ಸಚಿವ ಶ್ರೀನಿವಾಸ ಪೂಜಾರಿಗೆ ಕೊರೋನಾ ಪಾಸಿಟಿವ್

By Suvarna News  |  First Published Apr 10, 2021, 4:21 PM IST

 ಮುಜುರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಕೊರೋನಾ ಸೋಂಕು ತಗುಲಿದೆ. ಸದ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
 


ಬೆಂಗಳೂರು (ಏ.10):   ಮುಜುರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಕೊರೋನಾ ಸೋಂಕು ತಗುಲಿದೆ. 

ಈ ಬಗ್ಗೆ ಸಚಿವ ಪೂಜಾರಿ  ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೇ ತಮ್ಮ ಸಂಪರ್ಕಕ್ಕೆ ಬಂದವರು ಮುನ್ನೆಚ್ಚರಿಕಾ ಕ್ರಮವಾಗಿ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ. 

Latest Videos

undefined

 

Positive ಕಾರಣಕ್ಕೆ ನಾನು ಆಸ್ಪತ್ರೆಗೆ ದಾಖಲಾಗಿದ್ದು, ಅನಿವಾರ್ಯವಾದರೆ ದೂರವಾಣಿ ಮೂಲಕ ಸಂಪರ್ಕಿಸಬಹುದು. ಒಂದೆರಡು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು Covid-19 ಟೆಸ್ಟ್ ಮಾಡಿಸಿಕೊಳ್ಳಿ.

— Kota Shrinivas Poojari (@KotasBJP)

ಸದ್ಯ ಸಚಿವ ಪೂಜಾರಿ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು , ಅನಿವಾರ್ಯವಿದ್ದಲ್ಲಿ ದೂರವಾಣಿ ಮೂಲಕ ಸಂಪರ್ಕಿಸಲು ಮನವಿ ಮಾಡಿದ್ದಾರೆ. 

ಒಂದೆರಡು ದಿನಗಳಲ್ಲಿ ಸಂಪರ್ಕಕ್ಕೆ ಬಂದವರು ಟೆಸ್ಟ್ ಮಾಡಿಸಿಕೊಳ್ಳಿ ಎಂದಿದ್ದಾರೆ. 

click me!