ಕಾಂಗ್ರೆಸ್ ಶಾಸಕಗೆ ಡಿಕೆಶಿ ಖಡಕ್ ಎಚ್ಚರಿಕೆ

Kannadaprabha News   | Asianet News
Published : Mar 03, 2021, 09:09 AM IST
ಕಾಂಗ್ರೆಸ್ ಶಾಸಕಗೆ ಡಿಕೆಶಿ  ಖಡಕ್ ಎಚ್ಚರಿಕೆ

ಸಾರಾಂಶ

ಕಾಂಗ್ರೆಸ್‌ ಶಾಸಕರೋರ್ವರಿಗೆ ಅಖಂಡ ಶ್ರೀನಿವಾಸ ಮೂರ್ತಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುವುದನ್ನು ಸಹಿಸುವುದಿಲ್ಲ. ಒಂದು ವೇಳೆ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಕೈಗೊಳ್ಳುತ್ತೇನೆ  ಎಂದಿದ್ದಾರೆ. 

ಬೆಂಗಳೂರು (ಮಾ.03):  ಪಕ್ಷದ ಯಾವುದೇ ಮುಖಂಡರಾಗಲಿ ನಾಯಕರ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡುವುದನ್ನು ಸಹಿಸುವುದಿಲ್ಲ. ಒಂದು ವೇಳೆ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಕೈಗೊಳ್ಳುತ್ತೇನೆ ಎಂದು ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ. 

ಡಿ.ಕೆ.ಶಿವಕುಮಾರ್‌ ತಮ್ಮನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂಬ ಅಖಂಡ ಶ್ರೀನಿವಾಸ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅಖಂಡ ಶ್ರೀನಿವಾಸ್‌ ಮೂರ್ತಿ ಆಗಿರಬಹುದು ಅಥವಾ ಯಾರೇ ಆಗಿರಬಹುದು. ನಾಯಕರ ಬಗ್ಗೆ ಬಹಿರಂಗ ಹೇಳಿಕೆ ನೀಡಬಾರದು. ಒಂದು ವೇಳೆ ನೀಡಿದರೆ ಖಂಡಿಸುತ್ತೇನೆ, ಜೊತೆಗೆ ಶಿಸ್ತು ಕ್ರಮ ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದರು.

2023ರ ವಿಧಾನಸಭಾ ಚುನಾವಣೆಗೆ ಈಗಲೇ ಕಾಂಗ್ರೆಸ್‌ನಲ್ಲಿ ಶುರುವಾಯ್ತು ಟಿಕೆಟ್‌ ಫೈಟ್ ...

ಸಿದ್ದರಾಮಯ್ಯಗೆ ಮುನಿಸಿಲ್ಲ:  ಸಿದ್ದರಾಮಯ್ಯ ಕಾಂಗ್ರೆಸ್‌ ಪ್ರತಿಭಟನೆಗೆ ಆಗಮಿಸದ ಬಗ್ಗೆ ಮಾತನಾಡಿದ ಅವರು, ಉಪ ಚುನಾವಣೆ ಹಾಗೂ ಬಜೆಟ್‌ ಅಧಿವೇಶನ ಬರುತ್ತಿದೆ. ಹೀಗಾಗಿ ಶಾಸಕಾಂಗ ಪಕ್ಷದ ನಾಯಕರಿಗೆ ಕೆಲಸ ಇರುತ್ತದೆ. ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿದೆ. ಎಲ್ಲಾ ಕಡೆಯೂ ಹೋಗಲು ಸಾಧ್ಯವಿಲ್ಲ. ನಾನೂ ಸಹ ಕೆಲವೆಡೆ ಹೋಗಲು ಸಾಧ್ಯವಾಗಲಿಲ್ಲ. ಹಾಗಂತ ಮುನಿಸು ಎಂದು ಹೇಳಲು ಸಾಧ್ಯವೇ? ಸಿದ್ದರಾಮಯ್ಯ ಬಂದಿಲ್ಲ ಎಂಬ ಕಾರಣಕ್ಕೆ ಬೇರೆ ವಿಚಾರ ಕಲ್ಪಿಸುವುದು ಬೇಡ ಎಂದರು.

- ನಾಯಕರ ಬಗ್ಗೆ ಬಹಿರಂಗ ಹೇಳಿಕೆ ಸಹಿಸಲ್ಲ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
ಗಡೀಪಾರು ಸಂಕಷ್ಟದಲ್ಲಿ Mahesh Shetty Timarodi: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ ದೇಗುಲದಲ್ಲಿ ಪ್ರಾರ್ಥನೆ