
ಹಾಸನ (ಸೆ.09): ನಮ್ಮ ದೇಶದಲ್ಲಿ ಮಳೆ ಇನ್ನೂ ಮುಕ್ತಾಯವಾಗಿಲ್ಲ. ನಾನು ಈ ಹಿಂದೆ ಪ್ರಾಕೃತಿಕ ದೋಷವಿದೆ ಎಂದು ಹೇಳಿದಂತೆ ಅದಿನ್ನೂ ಸಂಭವಿಸುತ್ತದೆ. ಈ ಬಾರಿ ಆಕಾಶದಿಂದ ಭಾರೊ ದೊಡ್ಡ ಆಪತ್ತು ಕಾದಿದೆ ಎಂದು ಹಾರನಹಳ್ಳಿ ಗ್ರಾಮದ ಕೋಡಿಮಠ ಪೀಠಾಧ್ಯಕ್ಷ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಹಾರನಹಳ್ಳಿ ಗ್ರಾಮದ ಕೋಡಿಮಠದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದರಿ ವರ್ಷದ ಮಳೆಯಿಂದ ದೇಶದಲ್ಲಿ ಜಾಸ್ತಿ ತೊಂದರೆ ಇದೆ. ಪ್ರಾಕೃತಿಕ ದೋಷ ಇದೆ. ನಮಗೆ ಪಂಚ ಶಕ್ತಿಗಳಿಂದಲೂ ತೊಂದರೆ ಇದೆ. ಭೂಮಿ, ಅಗ್ನಿ, ವಾಯು, ಆಕಾಶ, ಪ್ರಕೃತಿ ಸೇರಿದಂತೆ ಎಲ್ಲಾ ಕಡೆ ತೊಂದರೆ ಆಗುತ್ತದೆ. ಇನ್ನೂ ಹೇಳಬೇಕೆಂದರೆ ಆಕಾಶದಲ್ಲಿ ಆಗುವ ದೊಡ್ಡ ಸುದ್ದಿ ಇದೆ. ಜನ ಇದ್ದಕ್ಕಿದ್ದಂತೆ ಸಾಯುತ್ತಾರೆ. ಭೂಮಿ ಬಿರುಕು ಬಿಡುತ್ತೆ ಎಂದಿದ್ದೆ. ಗುಡ್ಡ ಹೋಗುತ್ತೆ ಎಂದು ಹೇಳಿದ್ದೆ. ಪ್ರವಾಹದಲ್ಲಿ ಜಗತ್ತಿನಾದ್ಯಂತ ಹಲವು ದೇಶಗಳು ಮುಳುಗುತ್ತವೆ ಎಂದು ಹೇಳಿದ್ದೆ. ಇನ್ನೂ ಮಳೆ ಇದೆ, ಅದರಲ್ಲಿ ಇನ್ನೂ ಅನಾಹುತಗಳು ಸಂಭವಿಸಲಿವೆ ಎಂದು ಹೇಳಿದರು.
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ಮತ್ತೊಂದು ದೂರು
ಒಂದು ಆಕಾಶ ತತ್ವ ಪ್ರಕಾರ ತೊಂದರೆ ಆಗಬಹುದು. ಅದು ರಾಜನ ಮೇಲೆ ಭಂಗ ಬೀರುತ್ತದೆ. ಅಭಿಮನ್ಯುವಿನ ಬಿಲ್ಲನ್ನು ಮೋಸದಿಂದ ಕರ್ಣನ ಕೈಯಲ್ಲಿ ದಾರ ಕಟ್ ಮಾಡಿಸಿದ. ಮಹಾಭಾರತದಲ್ಲಿ ಕೃಷ್ಣ ಇದ್ದ, ಗದಾಯುದ್ಧದಲ್ಲಿ ಭೀಮಾ ಗೆದ್ದ. ಇದೀಗ ಕೃಷ್ಣ ಇಲ್ಲದೆ ದುರ್ಯೋಧನ ಗೆಲ್ಲುತ್ತಾನೆ. ಸೆಂಟ್ರಲ್, ಸ್ಟೇಟ್‌ಲ್ಲೂ ಇದೆ ಆಗೋದು. ಸರ್ಕಾರಕ್ಕೆ ಏನು ತೊಂದರೆ ಆಗಲ್ಲ ಅಂತ ಹೇಳಿದ್ದೇನೆ. ಜಲ, ಅಗ್ನಿ, ಪೃಥ್ವಿ, ವಾಯು ಅಂತ ಇರುತ್ತದೆ. ಅದರಿಂದ ತೊಂದರೆ ಆಗುವುದು ತಪ್ಪಿದ್ದಲ್ಲ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ