ದಿನಬೆಳಗಾದ್ರೆ ಸಿದ್ದರಾಮಯ್ಯರ ಹೆಸರು ದುರ್ಬಳಕೆ ನಿಲ್ಲಿಸಿ: ಚುನಾವಣೆಗೆ ಬೇಕೇ ಬೇಕು ಎಂದು ಜಾರಕಿಹೊಳಿಗೆ ಡಿಕೆಶಿ ಪರೋಕ್ಷ ತಿರುಗೇಟು

Published : Feb 17, 2025, 09:10 AM ISTUpdated : Feb 17, 2025, 09:15 AM IST
ದಿನಬೆಳಗಾದ್ರೆ ಸಿದ್ದರಾಮಯ್ಯರ ಹೆಸರು ದುರ್ಬಳಕೆ ನಿಲ್ಲಿಸಿ: ಚುನಾವಣೆಗೆ ಬೇಕೇ ಬೇಕು ಎಂದು ಜಾರಕಿಹೊಳಿಗೆ ಡಿಕೆಶಿ ಪರೋಕ್ಷ ತಿರುಗೇಟು

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಚುನಾವಣೆಗಳಿಗೂ ಅವಶ್ಯಕ, ಆದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಗಳಿಂದ ಸಂಸತ್ ಚುನಾವಣೆವರೆಗೆ ಎಲ್ಲದಕ್ಕೂ ಸಿದ್ದರಾಮಯ್ಯ ನಾಯಕತ್ವ ಅಗತ್ಯ ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರು (ಫೆ.17) : ಮುಖ್ಯಮಂತ್ರಿ ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಸ್ಥಳೀಯ ಸಂಸ್ಥೆಗಳಿಂದ ಸಂಸತ್‌ ಚುನಾವಣೆವರೆಗೆ ಮುಂದಿನ ಎಲ್ಲಾ ಚುನಾವಣೆಗಳಿಗೂ ಅವರು ಬೇಕೇ ಬೇಕು. ಆದರೆ ದಿನಬೆಳಗಾದರೆ ಅವರ ಹೆಸರು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತೀಕ್ಷ್ಣವಾಗಿ ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ ಮುಂದಿನ ಚುನಾವಣೆಗೂ ಸಿದ್ದರಾಮಯ್ಯ ಅವರು ಬೇಕೆ ಬೇಕು ಎಂಬ ಕೆಲ ಸಚಿವರ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಅವರು ಎಲ್ಲಾ ಚುನಾವಣೆಗೂ ಬೇಕು. ಜಿಲ್ಲಾ ಪಂಚಾಯತಿ, ತಾಲೂಕು ಪಂಚಾಯ್ತಿ, ವಿಧಾನ ಸಭೆ, ಸಂಸತ್ ಚುನಾವಣೆ ಎಲ್ಲದಕ್ಕೂ ಬೇಕು. ಅದರಲ್ಲಿ ಎರಡನೇ ಪ್ರಶ್ನೆಯೇ ಇಲ್ಲ. ಅವರನ್ನು ಪಕ್ಷ ಎರಡು ಬಾರಿ ಮುಖ್ಯಮಂತ್ರಿ ಮಾಡಿದೆ. ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಮುಖ್ಯಮಂತ್ರಿ ಆಗಿ ಉತ್ತಮ ಕೆಲಸ ಮಾಡುತ್ತಿದ್ದು, ದಿನ ಬೆಳಗಾದರೆ ಅವರ ಹೆಸರು ದುರ್ಬಳಕೆ ಮಾಡಿಕೊಳ್ಳುವುದು ಅಥವಾ ಅವರ ಹೆಸರು ಮಾಧ್ಯಮಗಳಿಗೆ ಆಹಾರವಾಗುವಂತೆ ಗೊಂದಲದ ಹೇಳಿಕೆ ಬೇಡ ಎಂದು ತಿಳಿಸಿದರು.

ಇದನ್ನೂ ಓದಿ: ಈಗಷ್ಟೇ ಬೆಳೆಯುತ್ತಿದ್ದೇನೆ ಎಡುವುದು ಸಹಜ, ರಾಜಕೀಯದಲ್ಲಿ ನನ್ನ ಗುರಿ ಸ್ಪಷ್ಟವಾಗಿದೆ: ಬಿವೈ ವಿಜಯೇಂದ್ರ

ಪಕ್ಷದಲ್ಲಿ ಗೊಂದಲದ ಹೇಳಿಕೆ ಯಾಕೆ ಎಂದು ಕೇಳಿದಾಗ, ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಪಕ್ಷ ದಿನ ನಿತ್ಯ ಎಲ್ಲವನ್ನೂ ಗಮನಿಸುತ್ತಿದೆ ಎಂದಷ್ಟೇ ಹೇಳಿದರು.

 ಚುನಾವಣೆಗಳಿಗೆ ಕಾಂಗ್ರೆಸ್​ ಸಿದ್ಧತೆ 

ಪಕ್ಷದ ಚುನಾವಣಾ ಸಿದ್ಧತೆ ಬಗ್ಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ. ನ್ಯಾಯಾಲಯದ ಸಲಹೆ, ಸೂಚನೆಗಾಗಿ ಕಾಯುತ್ತಿದ್ದೇವೆ. ಬೃಹತ್ ಬೆಂಗಳೂರು ಚುನಾವಣೆಗೂ ತಯಾರಿ ನಡೆಸಿದ್ದೇವೆ. ಸಾರ್ವಜನಿಕರ‌ ಅಭಿಪ್ರಾಯ ಸಂಗ್ರಹ ನಡೆಯುತ್ತಿದೆ. ಯಾವಾಗ ಬೇಕಾದರೂ ಚುನಾವಣೆ ಘೋಷಣೆ ಆಗಬಹುದು. ಅದಕ್ಕೆ‌ ನಾವೂ ತಯಾರಿ ಮಾಡಿಕೊಳ್ಳುತ್ತಿದ್ದೇವೆ ಎಂದರು.

ಇನ್ನು ಜಿಪಂ, ತಾಪಂ ಹಾಗೂ ಪಾಲಿಕೆ ಚುನಾವಣೆಗೆ ಸಮಿತಿ ರಚನೆ ಮಾಡುತ್ತಿದ್ದೇನೆ. ಮಾರ್ಚ್ ತಿಂಗಳೊಳಗೆ ಪ್ರವಾಸ ಮಾಡಿ ಎಲ್ಲೆಲ್ಲಿ ಸಿದ್ಧತೆ, ಹೊಂದಾಣಿಕೆ ಹಾಗೂ ಮೀಸಲಾತಿ ಹಂಚಿಕೆ ಬಗ್ಗೆ ವರದಿ ಸಲ್ಲಿಸಬೇಕು ಎಂಬ ಕುರಿತು ಜವಾಬ್ದಾರಿ ಹಂಚುತ್ತಿದ್ದೇನೆ ಎಂದರು.

ಇದನ್ನೂ ಓದಿ: ಮುಂದಿನ ಚುನಾವಣೆ ಗೆಲ್ಲಬೇಕು ಎಂದರೆ ನಮಗೆ ಸಿದ್ದರಾಮಯ್ಯ ಬೇಕೇಬೇಕು: ಸತೀಶ್ ಜಾರಕಿಹೊಳಿ

 104 ಕಚೇರಿ ಕಟ್ಟಲು ಮುಂದೆ ಬಂದಿದ್ದಾರೆ:  

 ಮುಖಂಡರು, ಕಾರ್ಯಕರ್ತರು  104 ಕಾಂಗ್ರೆಸ್‌ ಕಚೇರಿ ಕಟ್ಟಲು ಮುಂದೆ ಬಂದಿದ್ದಾರೆ. ಕಟ್ಟಡ ನಿರ್ಮಾಣ ಕಾಮಗಾರಿಗೂ ಸಮಿತಿ ರಚನೆ‌ ಮಾಡಿದ್ದೇವೆ. ಕಾಂಗ್ರೆಸ್ ಹೆಸರಿನಲ್ಲಿ ಭೂಮಿ ನೋಂದಣಿ ಆಗಿದ್ದರೆ ಮಾತ್ರ ಕಚೇರಿ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಬೇಕು ಎಂದು ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಿದೆ ಎಂದು ಹೇಳಿದರು.

ಮಾ.10ರೊಳಗೆ ಆನಂದ್‌ರಾವ್‌  ವೃತ್ತದ ಬಳಿ ಕಚೇರಿಗೆ ಶಂಕು 

ಬೆಂಗಳೂರಿನ‌ ಆನಂದರಾವ್ ಸರ್ಕಲ್ ಬಳಿಯ ಜಾಗದಲ್ಲಿ (ಹಳೆಯ ಜೆಡಿಎಸ್ ಕಚೇರಿ) ಕಾಂಗ್ರೆಸ್‌ ಕಚೇರಿ ನಿರ್ಮಾಣದ ನಕ್ಷೆ ಸಿದ್ಧವಾಗಿದೆ. ಮಾ.10ರೊಳಗೆ ಎಐಸಿಸಿ ನಾಯಕರು ದಿನಾಂಕ ನೀಡಿದರೆ ಶಂಕುಸ್ಥಾಪನೆಗೆ ಅಡಿಗಲ್ಲು ಹಾಕುತ್ತೇವೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌