ಕಾಂಗ್ರೆಸ್‌ ಸ್ವಾತಂತ್ರ್ಯ ನಡಿಗೆಗೆ 1 ಲಕ್ಷ ಜನ: ಡಿ.ಕೆ.ಶಿವಕುಮಾರ್‌

Published : Jul 12, 2022, 05:00 AM IST
ಕಾಂಗ್ರೆಸ್‌ ಸ್ವಾತಂತ್ರ್ಯ ನಡಿಗೆಗೆ 1 ಲಕ್ಷ ಜನ: ಡಿ.ಕೆ.ಶಿವಕುಮಾರ್‌

ಸಾರಾಂಶ

‘ಬೆಂಗಳೂರು ನಗರದಲ್ಲಿ ಆಗಸ್ಟ್‌ 15 ರಂದು ಹಮ್ಮಿಕೊಂಡಿರುವ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮದಲ್ಲಿ 1 ಲಕ್ಷ ಮಂದಿ ಭಾಗವಹಿಸುವಂತೆ ಮಾಡಿ ರಾಷ್ಟ್ರೀಯ ದಾಖಲೆ ನಿರ್ಮಿಸಬೇಕು. ಇದಕ್ಕಾಗಿ ಮುಂದಿನ 1 ತಿಂಗಳ ಅವಧಿಯಲ್ಲಿ 70-80 ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು (ಜು.12): ‘ಬೆಂಗಳೂರು ನಗರದಲ್ಲಿ ಆಗಸ್ಟ್‌ 15 ರಂದು ಹಮ್ಮಿಕೊಂಡಿರುವ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮದಲ್ಲಿ 1 ಲಕ್ಷ ಮಂದಿ ಭಾಗವಹಿಸುವಂತೆ ಮಾಡಿ ರಾಷ್ಟ್ರೀಯ ದಾಖಲೆ ನಿರ್ಮಿಸಬೇಕು. ಇದಕ್ಕಾಗಿ ಮುಂದಿನ 1 ತಿಂಗಳ ಅವಧಿಯಲ್ಲಿ 70-80 ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಅರಮನೆ ಮೈದಾನದಲ್ಲಿ ಸೋಮವಾರ ನಡೆದ ‘ಯುವ ಧ್ವನಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15 ರಂದು ಬೆಂಗಳೂರಿನಲ್ಲಿ ಸ್ವಾತಂತ್ರ್ಯ ನಡಿಗೆ ಹಮ್ಮಿಕೊಳ್ಳಲಾಗಿದೆ. ಕನಿಷ್ಠ 1 ಲಕ್ಷ ಜನರು ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜದೊಂದಿಗೆ ಹೆಜ್ಜೆ ಹಾಕಬೇಕು. ಇದಕ್ಕಾಗಿ ದೂರದ ಜಿಲ್ಲೆಗಳ ಪ್ರತಿ ವಿಧಾನಸಭಾ ಕ್ಷೇತ್ರದಿಂದ 500 ರಿಂದ 1 ಸಾವಿರ ಜನರು ಹಾಗೂ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳ ಪ್ರತಿ ಕ್ಷೇತ್ರದಿಂದ 3 ಸಾವಿರ ಜನ ಭಾಗವಹಿಸಬೇಕು’ ಎಂದು ಕರೆ ನೀಡಿದರು.

ಸಿದ್ದು 75ನೇ ಜನ್ಮದಿನ ಕಾಂಗ್ರೆಸ್‌ ಪಕ್ಷದಿಂದಲೇ ಆಚರಣೆ: ಡಿಕೆಶಿ

‘ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಮುಂದಿನ ಒಂದು ತಿಂಗಳ ಅವಧಿಯಲ್ಲಿ ನಾನು 70-80 ಕ್ಷೇತ್ರಗಳ ಪ್ರವಾಸ ಮಾಡುತ್ತೇನೆ. ಅಲ್ಲದೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರು ಹಾಗೂ ಇತರೆ ನಾಯಕರು ಕೂಡ ಪ್ರವಾಸ ಮಾಡುವಂತೆ ಮನವಿ ಮಾಡುತ್ತೇನೆ’ ಎಂದು ಹೇಳಿದರು.

ಬಸವನಗುಡಿ ಮೈದಾನದಲ್ಲಿ ಆಯೋಜನೆ: ‘ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮವನ್ನು ಬಸವನಗುಡಿ ಮೈದಾನದಲ್ಲಿ ಆಯೋಜಿಸಲು ಅನುಮತಿ ಕೋರಿ ಅರ್ಜಿ ಸಲ್ಲಿಸಲಾಗಿದೆ. ಇದು ಪಕ್ಷದ ಕಾರ್ಯಕ್ರಮ ಅಲ್ಲ. ದೇಶದ ಕಾರ್ಯಕ್ರಮ. ಇದಕ್ಕೆ ಅನುಮತಿ ನೀಡುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೂ ನಾನು ಮನವಿ ಮಾಡುತ್ತೇನೆ’ ಎಂದರು.

ನನಗೆ ಸಿದ್ದರಾಮೋತ್ಸವಕ್ಕಿಂತ ಸ್ವಾತಂತ್ರ್ಯ ಅಮೃತ ಮಹೋತ್ಸವ ಮುಖ್ಯ: ಡಿಕೆಶಿ

‘ಯುವ ಕಾರ್ಯಕರ್ತರೆಲ್ಲರೂ ಅಂದು ಫ್ರೀಡಂ ಮಾರ್ಚ್‌ನಲ್ಲಿ ಭಾಗವಹಿಸಬೇಕು. ನಾನು ನಿಮ್ಮನ್ನು ಮತ್ತೆ ಜೂಮ… ಹಾಗೂ ವಿಡಿಯೋ ಸಂವಾದದ ಮೂಲಕ ಸಂಪರ್ಕಿಸುತ್ತೇನೆ. ಕಾರ್ಯಕ್ರಮದ ಯಶಸ್ಸಿನ ಮೂಲಕ ರಾಜ್ಯವೇ ನಿಮ್ಮ ಶಕ್ತಿ, ಸಂಘಟನೆಯನ್ನು ಕಂಡು ಆಶ್ಚರ್ಯ ಪಡಬೇಕು. ಇದೊಂದು ಪಕ್ಷಾತೀತ ಹೋರಾಟವಾಗಿದ್ದು, ನೀವು ನಿಮ್ಮ ಕುಟುಂಬ ಸದಸ್ಯರನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಬನ್ನಿ. ಬೇರೆ ಪಕ್ಷದವರನ್ನು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮಾಡಿ’ ಎಂದು ಕರೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬೆಂಗಳೂರು: ನಗರದಲ್ಲಿ 1000ಕ್ಕೂ ಅಧಿಕ ಅಪಾಯಕಾರಿ ಮರ ಪತ್ತೆ!
ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ