ದಡ್ಡ ಮಕ್ಕಳಿಗೆ ಟೀಸಿ: ಮಕ್ಕಳ ಹಕ್ಕು ಆಯೋಗದ ಸ್ವಯಂಪ್ರೇರಿತ ತನಿಖೆ

Kannadaprabha News   | Kannada Prabha
Published : Jul 15, 2025, 11:50 AM IST
SCHOOL STUDENTS

ಸಾರಾಂಶ

ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡ 100 ಫಲಿತಾಂಶಕ್ಕಾಗಿ ದಡ್ಡ ಮಕ್ಕಳಿಗೆ ಟೀಸಿ ಎನ್ನುವ ಶೀರ್ಷಿಕೆಯಡಿ ಕನ್ನಡಪ್ರಭ ಪ್ರಕಟಿಸಿದ ಸರಣಿ ವರದಿ ಆಧರಿಸಿ ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಕೊಪ್ಪಳ (ಜು.15): ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡ 100 ಫಲಿತಾಂಶಕ್ಕಾಗಿ ದಡ್ಡ ಮಕ್ಕಳಿಗೆ ಟೀಸಿ ಎನ್ನುವ ಶೀರ್ಷಿಕೆಯಡಿ ಕನ್ನಡಪ್ರಭ ಪ್ರಕಟಿಸಿದ ಸರಣಿ ವರದಿ ಆಧರಿಸಿ ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ.

ಕೊಪ್ಪಳ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಪತ್ರ ಬರೆದಿರುವ ಆಯೋಗದ ಅಧ್ಯಕ್ಷ ನಾಗಣ್ಣ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಪಡೆಯುವುದಕ್ಕಾಗಿ 9ನೇ ತರಗತಿಯಲ್ಲಿ ದಡ್ಡ ಮಕ್ಕಳನ್ನು ಗುರುತಿಸಿ ಖಾಸಗಿ ಮತ್ತು ಮೊರಾರ್ಜಿ ಶಾಲೆಯಿಂದ ಟೀಸಿ ಕೊಟ್ಟು ಕಳುಹಿಸಿರುವ ಬಗ್ಗೆ ‘ಕನ್ನಡಪ್ರಭ’ ವರದಿ ಪ್ರಕಟಿಸಿದೆ. ಇದರಿಂದ ಮಕ್ಕಳು ಖಿನ್ನತೆಗೆ ಒಳಗಾಗುವುದು ಹಾಗೂ ಶಿಕ್ಷಣದಿಂದ ದೂರವಾಗಿರುವ ಸಾಧ್ಯತೆ ಇದೆ. ಈ ಕುರಿತು ಕಳೆದ ಮೂರು ವರ್ಷಗಳಲ್ಲಿ ಖಾಸಗಿ ಶಾಲೆ ಮತ್ತು ಮೊರಾರ್ಜಿ ಶಾಲೆಯಿಂದ 9ನೇ ತರಗತಿಯ ಎಷ್ಟು ವಿದ್ಯಾರ್ಥಿಗಳಿಗೆ ಟೀಸಿ ಕೊಟ್ಟು ಕಳುಹಿಸಲಾಗಿದೆ ಎನ್ನುವ ಮಾಹಿತಿ ನೀಡುವಂತೆ ತಾಕಿತು ಮಾಡಿದ್ದಾರೆ.

ಮೂರು ವರ್ಷಗಳ ಅವಧಿಯಲ್ಲಿ ಮಕ್ಕಳ ಹಾಜರಾತಿಯನ್ನು ಸರಿಯಾಗಿ ಪರಾಮರ್ಶೆ ಮಾಡಿದರೆ ಸತ್ಯ ಗೊತ್ತಾಗುತ್ತದೆ. ಹೀಗಾಗಿ ಮೂರು ವರ್ಷದ 9 ಮತ್ತು 10ನೇ ತರಗತಿಯ ದಾಖಲಾದ ಮಕ್ಕಳ ಅಂಕಿ-ಸಂಖ್ಯೆಯನ್ನು 7 ದಿನದ ಒಳಗಾಗಿ ನೀಡುವಂತೆ ಕೋರಿದ್ದಾರೆ.

9ನೇ ತರಗತಿ ಮಕ್ಕಳಿಗೆ ಟೀಸಿ ನೀಡುವ ಬಗ್ಗೆ ಈ ಹಿಂದೆಯೂ ಮೌಖಿಕವಾಗಿಯೂ ಆಯೋಗದ ಮುಂದೆ ದೂರು ಬಂದಿವೆ. ಹೀಗಾಗಿ ಆಯೋಗ ಸ್ವಯಂ ದೂರು ದಾಖಲಿಸಿಕೊಳ್ಳುತ್ತಿದ್ದು, ಇದರಲ್ಲಿ ಸತ್ಯ ಗೊತ್ತಾಗುತ್ತದೆ. ಅಂಥ ಶಾಲೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮವಾಗಬೇಕು ಮತ್ತು ಇದರಿಂದ ತೊಂದರೆಗೆ ಒಳಗಾದ ಮಕ್ಕಳಿಗೂ ನ್ಯಾಯ ಕೊಡಿಸಬೇಕಾಗಿದೆ.
-ಶೇಖರಗೌಡ ರಾಮತ್ನಾಳ, ಸದಸ್ಯ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ: ಯತೀಂದ್ರ ಸಿದ್ದರಾಮಯ್ಯ
ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ