
ಬೆಂಗಳೂರು: ಆಕಸ್ಮಿಕವಾಗಿ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಮಾಜಿ CRPFಯೋಧರೊಬ್ಬರು ಸಜೀವ ದಹನಗೊಂಡ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ತೋಳುರುಶೆಟ್ಟಳ್ಳಿಲ್ಲಿ ಘಟನೆ ನಡೆದಿದ್ದು, 64 ವರ್ಷದ ಹೆಚ್.ಎ.ವೆಂಕಟೇಶ್ ಮೃತ ಮಾಜಿ ಯೋಧ.
ಮನೆಯಲ್ಲೇ ತೋಟದ ಕೆಲಸಗಳಿಗೆ ಬಳಸುವ ಯಂತ್ರಗಳಿಗೆಂದು ತಂದಿಟ್ಟಿದ್ದ ಪೆಟ್ರೋಲ್‌ಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಮನೆಗೆ ವ್ಯಾಪಿಸಿದೆ. ವೆಂಕಟೇಶ್ ಅವರು ಗ್ಯಾಂಗ್ರಿನ್ ಸಮಸ್ಯೆಯಿಂದಾಗಿ ಒಂದು ಕಾಲನ್ನು ಕಳೆದುಕೊಂಡಿದ್ದರಿಂದ ತಕ್ಷಣ ಮನೆಯಿಂದ ಹೊರಬರಲು ಸಾಧ್ಯವಾಗದೆ ಬೆಂಕಿಗೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಬಾಣಂತನಕ್ಕೆ ಹೋದ ಹೆಂಡ್ತಿ: ಊಟಕ್ಕೆಂದು ಹೊಟೇಲ್‌ಗೆ ಹೋದಾಗ ಆಕಸ್ಮಿಕವಾಗಿ ಕಾಲ್ತುಳಿದಿದ್ದಕ್ಕೆ ಯುವಕನ ಕೊಲೆ
ಬೆಂಕಿಯ ತೀವ್ರತೆಗೆ ಮನೆಯ ಒಂದು ಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ಸ್ಥಳೀಯರು ಮನೆಯ ಮೇಲಿನಿಂದ ದಟ್ಟ ಹೊಗೆ ಕಾಣಿಸಿಕೊಂಡ ಹಿನ್ನೆಲೆ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದರು. ಆದರೆ ಅಷ್ಟರಲ್ಲಾಗಲೇ ವೆಂಕಟೇಶ್ ಅವರು ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಸೋಮವಾರಪೇಟೆ ವೃತ್ತ ನಿರೀಕ್ಷಕ ಮುದ್ದು ಮಾದೇವ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ ಹಾಗೂ ಇರ್ವರೂ ಪುತ್ರಿಯರನ್ನು ಅಗಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ