ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಕೆಯುಡಬ್ಲ್ಯೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟಿಸಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ಧತೆ ಮತ್ತು ಸಾಧನೆಗಳಿಗಾಗಿ ಈ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ.
ಬೆಂಗಳೂರು (ಫೆ.28): ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡ ಮಾಡುವ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವೃತ್ತಿ ಸೇವೆ, ಸಾಮಾಜಿಕ ಬದ್ದತೆ ಮತ್ತು ಸಾಧನೆಗಳಿಗಾಗಿ ಕೆಯುಡಬ್ಲ್ಯುಜೆ ದತ್ತಿನಿಧಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ
ಕೊಪ್ಪಳದಲ್ಲಿ ಮಾ.9ರಂದು ನಡೆಯಲಿರುವ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಅವರು ತಿಳಿಸಿದ್ದಾರೆ.
ಪ್ರಶಸ್ತಿಗಳ ವಿವರ ಇಂತಿದೆ
ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ:ಸುಬ್ಬು ಹೊಲೆಯಾರ್
ಡಿ.ವಿ.ಜಿ.ಪ್ರಶಸ್ತಿ : ರಾಘವೇಂದ್ರ ಗಣಪತಿ, ವಿಜಯವಾಣಿ
ಎಚ್. ಎಸ್. ದೊರೆಸ್ವಾಮಿ ಪ್ರಶಸ್ತಿ: ಯು.ಜಿ.ಭಟ್, ಉದಯವಾಣಿ, ಹೊನ್ನಾವರ.
ಎಸ್.ವಿ. ಜಯಶೀಲರಾವ್ ಪ್ರಶಸ್ತಿ: ಅನು ಶಾಂತರಾಜು, ಹಿರಿಯ ಪೋಟೋ ಜರ್ನಲಿಸ್ಟ್, ತುಮಕೂರು
ಪಾಟೀಲ್ ಪುಟ್ಟಪ್ಪ(ಪಾಪು) ಪ್ರಶಸ್ತಿ: ಸುಭಾಷ್ ಹೂಗಾರ, ಹಿರಿಯ ಪತ್ರಕರ್ತರು.
ಗೊಮ್ಮಟ ಮಾಧ್ಯಮ ಪ್ರಶಸ್ತಿ: ಎಂ.ಆರ್.ಸತ್ಯನಾರಾಯಣ, ಮೈಸೂರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ