
ಬೆಂಗಳೂರು, [ಮಾ.21]: ದೇಶದಾದ್ಯಂತ ಸೋಂಕಿತರ ಸಂಖ್ಯೆ ದಿನದಿನಕ್ಕೆ ಏರುತ್ತಲೇ ಇದೆ. ದೇಶಾದ್ಯಂತ 300ಕ್ಕೂ ಹೆಚ್ಚು ಮಂದಿಗೆ ಸೋಂಕು ದೃಢವಾಗಿದೆ. ಮಹಾರಾಷ್ಟ್ರದಲ್ಲಂತೂ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಏರುತ್ತಲೇ ಇದ್ದು, ಒಟ್ಟು 65ಕ್ಕೇರಿದೆ.
ಇನ್ನು ಕರ್ನಾಟಕದಲ್ಲಿ ಶನಿವಾರ ಒಂದೇ ದಿನ 5 ಜನರಿಗೆ ಕೊರೋನಾ ಇರುವುದು ಪತ್ತೆಯಾಗಿದೆ. ಇದರಿಂದ ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.ಮತ್ತೊಂದೆಡೆ ಡೆಡ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಬೆಳಗ್ಗೆ 7 ರಿಂದ ಸಂಜೆ 7ರ ವರೆಗೆ ಜನತಾ ಕರ್ಫ್ಯೂ ಪಾಲಿಸುವಂತೆ ದೇಶದ ಜನತೆಗೆ ಮನವಿ ಮಾಡಿಕೊಂಡಿದ್ದಾರೆ. ಇದಕ್ಕೆ ದೇಶದಾದ್ಯಂತ ಪಕ್ಷಾತೀತವಾಗಿ ವ್ಯಾಪಕ ಬೆಂಬಲವಾಕ್ತವಾಗಿದೆ.
ಜನತಾ ಕರ್ಫ್ಯೂ ಬಗ್ಗೆ ಯಡಿಯೂರಪ್ಪ ವಿಶೇಷ ಮನವಿ: ಏನು ಹೇಳಿದ್ದಾರೆ ನೊಡಿ..!
ಇನ್ನು ಈ ಬಗ್ಗೆ ಮಾತನಾಡಿದ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಪ್ರಧಾನಿಯವರ ಭಾಷಣಕ್ಕೆ ನಮ್ಮ ಬೆಂಬಲವಿದೆ ಎಂದಿದ್ದಾರೆ.
ಕೊರೊನಾ ವೈರಸ್ ಮಹಾಮಾರಿಯಾಗಿ ಕಾಡುತ್ತಿದೆ, ಎಲ್ಲರೂ ಒಟ್ಟಾಗಿ ಸೇರಿ ಇದನ್ನ ಎದುರಿಸಬೇಕಿದೆ. ತಡವಾಯಿತೋ ಇಲ್ಲವೇ ಬೇಗ ಆಯ್ತೋ ಗೊತ್ತಿಲ್ಲ. ಆದರೆ ಜಾಗೃತಿ ಮೂಡಿಸುವ ಕೆಲಸ ಮಾಡ್ತಿದ್ದೇವೆ. ಜನತಾ ಕರ್ಫ್ಯೂ ಕುರಿತ ಪ್ರಧಾನಿಯವರ ಭಾಷಣಕ್ಕೆ ನಮ್ಮ ಬೆಂಬಲವಿದೆ. ನಮ್ಮ ಕಾಂಗ್ರೆಸ್ ಪಕ್ಷ ರೋಗ ನಿಯಂತ್ರಣಕ್ಕೆ ಬೇಕಾದ ಸಹಕಾರ ನೀಡುತ್ತದೆ ಎಂದರು.
ಅಷ್ಟಕ್ಕೂ ಮೋದಿ ಏಕೆ #JanataCurfewಗೆ ಕರೆ ನೀಡಿದ್ದು?
ಜೊತೆಗೆ, ರಾಜ್ಯದ ಜನರೂ ಸಹ ಕೈಜೋಡಿಸಬೇಕಿದೆ. ಕೊರೊನಾ ನಿಯಂತ್ರಣಕ್ಕಾಗಿಯೇ ವಿಶೇಷ ಪ್ಯಾಕೇಜ್ ಘೋಷಿಸಬೇಕು. ಪ್ರಸ್ತುತ ಬಜೆಟ್ ಅಧಿವೇಶನದಲ್ಲಿಯೇ ಈ ಪ್ಯಾಕೇಜ್ನ್ನು ಘೋಷಿಸಬೇಕು. ಯಾವುದರಲ್ಲಿ ಕಡಿಮೆ ಮಾಡಿದರೂ ಸರಿಯೇ. ಎಲ್ಲ ಸಾಮಾನ್ಯ ವರ್ಗದ ಪರವಾಗಿ ಸರ್ಕಾರ ನಿಲ್ಲಬೇಕು ಎಂದು ಡಿಕೆಎಸ್ ಇದೇ ವೇಳೆ ರಾಜ್ಯ ಸರ್ಕಾರಕ್ಕೂ ಮನವಿ ಮಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ