ಜಪ್ತಿ ಮಾಡಿದ್ರೆ ಬಿಡಿಸಿಕೊಡಲು ಹೋಗ್ತೀವಿ: ಡಿಕೆಶಿ

Kannadaprabha News   | Asianet News
Published : Jan 26, 2021, 07:23 AM IST
ಜಪ್ತಿ ಮಾಡಿದ್ರೆ ಬಿಡಿಸಿಕೊಡಲು ಹೋಗ್ತೀವಿ: ಡಿಕೆಶಿ

ಸಾರಾಂಶ

ಜಪ್ತಿ ಮಾಡಿದರೆ ಬಿಡಿಸಿಕೊಡಲು ಹೋಗುತ್ತೇವೆ. ಕೇಸ್‌ ಹಾಕಿದರೆ, ಜೈಲ್‌ ಬರೋ ಚಳವಳಿ ಮಾಡ್ತೀವಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌  ಹೇಳಿದ್ದಾರೆ

ಮೈಸೂರು (ಜ.26): ಮಂಗಳವಾರ ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆಗೆ ರೈತರು ಟ್ರ್ಯಾಕ್ಟರ್‌ ಸಮೇತ ಬರಲಿದ್ದಾರೆ. ಒಮ್ಮೆ ಟ್ರ್ಯಾಕ್ಟರ್‌ ಜಪ್ತಿ ಮಾಡಿದರೆ ಅದನ್ನು ನಾವೇ ಬಿಡಿಸಿಕೊಡಲು ಹೋಗ್ತೀವಿ. ಕೇಸ್‌ ಹಾಕಿದರೆ, ಜೈಲ್‌ ಬರೋ ಚಳವಳಿ ಮಾಡ್ತೀವಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರಿಗೂ ನೋವು ಹೇಳಿಕೊಳ್ಳುವ ಹಕ್ಕಿದೆ. ರೈತರ ಬಾಯಿ ಮುಚ್ಚಿಸುವ ಕೆಲಸ ಮಾಡಬಾರದು. ಕಾಂಗ್ರೆಸ್‌ ಪಕ್ಷದ ಪ್ರತಿಭಟನೆ ವೇಳೆಯೂ ತಡೆದಿದ್ದರು. ನಮ್ಮದು ಪಾರ್ಟಿ ಪ್ರತಿಭಟನೆ ಆಗಿತ್ತು. ಆದರೆ, ರೈತರ ಪ್ರತಿಭಟನೆ ಪರವಾಗಿ ಸರ್ಕಾರವೇ ನಿಂತುಕೊಳ್ಳಬೇಕು. ಅವರು ರೈತ ಧ್ವನಿಯಾಗಬೇಕು ಎಂದು ತಿಳಿಸಿದರು.

'ಈ ಸರ್ಕಾರ ಬಲಿಷ್ಠವಾಗಿದೆ, ಎಲ್ಲರೂ ಒಗ್ಗಟ್ಟಾಗಿದ್ದಾರೆ' ...

ಪೊಲೀಸರೇ ನೀವು ಸರ್ಕಾರದ ಕೈಗೊಂಬೆಯಾಬೇಡಿ, ನೀವು ಎಲ್ಲರಿಗೂ ಒಂದೇ ನ್ಯಾಯ ಕೊಡಿ. ಸುಪ್ರೀಂ ಕೋರ್ಟ್‌ ಸಹ ಪ್ರತಿಭಟನೆ ಮಾಡಬೇಡಿ ಎಂದು ಹೇಳಿಲ್ಲ. ಜ.26 ರಂದು ರಜಾ ಇದೆ, ಯಾವ ಟ್ರಾಫಿಕ್‌ ಸಮಸ್ಯೆ ಆಗುವುದಿಲ್ಲ. ಅನ್ನದಾತ ಅನ್ನ ಕೊಟ್ಟರೆ ಮಾತ್ರ ನಾವು ಇರೋದು. ಜಿಲ್ಲೆಗಳಲ್ಲಿ ರೈತರನ್ನು ತಡೆಯುತ್ತಿದ್ದಾರೆ. ಚಾಲಕರನ್ನು ಹೆದರಿಸುತ್ತಿದ್ದಾರೆ. ಕಾಂಗ್ರೆಸ್‌ ರೈತರ ಬೆಂಬಲವಾಗಿ ನಿಂತುಕೊಳ್ಳುತ್ತದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ