ಮೊದಲು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಸುಂಕ ಇಳಿಸಲಿ: ಡಿಕೆಶಿ

Published : Apr 28, 2022, 07:43 AM IST
ಮೊದಲು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಸುಂಕ ಇಳಿಸಲಿ: ಡಿಕೆಶಿ

ಸಾರಾಂಶ

*   ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಪ್ರಧಾನಿಗಳು ರಾಜ್ಯಗಳ ಬದಲು ದೇಶದ ವಿಚಾರವಾಗಿ ಮಾತನಾಡಬೇಕು *  ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸುಂಕ ಕಡಿತಗೊಳಿಸಿ ಮಾದರಿಯಾಗಲಿ *  ಪೊಲೀಸರನ್ನು ಪಕ್ಷದ ಕಾರ್ಯಕರ್ತರಂತೆ ಬಳಸಿಕೊಳ್ಳಲು ಬಿಜೆಪಿ ಯತ್ನ 

ಬೆಂಗಳೂರು(ಏ.28):  ಬಿಜೆಪಿ(BJP) ಆಡಳಿತವಿರುವ ರಾಜ್ಯಗಳಲ್ಲಿ ಇಂಧನ ದರದ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಬೇಕು. ನಂತರ ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಗೆ ಸುಂಕ ಕಡಿತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಸಲಹೆ ನೀಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌(DK Shivakumar) ತಿರುಗೇಟು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ(Narendra Modi) ಅವರು ವಿರೋಧ ಪಕ್ಷಗಳು ಆಡಳಿತದಲ್ಲಿರುವ ರಾಜ್ಯಗಳಿಗೆ ಇಂಧನ ದರದ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸುವಂತೆ ಸಲಹೆ ನೀಡಿದ್ದಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದು, ಪ್ರಧಾನಿಗಳು ರಾಜ್ಯಗಳ ಬದಲು ದೇಶದ ವಿಚಾರವಾಗಿ ಮಾತನಾಡಬೇಕು. ಮೊದಲು ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸುಂಕ ಕಡಿತಗೊಳಿಸಿ ಮಾದರಿಯಾಗಲಿ ಎಂದು ಒತ್ತಾಯಿಸಿದರು.

ಕೋರ್ಟ್ ಮಹತ್ವದ ತೀರ್ಪು, ಡಿಕೆ ಶಿವಕುಮಾರ್‌ಗೆ ನಿಂದಿಸಿದ್ದ ವ್ಯಕ್ತಿಗೆ ಜೈಲು ಶಿಕ್ಷೆ

ಪ್ರತಿ ಪೆಟ್ರೋಲ್‌ ಬಂಕ್‌ಗಳಲ್ಲೂ ಮೋದಿ ಅವರು ಸಿಲಿಂಡರ್‌ ನೀಡುವ ಫೋಟೋ ಹಾಕಲಾಗಿದೆ. ಆದರೆ ಅನಿಲ ಬೆಲೆ ಗಗನಕ್ಕೇರಿ ಜನ ಸಾಮಾನ್ಯರು ಸಂಕಷ್ಟ ಅನುಭವಿಸುವಂತಾಗಿದೆ. ಈಗ ಸಿಲಿಂಡರ್‌ಗಳ ಬೆಲೆ ಎಷ್ಟಿದೆ, ಸಿಲಿಂಡರ್‌ಗೆ ನೀಡುತ್ತಿದ್ದ ಸಬ್ಸಿಡಿ ಏನಾಯಿತು ಎಂಬುದನ್ನು ಜನತೆಗೆ ತಿಳಿಸಬೇಕು. ಫೋಟೋ ಹಾಕಿಕೊಳ್ಳುವುದಾದರೆ ಅದರ ಪಕ್ಕದಲ್ಲೇ ಅನಿಲ ಸಿಲಿಂಡರ್‌ ಬೆಲೆಯನ್ನೂ ಹಾಕಬೇಕು ಅಲ್ಲವೇ ಎಂದು ಪ್ರಶ್ನಿಸಿದರು.

ಕೊರೋನಾ ಕೇಸ್‌ ಏಕಪಕ್ಷೀಯ:

ಕೊರೋನಾ(Coronavirus) ಹಿನ್ನೆಲೆಯಲ್ಲಿ ನಾವು ಎಚ್ಚರಿಕೆ ವಹಿಸಬೇಕು. ಅದೇ ಸಮಯದಲ್ಲಿ ಜನರ ಬಗ್ಗೆಯೂ ಯೋಚಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಇದು ಸರ್ಕಾರದ ಜವಾಬ್ದಾರಿಯಾಗಿದ್ದು ನಾವು ಹಸ್ತಕ್ಷೇಪ ಮಾಡುವುದಿಲ್ಲ. ಆದರೆ ಕೊರೋನಾ ಹೆಸರಿನಲ್ಲಿ ಸರ್ಕಾರದ ವಿರುದ್ಧ ನಡೆಯುವ ಪ್ರತಿಭಟನೆಗಳನ್ನು ಹತ್ತಿಕ್ಕಲಾಗುತ್ತಿದೆ. ನನ್ನ ಮೇಲೆಯೇ ಹಲವು ಪ್ರಕರಣ ದಾಖಲಿಸಿದ್ದಾರೆ. ಆದರೆ ಬಿಜೆಪಿಯವರ ವಿರುದ್ಧ ಪ್ರಕರಣ ದಾಖಲಾಗಿಲ್ಲ ಎಂದು ಟೀಕಿಸಿದರು.

ಪೊಲೀಸರನ್ನು(Police) ಪಕ್ಷದ ಕಾರ್ಯಕರ್ತರಂತೆ ಬಳಸಿಕೊಳ್ಳಲು ಬಿಜೆಪಿ ಯತ್ನಿಸುತ್ತಿದೆ. ಉಡುಪಿಯಲ್ಲಿ ಪೊಲೀಸರಿಗೆ ಸಮವಸ್ತ್ರ ಬದಲು ಕೇಸರಿ ಬಟ್ಟೆತೊಡಿಸಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ನೈತಿಕ ಪೊಲೀಸ್‌ಗಿರಿಗೆ ಬೆಂಬಲ ಸೂಚಿಸಿದ್ದಾರೆ ಎಂದು ಆರೋಪಿಸಿದರು.

ಕ್ಲಾರೆನ್ಸ್‌ ಶಾಲೆಯಲ್ಲಿ ಬೈಬಲ್‌(Bibal) ಕಲಿಸುವುದಕ್ಕೆ ಸಂಬಂಧಿಸಿದಂತೆ ಉದ್ಭವಿಸಿರುವ ವಿವಾದಕ್ಕೆ ಪ್ರತಿಕ್ರಿಯಿಸಿದ ಅವರು, ಈಗ ಶಾಲೆಗಳಲ್ಲಿ ಯಾವ ರೀತಿ ವ್ಯವಸ್ಥೆಗಳು ಜಾರಿಯಲ್ಲಿವೆಯೋ ಅವುಗಳನ್ನು ಮುಂದುವರಿಯಲು ಬಿಡಬೇಕು. ದೇಶದಲ್ಲಿ ಸಂವಿಧಾನವಿದ್ದು, ಅದರಂತೆ ನಾವು ನಡೆಯಬೇಕು ಎಂದು ಉತ್ತರಿಸಿದರು.

ಮುದ್ರಣ ಕಾಗದದ ಜಿಎಸ್‌ಟಿ ಇಳಿಸಿ: ಮೋದಿಗೆ ಸಿದ್ದು ಪತ್ರ

ಬೆಂಗಳೂರು:  ಪ್ರಜಾಪ್ರಭುತ್ವದ ಕಾವಲಿಗೆ ನಿಂತಿರುವ ಮುದ್ರಣ ಮಾಧ್ಯಮಕ್ಕೆ ತನ್ನದೇ ಆದ ಚರಿತ್ರೆ ಇದೆ. ಆದರೆ ಕೇಂದ್ರ ಸರ್ಕಾರ ಮುದ್ರಣ ಕಾಗದದ ಮೇಲಿ ವಿಧಿಸುತ್ತಿದ್ದ ಜಿಎಸ್‌ಟಿ ಹೆಚ್ಚಿಸಿರುವುದರಿಂದ ಪತ್ರಿಕೆಗಳು ಸಂಕಷ್ಟದ ಸ್ಥಿತಿಯಲ್ಲಿವೆ. ಆದ್ದರಿಂದ ಜಿಎಸ್‌ಟಿ(GST) ಪ್ರಮಾಣ ಇಳಿಸಬೇಕು ಎಂದು ಒತ್ತಾಯಿಸಿ ವಿಧಾನ ಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. 

ಸರ್ಕಾರ ರಚಿಸಲು ಕಾಂಗ್ರೆಸ್‌ ತಯಾರಿ, ಡಿಕೆ ಶಿವಕುಮಾರ್‌ಗೆ ಎಐಸಿಸಿ ಹೊಸ ಜವಾಬ್ದಾರಿ

ಕೇಂದ್ರದ ಬಿಜೆಪಿ ಸರ್ಕಾರದ ಕೆಲವೊಂದು ಕ್ರಮಗಳು ಮುದ್ರಣ ಮಾಧ್ಯಮ ನಿರಾತಂಕವಾಗಿ ಮುಂದುವರೆಯಲು ಸಾಧ್ಯವಿಲ್ಲದ ಪರಿಸ್ಥಿತಿ ಸೃಷ್ಟಿಸಿವೆ. ದೇಶದಲ್ಲಿ ಜಿಎಸ್‌ಟಿ ಜಾರಿಗೆ ಬರುವ ಮೊದಲು ಮುದ್ರಣ ಕಾಗದದ ಮೇಲೆ ಒಟ್ಟಾರೆ ಶೇ.3 ರಷ್ಟುಮಾತ್ರ ತೆರಿಗೆ ಇತ್ತು. ಆದರೆ ಜಿಎಸ್‌ಟಿ ಬಳಿಕ ಶೇ.5 ರಷ್ಟುತೆರಿಗೆ ಹೇರಲಾಗಿದೆ. ಇದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನಾ ಕಾರಣದಿಂದ ದೇಶದ ವಾಣಿಜ್ಯ ವಹಿವಾಟು ಕುಂಠಿತಗೊಂಡಿದೆ. ಪತ್ರಿಕೆಗಳಿಗೆ ಬರುತ್ತಿದ್ದ ಜಾಹೀರಾತು ಪ್ರಮಾಣವೂ ವ್ಯಾಪಕವಾಗಿ ಕುಸಿದಿದೆ. ಕೋವಿಡ್‌ ಸಾಂಕ್ರಾಮಿಕ, ಲಾಕ್‌ಡೌನ್‌ ಪರಿಣಾಮದಿಂದ ಪತ್ರಿಕೆಗಳನ್ನು ನಡೆಸುವುದೇ ದುಸ್ತರವಾಗಿದೆ. ಹೀಗಾಗಿ ದೇಶೀಯ ಮುದ್ರಣ ಕಾಗದದ ಗುಣಮಟ್ಟಹೆಚ್ಚಿಸಲು ಇನ್ಸೆಂಟೀವ್‌ ನೀಡಬೇಕು. ಜಿಎಸ್‌ಟಿ ಪ್ರಮಾಣ ಇಳಿಸಬೇಕು. ಪತ್ರಿಕಾ ಸಂಸ್ಥೆಗಳಿಗೆ ಸುಗಮವಾಗಿ ಮತ್ತು ಸರಳವಾಗಿ ಮುದ್ರಣ ಕಾಗದ ಲಭ್ಯವಾಗುವಂತೆ ನೀತಿ ರೂಪಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ