
ಕೊಪ್ಪಳ (ನ.26): ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ಪಾಟೀಲ್ (79) ಅವರು ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗಾಗಿ ತುಮಕೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ಕು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಶರಣಪ್ಪಗೌಡರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ದಿವಂಗತ ಶಿವಶರಣಪ್ಪಗೌಡ ಪಾಟೀಲ್ ಅವರು 1999 ರಿಂದ 2004 ರವರೆಗಿನ ಅವಧಿಯಲ್ಲಿ ಯಲಬುರ್ಗಾ ಕ್ಷೇತ್ರವನ್ನು ಯಶಸ್ವಿಯಾಗಿ ಪ್ರತಿನಿಧಿಸಿದ್ದರು. ಅವರ ನಿಧನದಿಂದಾಗಿ ಕೊಪ್ಪಳ ಜಿಲ್ಲೆಯ ರಾಜಕೀಯ ಮತ್ತು ಸಾಮಾಜಿಕ ವಲಯಕ್ಕೆ ದೊಡ್ಡ ನಷ್ಟ ಉಂಟಾಗಿದೆ. ಅವರು ಪತ್ನಿ ಮತ್ತು ನಾಲ್ಕು ಜನ ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮಾಜಿ ಶಾಸಕರ ಅಂತಿಮ ವಿಧಿವಿಧಾನಗಳು ನಾಳೆ ಯಲಬುರ್ಗಾ ತಾಲೂಕಿನ ಸ್ವಗ್ರಾಮವಾದ ಹುಣಿಸ್ಯಾಳದಲ್ಲಿ ನೆರವೇರಲಿವೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ