'ಕೊಟ್ಟಂತೆ ಮಾಡಿ ಕಿತ್ತುಕೊಳ್ಳುವುದೇ ಗ್ಯಾರಂಟಿ ಯೋಜನೆ; ಸಂಸದ ಮಲ್ಲೇಶ್ ಬಾಬು ಕಿಡಿ

ಕೋಲಾರದಲ್ಲಿ ಮಾತನಾಡಿದ ಸಂಸದ ಮಲ್ಲೇಶ್ ಬಾಬು, ರಾಜ್ಯ ಸರ್ಕಾರ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಮಾಡಿ ಜನರಿಗೆ ದ್ರೋಹ ಬಗೆದಿದೆ ಎಂದರು. ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಬೆಲೆ ಏರಿಕೆ ಮಾಡಿ ಜನರನ್ನ ಸಂಕಷ್ಟಕ್ಕೆ ದೂಡಿದೆ ಎಂದು ಟೀಕಿಸಿದರು.

kolar mp malleshbabu outraged aggainst congress government rav

ಕೋಲಾರ (ಏ.7): ರಾಜ್ಯದಲ್ಲಿ ದಿನಬಳಕೆ ವಸ್ತುಗಳು ಬೆಲೆ ಏರಿಕೆ ಮಾಡಿ ದ್ರೋಹ ಬಗೆದಿರುವ ರಾಜ್ಯ ಸರ್ಕಾರ ಯಾವ ಕ್ಷಣದಲ್ಲಿ ಬೀಳುತ್ತದೆ ಎಂದು ನಾಡಿದ ಜನತೆ ಕಾಯುತ್ತಿದ್ದಾರೆ ಎಂದು ಸಂಸದ ಮಲ್ಲೇಶ್ ಬಾಬು ಹೇಳಿದರು. 

ನಗರದ ಮಹಾತ್ಮ ಗಾಂಧಿ ರಸ್ತೆಯಲ್ಲಿ ಶ್ರೀರಾಮ ಸೇನೆಯಿಂದ ೧೦ನೇ ವರ್ಷದ ಶ್ರೀರಾಮೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಹೆಸರಲ್ಲಿ ಅಧಿಕಾರಕ್ಕೆ ಬಂದ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದಿನಬಳಕೆಯ ವಸ್ತುಗಳ ಮೇಲೆ ಬೆಲೆ ಏರಿಕೆ ಮಾಡಿದೆ ಎಂದರು.

Latest Videos

ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ವಿಧಾನಸೌಧದಲ್ಲಿ ಕೂತು ಲೂಟಿ; ಸಿದ್ದು ಡಿಕೆಶಿ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ!

ಮಹಿಳೆಯರಿಗೆ ಗ್ಯಾರಂಟಿ ಕೊಡುಗೆ

ಅಧಿಕಾರಕ್ಕೆ ಬಂದ ಎರಡು ವರ್ಷದಲ್ಲೇ ಈ ರೀತಿಯ ಪರಿಸ್ಥಿತಿ ರಾಜ್ಯದಲ್ಲಿ ಆವರಿಸಿರುವುದರಿಂದ ರಾಜ್ಯದ ಜನತೆ ರಾಜ್ಯ ಸರ್ಕಾರ ಯಾವಾಗ ಬೀಳುತ್ತದೆ ಎಂದು ಕಾಯುತ್ತಿದ್ದಾರೆ. ಹೆಣ್ಣು ಮಕ್ಕಳಿಗೆ ಒಂದು ಕೈಯಲ್ಲಿ ಗ್ಯಾರಂಟಿ ಯೋಜನೆಗಳನ್ನು ನೀಡಿ ಬೆಲೆ ಏರಿಕೆ ಮಾಡುವ ಮೂಲಕ ಮತ್ತೊಂದು ಕೈಯಲ್ಲಿ ಗಂಡು ಮಕ್ಕಳಿಂದ ಕಿತ್ತುಕೊಳ್ಳುತ್ತಿದೆ ಎಂದು ಟೀಕಿಸಿದರು.

ಮುಂದಿನ ದಿನಗಳಲ್ಲಿ ಜಿಪಂ, ತಾಪಂ ಚುನಾವಣೆಗಳು ಬರುತ್ತಿದೆ. ನಿಮಗೆ ಯಾರು ಉತ್ತಮರೋ ಅವರನ್ನು ನೋಡಿ ಮತ ನೀಡಿ, ರಾಜ್ಯದಲ್ಲಿ ಎನ್.ಡಿ.ಎ ಮೈತ್ರಿಕೂಟ ಚೆನ್ನಾಗಿ ಗಟ್ಟಿಯಾಗಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಕೂಟದಲ್ಲಿ ಯಾವುದೇ ಭೀನ್ನಾಭಿಪ್ರಾಯಗಳಿಲ್ಲ ಈ ಬಗ್ಗೆ ಕುಮಾರಸ್ವಾಮಿಯವರೆ ಸ್ಪಷ್ಟನೆ ನೀಡಿದ್ದಾರೆ. ಮೈತ್ರಿ ಕೂಟ ಚೆನ್ನಾಗಿಲ್ಲ ಎನ್ನುವುದು ಮಾಧ್ಯಮಗಳ ಸೃಷ್ಟಿಯಷ್ಟೆ ಎಂದು ಸ್ಪಷ್ಟನೆ ನೀಡಿದರು.

ಸರ್ಕಾರದ ವಿರುದ್ಧ ಪ್ರತಿಭಟನೆ

ರಾಜ್ಯ ಸರ್ಕಾರದ ವೈಫಲ್ಯಗಳು ಹಾಗೂ ಬೆಲೆ ಏರಿಕೆ ಕುರಿತು ಅವರವರ ಹಂತದಲ್ಲಿ ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ವಿಷಯ ಒಂದೇ. ಅವರು ಬೆಲೆ ಏರಿಕೆ ಕುರಿತು ಪ್ರತಿಭಟನೆ ಮಾಡುತ್ತಿದ್ದಾರೆ, ಜೆಡಿಎಸ್‌ ಸಹ ಬೆಲೆ ಏರಿಕೆ ಖಂಡಿಸಿ ಮುಂದಿನ ಶನಿವಾರ ೫೦ ಸಾವಿರಕ್ಕೂ ಹೆಚ್ಚು ಮಂದಿ ಒಟ್ಟಿಗೆ ಸೇರಿ ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲಾಗುತ್ತಿದೆ ಎಂದರು.ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಬೆಲೆ ಏರಿಕೆ ಬಿಟ್ಟಿ ಭಾಗ್ಯಗಳ ಪ್ರತಿಫಲದಿಂದ ರಾಜ್ಯದ ಜನತೆ ಅನುಭವಿಸುತ್ತಿರುವ ನರಕವಾಗಿದೆ. ರಾಜ್ಯ ಸರ್ಕಾರ ಲೋಟ ಇಟ್ಟು ಚೆಂಬು ಹೊಡೆಯುವ ಕೆಲಸ ಮಾಡುತ್ತಿದೆ. ಗ್ಯಾರೆಂಟಿಗಳ ಅವಶ್ಯಕಥೆ ನಮಗೆ ಬೇಕಿಲ್ಲ ಎಂದು ರಾಜ್ಯದ ಹೆಣ್ಣು ಮಕ್ಕಳು ಹೇಳುತ್ತಿದ್ದಾರೆ. ಕೈಗೆ ಕೆಲಸ ಕೋಡುವ ಕೆಲಗಳನ್ನು ಕೊಡಿ ಅದು ಬಿಟ್ಟು ಬಿಟ್ಟಿ ಬ್ಯಾಗ್ಯಗಳನ್ನು ನೀಡಿ ನಮ್ಮನ್ನ ಸೋಂಬೇರಿಗಳನ್ನಾಗಿ ಮಾಡಬೇಡಿ ಅಭಿಪ್ರಾಯಗಳನ್ನು ವ್ಯಕ್ತ ಪಡಿಸುತ್ತಿದರು.

 ಇದನ್ನೂ ಓದಿ: BBMPಯ ದುಂದುವೆಚ್ಚ: ಅಂಡರ್‌ಪಾಸ್‌ ಲೈಟಿಂಗ್‌ಗೆ ₹3 ಕೋಟಿ ಖರ್ಚು!

ಅಗತ್ಯ ವಸ್ತುಗಳ ದರ ಹೆಚ್ಚಳ

ವಿದ್ಯುತ್, ಹಾಲು, ನೋಂದಣಿ, ಸೇರಿದಂತೆ ದಿನನಿತ್ಯದ ವಸ್ತುಗಳ ಬೆಲೆ ಏರಿಕೆ ಹೊರೆ ರಾಜ್ಯದ ಜನತೆ ಅನುಭವಿಸುತ್ತಿದ್ದಾರೆ, ರಾಜ್ಯದಲ್ಲಿ ಬೆಲೆ ಏರಿಕೆ ಮಾಡಿರುವುದು ಕಡಿಮೆಯಾಗುವ ಸೂಚನೆಗಳಿಲ್ಲ, ಆದರೆ ಇನ್ನಷ್ಟು ಬೆಲೆ ಏರಿಕೆ ಹಾಗುವ ಸಾಧ್ಯತೆಗಳೇ ಹೆಚ್ಚಾಗಿದೆ. ಎಂದು ರಾಜ್ಯ ಸರ್ಕಾರದ ವಿರುದ್ದ ಕಟುವಾಗಿ ಟೀಕಿಸಿದರಲ್ಲದೇ ಇದರ ಪ್ರತಿಭಲವನ್ನು ಮುಂದಿನ ೨೦೨೮ ರ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಎದುರಿಸಲಿದೆ ಎಂದರು.ಕಾರ್ಯಕ್ರಮದಲ್ಲಿ ಶ್ರೀರಾಮ ಸೇನೆಯ ಮುಖಂಡ ರಮೇಶ್‌ರಾಜ್ ಅರಸ್, ನಗರಸಭೆ ಸದಸ್ಯ ವಡಗೂರು ರಾಕೇಶ್, ಮುಖಂಡರಾದ ವಡಗೂರು ರಾಮು, ಬಣಕನಹಳ್ಳಿ ನಟರಾಜ್ ಇದ್ದರು

vuukle one pixel image
click me!