ಬೆಟ್ಟಿಂಗ್ ಕಟ್ಟಿ ನೀರು ಬೆರೆಸದೇ 5 ಬಾಟಲಿ ಮದ್ಯ ಸೇವಿಸಿದ ಯುವಕ ಸಾವು!

Published : Apr 28, 2025, 01:20 PM ISTUpdated : Apr 28, 2025, 01:25 PM IST
ಬೆಟ್ಟಿಂಗ್ ಕಟ್ಟಿ ನೀರು ಬೆರೆಸದೇ 5 ಬಾಟಲಿ ಮದ್ಯ ಸೇವಿಸಿದ ಯುವಕ ಸಾವು!

ಸಾರಾಂಶ

ಮುಳಬಾಗಿಲಿನ ಪೂಜಾರಹಳ್ಳಿಯಲ್ಲಿ ಕಾರ್ತಿಕ್ (೨೧) ಹತ್ತು ಸಾವಿರ ರೂಪಾಯಿ ಬಾಜಿಗೆ ಐದು ಬಾಟಲ್ ಮದ್ಯ ನೀರು ಬೆರೆಸದೆ ಕುಡಿದು ಸಾವನ್ನಪ್ಪಿದ್ದಾನೆ. ವೆಂಕಟರೆಡ್ಡಿ, ಸುಬ್ರಮಣಿ ಸೇರಿದಂತೆ ಆರರ ಜೊತೆ ಬಾಜಿ ಕಟ್ಟಿದ್ದ ಕಾರ್ತಿಕ್, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಒಂದು ವರ್ಷದ ಹಿಂದೆ ಮದುವೆಯಾಗಿದ್ದ ಕಾರ್ತಿಕ್‌ಗೆ ಎಂಟು ದಿನದ ಹಿಂದೆ ಮಗು ಜನಿಸಿತ್ತು. ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ಕೋಲಾರ (ಏ.28): ಸಾಮಾನ್ಯವಾಗಿ ಮದ್ಯ ಸೇವನೆ ಮಾಡುವವರು ಬಾಜಿ ಕಟ್ಟಿಕೊಂಡು ಎಣ್ಣೆ ಹೊಡೆಯುವುದನ್ನು ನೋಡಿರುತ್ತೀರಿ. ಇನ್ನು ಕೆಲವರು ಬಾಜಿ ಕಟ್ಟಿ ಗೆದ್ದವರೂ ಇದ್ದೀರಿ. ಆದೇ ರೀತಿ ಕಳೆದ ಒಂದು ವರ್ಷದ ಹಿಂದಷ್ಟೇ ಮದುವೆ ಮಾಡಿಕೊಂಡಿದ್ದ ಯುವಕ ಎಣ್ಣೆ ಪಾರ್ಟಿಯಲ್ಲಿ ಬಾಜಿ ಕಟ್ಟಿ 5 ಬಾಟಲಿ ಎಣ್ಣೆಯನ್ನು ನೀರು ಬೆರೆಸದೇ ಕುಡಿದಿದ್ದಾನೆ. ಆದರೆ, ದೇಹಕ್ಕೆ ಸೇರಿದ ಎಣ್ಣೆಯನ್ನು ಅರಗಿಸಿಕೊಳ್ಳಲಾಗದೇ ಜೀವ ಬಿಟ್ಟಿದ್ದಾನೆ.

ಈ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ನಡೆದಿದೆ. ಕಾರ್ತಿಕ್ (21) ಮದ್ಯ ಸೇವಿಸಿ ಸಾವನ್ನಪ್ಪಿದ ಯುವಕ. ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ನೀರು ಬೆರಸದೆ ಮದ್ಯ ಸೇವನೆ ಮಾಡಿ ಪ್ರಾಣ ಕಳೆದುಕೊಂಡಿದ್ದಾನೆ. ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಬಾಜಿ ಕಟ್ಟಿದ್ದಾನೆ. ಇದೇ ಗ್ರಾಮದ ವೆಂಕಟರಡ್ಡಿ, ಸುಬ್ರಮಣಿ ಮತ್ತು ಇತರೆ ಮೂವರೊಂದಿಗೆ ಬೆಟ್ಟಿಂಗ್ ಕಟ್ಟಿದ್ದಾರೆ.

ಈ ವೇಳೆ ನೀನು 5 ಬಾಟಲಿ ಎಣ್ಣೆಯನ್ನು ರಾ ಹೊಡೆದರೆ (ನೀರು ಬೆರೆಸದೆ) ನಾನೊಬ್ಬನೇ 10 ಸಾವಿರ ರೂ. ಕೊಡುವುದಾಗಿ ವೆಂಕಟರೆಡ್ಡಿ ಸವಾಲು ಹಾಕಿದ್ದಾರೆ. ಇನ್ನು ಮದ್ಯ ಸೇವನೆಯಲ್ಲಿ ನಾನು ಎಂದಿಗೂ ಸೋತಿಲ್ಲವೆಂದು ಕಾರ್ತಿಕ್ 5 ಬಾಟಲಿ ಮದ್ಯವನ್ನು ನೀರು ಬೆರೆಸದೇ ಸೇವಿಸಿದ್ದಾನೆ. ನಂತರ, ಮದ್ಯದ ಪ್ರಮಾಣ ಹೆಚ್ಚಾಗಿದ್ದರಿಂದ ತೀವ್ರ ಅಸ್ವಸ್ಥನಾದ ಕಾರ್ತಿಕ್, ನಾನು ಬದುಕುವುದಿಲ್ಲ ಆಸ್ಪತ್ರೆಗೆ ಸೇರಿಸಿ ನನ್ನ ಜೀವ ಉಳಿಸಿ ಎಂದು ಬೇಡಿಕೊಂಡಿದ್ದಾನೆ. ಕೂಡಲೇ, ಆತನ ಸ್ನೇಹಿತರು ಮುಳಬಾಗಿಲು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ. ಆದರೆ, ಕಾರ್ತಿಕ್ ದೇಹ ಚಿಕಿತ್ಸೆಗೂ ಸ್ಪಂದಿಸದ ಕಾರಣ, ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ.

ಇದನ್ನೂ ಓದಿ: ತರಕಾರಿ ತರಲು ಹೋದ ನಗರಸಭೆ ಸದಸ್ಯ ಮರ್ಡರ್: ಕಾರಣವೇನು?

ಕಾರ್ತಿಕ್ ಕಳೆದ ಒಂದು ವರ್ಷದ ಹಿಂದಷ್ಟೇ ಮದುವೆ ಮಾಡಿಕೊಂಡಿದ್ದನು. ಗರ್ಭಿಣಿ ಪತ್ನಿಯನ್ನು ತವರು ಮನೆಗೆ ಕಳುಹಿಸಿದ್ದು, ಎಣ್ಣೆಗೆ ದಾಸನಾಗಿದ್ದನು. ತವರು ಮನೆ ಸೇರಿದ್ದ ಹೆಂಡತಿ ಕಳೆದ 8 ದಿನಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದಾಳೆ. 21 ವರ್ಷ ಪೂರ್ಣಗೊಳ್ಳುವ ಮುನ್ನವೇ ಕಾರ್ತಿಕ್ ಅಪ್ಪನಾಗಿದ್ದಾನೆ. ಆದರೂ, ಜೀವನದ ಜವಾಬ್ದಾರಿಯನ್ನು ಅರಿತುಕೊಳ್ಳದೇ ಮದ್ಯ ಸೇವನೆ ಜೂಜಾಟಕ್ಕೆ ಬಿದ್ದು ಇದೀಗ ಪ್ರಾಣವನ್ನೇ ಕಳೆದುಕೊಂಡಿದ್ದಾನೆ. ಇದೀಗ ತಾಯಿ-ಮಗು ಕುಟುಂಬ ಅಕ್ಷರಶಃ ದಿಕ್ಕು ತೋಚದಂತಾಗಿದ್ದಾರೆ. ಜಗತ್ತಿನ ಅರಿವೇ ಇಲ್ಲದ ಮಗುವಿಗೆ ಅಪ್ಪನಿಲ್ಲದೇ ಬೆಳೆಯುವ ಸ್ಥಿತಿ ಎದುರಾಗಿದೆ. ಬಾಣಂತಿ ಹೆಂಡತಿ ಚಿಕ್ಕ ವಯಸ್ಸಿನಲ್ಲಿಯೇ ತನ್ನ ಗಂಡನನ್ನು ಕಳೆದಕೊಂಡು ಒಬ್ಬಂಟಿಯಾಗಿ ಜೀವನ ಮಾಡುವ ಸ್ಥಿತಿ ಉಂಟಾಗಿದೆ. ಇನ್ನು ತನ್ನ ಜೊತೆಗೆ ಮಗುವನ್ನೂ ಸಾಕುವಂತಹ ಪರಿಸ್ಥಿತಿ ಎದುರಾಗಿದೆ.

ಮದ್ಯಕ್ಕೆ ನೀರು ಬೆರೆಸದೇ ಸೇವನೆ ಮಾಡಿದರೆ ಪ್ರಾಣಕ್ಕೆ ಅಪಾಯ ಆಗುತ್ತದೆ ಎಂಬ ಮುನ್ಸೂಚನೆ ಇದ್ದರೂ ಕಾರ್ತಿಕ್‌ಗೆ 5 ಬಾಟಲಿ ರಾ ಎಣ್ಣೆ ಹೊಡೆಯಲು ಬಾಜಿ ಕಟ್ಟಿದ ವೆಂಕಟರೆಡ್ಡಿ ಮತ್ತು ಸುಬ್ರಮಣಿ ಸೇರಿದಂತೆ ಆರು ಮಂದಿ ವಿರುದ್ದ ಕಾರ್ತಿಕ್ ಮನೆಯವರು ದೂರು ನೀಡಿದ್ದಾರೆ. ಹತ್ತಿರದ ನಂಗಲಿ ಪೊಲೀಸ್ ಠಾಣೆಯಲ್ಲಿ ಕಾರ್ತಿಕ್ ಮನೆಯವರು ನೀಡಿದ ದೂರನ್ನು ಆಧರಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದು, ವೆಂಕಟರೆಡ್ಡಿ ಮತ್ತು ಸುಬ್ರಮಣಿ ಇಬ್ಬರನ್ನೂ ಬಂಧನ ಮಾಡಲಾಗಿದೆ. ಇವರೊಂದಿಗೆ ಬಾಜಿ ಕಟ್ಟಿದ್ದ ಇತರರಿಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಬಾರ್‌ನಲ್ಲಿ 'ಶ್..!' ಎಂದವನ ಉಸಿರು ನಿಲ್ಲಿಸಿದ ಕುಡುಕರು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್