀವ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಹೊರತುಪಡಿಸಿ ಇನ್ನುಳಿದ ಬಹುತೇಕ ಜಿಲ್ಲೆಗಳಿಗೆ ಅಲರ್ಟ್ ನೀಡಲಾಗಿದೆ. ಇದೀಗ ಭಾರಿ ಮಳೆಯಾಗುತ್ತಿರುವ ಕಾರಣ ಕರ್ನಾಟಕ 3 ಜಿಲ್ಲೆಗಳ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ. ಕೊಡಗಿನ ಶಾಲಾ ಕಾಲೇಜಿಗೆ ನಾಳೆ (ಜು.03) ರಜೆ ಘೋಷಿಸಿದ್ದರೆ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡದ ಕೆಲ ತಾಲೂಕುಗಳ ಶಾಲೆಗಳಿಗೆ ನಾಳೆ (ಜು.03) ರಜೆ ನೀಡಲಾಗಿದೆ.
ಕೊಡುಗು ಶಾಲಾ ಕಾಲೇಜಿಗೆ ರಜೆ
ಕೊಡುಗು ಜಿಲ್ಲೆಯಲ್ಲಿ ಸಂಜೆಯಿಂದ ಭಾರಿ ಮಳೆಯಾಗುತ್ತಿದೆ. ಮಳೆ ತೀವ್ರಗೊಂಡ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಮಹತ್ವದ ಆದೇಶ ನೀಡಿದ್ದಾರೆ. ಮನ್ನಚ್ಚರಿಕಾ ಕ್ರಮವಾಗಿ ನಾಳೆ (ಜು.03) ಕೊಡಗು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಗಳಿಗೆ ರಜೆ ನೀಡಲಾಗಿದೆ.
ಕಳೆದ ಒಂದು ವಾರದಿಂದ ಕೊಡಗಿನಲ್ಲಿ ಮಳೆಯ ಅಬ್ಬರ ತಗ್ಗಿದ ಪರಿಣಾಮ ಶಾಲಾ ಕಾಲೇಜಗಳು ಆರಂಭಗೊಂಡಿತ್ತು. ಆದರೆ ಇದೀಗ ಮತ್ತೆ ಮಳೆ ಆರಂಭಗೊಂಡಿದೆ. ಹೀಗಾಗಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಚಿಕ್ಕಮಗಳೂರಿನಲ್ಲಿ ರಜೆ ಘೋಷಣೆ
ಚಿಕ್ಕಮಗಳೂರಿನ ಕೆಲ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಎನ್ಆರ್ ಪುರ, ಕೊಪ್ಪ, ಶೃಂಗೇರಿ, ಕಳಸ, ಮೂಡಿಗೆರೆ ತಾಲೂಕಿ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ. ಇನ್ನು ತಾಲುಕಿನ ಕೆಲ ಹೊಬಳಿಗಳಾದ ಆಲ್ದೂರು, ವಸ್ತಾರೆ, ಜಾಗರ, ಖಾಂಡ್ಯ ಹೊಬಳಿಗೂ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಆದೇಶ ನೀಡಿದ್ದಾರೆ.
ಉತ್ತರಕನ್ನಡ ಜಿಲ್ಲೆಯಲ್ಲಿ ಮುಂದುವರಿದ ಮಳೆಯ ಅಬ್ಬರ
ಉತ್ತರ ಕನ್ನಡದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕೆಲ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ. ದಾಂಡೇಲಿ, ಜೋಯಿಡಾ ತಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಮುಂಜಾಗ್ರತ ಕ್ರಮವಾಗಿ ಉತ್ತರಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ರಜೆ ಘೋಷಿಸಿದ್ದಾರೆ. ಮಳೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ.
ಕರ್ನಾಟಕ ಇತರ ಕೆಲ ಜಿಲ್ಲೆಗಳಲ್ಲೂ ಮಳೆ ತೀವ್ರಗೊಂಡಿದೆ. ಸದ್ಯ ಜುಲೈ 3ಕ್ಕೆ ಮೂರು ಜಿಲ್ಲೆಗಳ ಕೆಲ ತಾಲೂಕುಗಳ ಶಾಲಾ ಕಾಲೇಜಿಗೆ ರಜೆ ನೀಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ