ದಿಲ್ಲಿ ಭೀಕರ ವಾಯುಮಾಲಿನ್ಯಕ್ಕೆ ಕೊಡಗಿನ ಕಾಫಿ ಉದ್ಯಮಿ ಬಲಿ

By Kannadaprabha News  |  First Published Nov 11, 2023, 11:38 AM IST

ದೆಹಲಿಯಲ್ಲಿ ನಾಲ್ಕು ದಿನಗಳ ಕಾಲ ನಡೆದ ಕಾಫಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳಿದ್ದ ನರೇಂದ್ರ ಅಲ್ಲಿನ ವಾಯುಮಾಲಿನ್ಯಕ್ಕೆ ತುತ್ತಾಗಿ ಅಸ್ವಸ್ಥಗೊಂಡಿದ್ದರು. ಹೀಗಾಗಿ ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಅವರು ಮಾರನೇ ದಿನ ಬೆಂಗಳೂರಿಗೆ ಹಿಂತಿರುಗಿದ್ದಾರೆ. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಆರೋಗ್ಯ ಸುಧಾರಿಸದೆ ಮೃತಪಟ್ಟಿದ್ದಾರೆ.


ಕುಶಾಲನಗರ(ನ.11):  ದೆಹಲಿಯ ವಾಯುಮಾಲಿನ್ಯಕ್ಕೆ ಕೊಡಗು ಜಿಲ್ಲೆಯ ಕುಶಾಲನಗರದ ಕಾಫಿ ಉದ್ಯಮಿ ಮೃತಪಟ್ಟಿದ್ದಾರೆ. ಮೂಲತಃ ಸಿದ್ದಾಪುರದ ಗುಹ್ಯ ಗ್ರಾಮದ ನಿವಾಸಿ, ಕುಶಾಲನಗರದಲ್ಲಿ ಕಾಫಿ ಉದ್ಯಮ ನಡೆಸುತ್ತಿದ್ದ ನರೇಂದ್ರ ಹೆಬ್ಬಾರ್ (56) ಸಾವಿಗೀಡಾದವರು.

ದೆಹಲಿಯಲ್ಲಿ ನಾಲ್ಕು ದಿನಗಳ ಕಾಲ ನಡೆದ ಕಾಫಿ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳಿದ್ದ ನರೇಂದ್ರ ಅಲ್ಲಿನ ವಾಯುಮಾಲಿನ್ಯಕ್ಕೆ ತುತ್ತಾಗಿ ಅಸ್ವಸ್ಥಗೊಂಡಿದ್ದರು. ಹೀಗಾಗಿ ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಅವರು ಮಾರನೇ ದಿನ ಬೆಂಗಳೂರಿಗೆ ಹಿಂತಿರುಗಿದ್ದಾರೆ. ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ಆರೋಗ್ಯ ಸುಧಾರಿಸದೆ ಶುಕ್ರವಾರ ಮುಂಜಾನೆ ಮೃತಪಟ್ಟಿದ್ದಾರೆ.

Tap to resize

Latest Videos

undefined

ದಿಲ್ಲಿ ಗಾಳಿ ಮಲಿನ ಮಟ್ಟ 100 ಪಟ್ಟು ಹೆಚ್ಚಳ :ವಿಶ್ವ ಆರೋಗ್ಯ ಸಂಸ್ಥೆ ಕಳವಳ

ನರೇಂದ್ರ ಅವರು ಕುಶಾಲನಗರದಲ್ಲಿ ಎರಡು ದಶಕಗಳ ಕಾಲ ಕಾಫಿ ಉದ್ಯಮಿಯಾಗಿ ಕೆಲಸ ಮಾಡಿದ್ದರು. ಕಳೆದ ಕೆಲ ವರ್ಷಗಳಿಂದ ಸಮೀಪದ ಕೊಪ್ಪ ಗ್ರಾಮದಲ್ಲಿ ಕೆಫೆ ಕಾಫಿ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನಡೆಯಿತು.

ಒಂದೇ ರಾತ್ರಿಯ ಮಳೆಗೆ ತಗ್ಗಿದ ದೆಹಲಿ ಮಾಲಿನ್ಯ

ನವದೆಹಲಿ: ಕಳೆದ 10 ದಿನಗಳಿಂದ ವಾಯು ಮಾಲಿನ್ಯದ ಕಾರಣ ಉಸಿರುಗಟ್ಟುವ ವಾತಾವರಣವನ್ನು ಅನುಭವಿಸುತ್ತಿದ್ದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗುರುವಾರ ರಾತ್ರಿ ಮಳೆ ಸುರಿದಿದ್ದು, ವಾಯು ಮಾಲಿನ್ಯದ ಪ್ರಮಾಣ ಇಳಿಕೆಯಾಗಿದೆ.

click me!