
ಮೈಸೂರು (ಜ.25): ಮೈಸೂರಿನ ಸುತ್ತೂರು ಮಠಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದುಕೊಂಡಿದ್ದಾರೆ.
ಸುತ್ತೂರು ಮಠಕ್ಕೆ ಭಾವಿ ಅಳಿಯ ಅಮರ್ಥ್ಯ ಸಿದ್ದಾರ್ಥ್ ಜೊತೆ ಆಗಮಿಸಿ ಶ್ರೀಗಳ ಆರ್ಶಿವಾದ ಪಡೆದುಕೊಂಡಿದ್ದಾರೆ.
ಫೆಬ್ರವರಿಯಲ್ಲಿ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಹಾಗೂ ಕಾಫಿ ಡೇ ಮಾಲಿಕ ಸಿದ್ದಾರ್ಥ್ ಹೆಗಡೆ ಪುತ್ರ ಅಮರ್ಥ್ಯ ವಿವಾಹ ನೆರವೇರಲಿದ್ದು ಈ ನಿಟ್ಟಿನಲ್ಲಿ ಮಗಳ ಮದುವೆ ಲಗ್ನಪತ್ರಿಕೆ ನೀಡಲು ಸುತ್ತೂರು ಮಠಕ್ಕೆ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ.
ಸಿದ್ಧಾರ್ಥ ಸಾಮ್ರಾಜ್ಯವನ್ನು ಮುನ್ನಡೆಸುತ್ತಾಳಾ ಡಿಕೆಶಿ ಪುತ್ರಿ ಐಶ್ವರ್ಯಾ? ...
ಇದೆ ವೇಳೆ ಭಾವಿ ಅಳಿಯನನ್ನ ಶ್ರೀಗಳಿಗೆ ಪರಿಚಯಿಸಿದ ಡಿ.ಕೆ.ಶಿವಕುಮಾರ್, ಸುತ್ತೂರು ಶ್ರೀಗಳೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ್ದಾರೆ.
ಈಗಾಗಲೇ ಡಿಕೆ ಶಿವಕುಮಾರ್ ನಿವಾಸದಲ್ಲಿ ಭರ್ಜರಿ ವಿವಾಹ ಸಿದ್ಧತೆಗಳು ನಡೆಯುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ