ಕೊಪ್ಪಳ: ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಮಾನ ಭಾಗ್ಯ!

Published : Apr 15, 2025, 09:02 AM ISTUpdated : Apr 15, 2025, 09:25 AM IST
ಕೊಪ್ಪಳ: ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಮಾನ ಭಾಗ್ಯ!

ಸಾರಾಂಶ

ತಾಲೂಕಿನ ಬಹದ್ದೂರಬಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಚಿಲವಾಡಗಿ ತಮ್ಮ ಸ್ವಂತ ಖರ್ಚಿನಲ್ಲಿ ೨೪ ವಿದ್ಯಾರ್ಥಿಗಳನ್ನು ಹೈದರಾಬಾದ್‌ಗೆ ವಿಮಾನದ ಮೂಲಕ ಕರೆದುಕೊಂಡು ಹೋಗಲು ಸೋಮವಾರ ೫ರಿಂದ ೮ನೇ ತರಗತಿ ವರೆಗೆ ಲಿಖಿತ ಪರೀಕ್ಷೆ ನಡೆಸಿದ್ದಾರೆ. ಇದರಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ದೊರೆಯಲಿದೆ. ಮಕ್ಕಳಲ್ಲಿ ಓದುವ ಮನೋಭಾವ ಹೆಚ್ಚಿಸುವ ಉದ್ದೇಶದಿಂದ ಶಿಕ್ಷಕರು ಈ ನಿರ್ಧಾರ ಕೈಗೊಂಡಿದ್ದು ಜಿಂದಾಲ್‌ ವಿಮಾನ ನಿಲ್ದಾಣದ ಮೂಲಕ ತೆರಳಲಿದ್ದಾರೆ.

ಕೊಪ್ಪಳ (ಏ.15): ತಾಲೂಕಿನ ಬಹದ್ದೂರಬಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಚಿಲವಾಡಗಿ ತಮ್ಮ ಸ್ವಂತ ಖರ್ಚಿನಲ್ಲಿ ೨೪ ವಿದ್ಯಾರ್ಥಿಗಳನ್ನು ಹೈದರಾಬಾದ್‌ಗೆ ವಿಮಾನದ ಮೂಲಕ ಕರೆದುಕೊಂಡು ಹೋಗಲು ಸೋಮವಾರ ೫ರಿಂದ ೮ನೇ ತರಗತಿ ವರೆಗೆ ಲಿಖಿತ ಪರೀಕ್ಷೆ ನಡೆಸಿದ್ದಾರೆ. ಇದರಲ್ಲಿ ಅತ್ಯಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಮಾನಯಾನ ಭಾಗ್ಯ ದೊರೆಯಲಿದೆ.
ಮಕ್ಕಳಲ್ಲಿ ಓದುವ ಮನೋಭಾವ ಹೆಚ್ಚಿಸುವ ಉದ್ದೇಶದಿಂದ ಶಿಕ್ಷಕರು ಈ ನಿರ್ಧಾರ ಕೈಗೊಂಡಿದ್ದು ಜಿಂದಾಲ್‌ ವಿಮಾನ ನಿಲ್ದಾಣದ ಮೂಲಕ ತೆರಳಲಿದ್ದಾರೆ.

ಪರೀಕ್ಷೆ ಪಾರದರ್ಶಕವಾಗಿ ಇರಲಿ ಎಂಬ ಉದ್ದೇಶದಿಂದ ಹ್ಯಾಟಿ ಮುಂಡರಗಿ ಶಾಲೆಯ ಶಿಕ್ಷಕ ಕೆ.ಎಂ. ಅಲಿ ಪ್ರಶ್ನೆ ಪತ್ರಿಕೆ ತಯಾರಿಕೆ, ಪರೀಕ್ಷೆ ನಡೆಸುವುದು ಹಾಗೂ ಮೌಲ್ಯಮಾಪನ ಮಾಡಿ ೨೪ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ: ಕನಿಷ್ಠ ಸೌಲಭ್ಯಗಳೂ ಇಲ್ಲದೆ ಸೊರಗುತ್ತಿದೆ ಕೊಪ್ಪಳ ವಿವಿ: ಕುಲಪತಿ ಸಂಚಾರಕ್ಕೆ ಕಾರೂ ಇಲ್ಲ!

೫ರಿಂದ ೮ನೇ ತರಗತಿ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ, ಅದರಲ್ಲಿ ೫ನೇ ತರಗತಿಯಲ್ಲಿ ೬, ೬ರಲ್ಲಿ ೬, ೭ರಲ್ಲಿ ೬ ಹಾಗೂ ೮ನೇ ತರಗತಿಯಲ್ಲಿ ೬ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಯಲ್ಲಿ ಹಾಗೂ ಸ್ಪರ್ಧಾ ಮನೋಭಾವ ಮೂಡಲಿ ಎಂಬ ಉದ್ದೇಶದಿಂದ ಮುಖ್ಯೋಪಾಧ್ಯಾಯರು ಇಂತ ಕಾರ್ಯ ಕೈಗೊಂಡಿದ್ದಾರೆ..

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ