'ಮುಸ್ಲಿಂರ ಧಾರ್ಮಿಕ ಕಾರ್ಯಕ್ರಮಗಳನ್ನ ಹಿಂದೂಗಳಿಂದ ಉದ್ಘಾಟಿಸಲಿ..'; ಕಾಂಗ್ರೆಸ್‌ ಸರ್ಕಾರಕ್ಕೆ ಶಾಸಕ ಸಮೃದ್ಧಿ ಮಂಜುನಾಥ ಸವಾಲು!

Published : Aug 28, 2025, 03:18 PM IST
Kolar JDS MLA Samruddhi Manjunath Slams Congress Over Dasara Inauguration Controversy

ಸಾರಾಂಶ

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ವಿಚಾರದಲ್ಲಿ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಈ ನಡೆಯನ್ನು ತೀವ್ರವಾಗಿ ಟೀಕಿಸಿದ ಅವರು, ಹಿಂದೂ ದೇವಾಲಯಗಳನ್ನು ಮಾರಾಟ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಕೋಲಾರ (ಆ.28): ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕೋಲಾರದ ಮುಳಬಾಗಿಲು ತಾಲೂಕಿನ ಕುರುಡುಮಲೆ ದೇವಸ್ಥಾನದ ಬಳಿ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಇದೆ ಸಿದ್ಧಾಂತ ಮುಸ್ಲಿಂ ಕಡೆಯವರಿಂದ ಮಾಡ್ತೀರಾ ? ಮುಸ್ಲಿಮರ ಕಾರ್ಯಕ್ರಮವನ್ನು ಹಿಂದೂಗಳಿಂದ ಉದ್ಘಾಟನೆ ಮಾಡಿಸಿದ್ರೆ ಇವರನ್ನ ಸರಿ ಸಮಾನರು ಅಂತಾ ಒಪ್ಪಬಹುದು. ಈ ಕಾಂಗ್ರೆಸ್‌ನವರು ವೋಟು ಬ್ಯಾಂಕ್ ಗಾಗಿ ಹಿಂದಿನಿಂದ ಮಾಡಿಕೊಂಡು ಬಂದಿರುವುದು ಇಂಥದ್ದೇ ನಾಟಕ. ಮುಸ್ಲಿಂರ ಧಾರ್ಮಿಕ ಕಾರ್ಯಕ್ರಮಗಳನ್ನು ಹಿಂದೂಗಳಿಂದ ಉದ್ಘಾಟಿಸಲಿ ನೋಡೋಣ ಎಂದು ಸವಾಲು ಹಾಕಿದರು.

ಶಬರಿ, ಧರ್ಮಸ್ಥಳ, ತಿರುಪತಿ ಆಯ್ತು, ಈಗ ಚಾಮುಂಡಿ ಬೆಟ್ಟ:

ಕರ್ನಾಟಕವನ್ನು ಕಾಂಗ್ರೆಸ್‌ನವರು ಮಾರಾಟಕ್ಕಿಟ್ಟಿದ್ದಾರೆ. ಇದನ್ನು ಉಳಿಸುವ ಕೆಲಸ ಹಿಂದೂಗಳು ಮಾಡಬೇಕಿದೆ ಎಂದು ಸಮೃದ್ಧಿ ಮಂಜುನಾಥ್ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಧರ್ಮಸ್ಥಳದ ಬಗ್ಗೆ ಈಗಾಗಲೇ ಮಾತನಾಡಲು ಶುರುವಾಗಿದೆ. ಶಬರಿಮಲೆ, ಧರ್ಮಸ್ಥಳ, ತಿರುಪತಿ ಆಯಿತು, ಈಗ ಚಾಮುಂಡಿ ಬೆಟ್ಟದ ಬಗ್ಗೆ ಮಾತನಾಡುತ್ತಿದ್ದಾರೆ. ಮುಂದೆ ಯಾವ ದೇವಸ್ಥಾನದ ಬಗ್ಗೆ ಮಾತನಾಡುತ್ತಾರೆ, ಕಾದು ನೋಡೋಣ ಎಂದು ಕಾಂಗ್ರೆಸ್ ಸರ್ಕಾರದ ನೀತಿಗಳನ್ನು ತೀವ್ರವಾಗಿ ಖಂಡಿಸಿದರು. ಇದೇ ವೇಳೆ ಮುಜುರಾಯಿ ಇಲಾಖೆಯಿಂದ ನನಗೆ ಶೂನ್ಯ ಅನುದಾನ ಸಿಕ್ಕಿದೆ ಎಂದು ಆರೋಪಿಸಿದರು.

ಬಾನು ಮುಷ್ತಾಕ್ ಅವರ ಆಯ್ಕೆಯನ್ನು ಬಿಜೆಪಿ ಮತ್ತು ಕೆಲವು ಹಿಂದೂ ಸಂಘಟನೆಗಳು ಈಗಾಗಲೇ ವಿರೋಧಿಸಿವೆ. ಇದಕ್ಕೆ ಪ್ರತಿಕ್ರಿಯೆಯಾಗಿ ಕಾಂಗ್ರೆಸ್ ನಾಯಕರು, ಬಾನು ಮುಷ್ತಾಕ್ ಅವರ ಸಾಹಿತ್ಯಿಕ ಸಾಧನೆ ಮತ್ತು ಜಾತ್ಯತೀತ ಮನೋಭಾವವನ್ನು ಮೆಚ್ಚಿ ಈ ಆಯ್ಕೆ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ. ಈ ವಿವಾದವು ಮೈಸೂರು ದಸರಾ ಮಹೋತ್ಸವದ ಸಿದ್ಧತೆಗಳ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎಂಬುದು ಈಗ ಎಲ್ಲರ ಗಮನ ಸೆಳೆದಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌