ಸತೀಶ್ ಜಾರಕಿಹೊಳಿ ಗನ್‌ಮ್ಯಾನ್ ಕೊರೋನಾಗೆ ಬಲಿ

Published : Apr 28, 2021, 05:36 PM ISTUpdated : Apr 28, 2021, 07:09 PM IST
ಸತೀಶ್ ಜಾರಕಿಹೊಳಿ ಗನ್‌ಮ್ಯಾನ್ ಕೊರೋನಾಗೆ ಬಲಿ

ಸಾರಾಂಶ

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ​ ಸತೀಶ್ ಜಾರಕಿಹೊಳಿ ಅವರ ಗನ್‌ಮ್ಯಾನ್ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.

ಬೆಂಗಳೂರು, (ಏ.18):  ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಅವರ ಗನ್‌ಮ್ಯಾನ್‌ ಇಂದು (ಬುಧವಾರ) ಕೋವಿಡ್‌ಗೆ ಬಲಿಯಾಗಿದ್ದಾರೆ.

10 ವರ್ಷದಿಂದ ಬೆಂಗಳೂರಲ್ಲಿ ಸತೀಶ್ ಜಾರಕಿಹೊಳಿ‌ ಗನ್‌ಮ್ಯಾನ್ ಆಗಿದ್ದರು. ಆದ್ರೆ, ಅವರಿಗೆ ಇತ್ತೀಚೆಗೆ ಕೊರೋನಾ ಸೋಂಕು ತಗುಲಿತ್ತು. ಇದರಿಂದ ಆಸ್ಪತ್ರೆಗೆ ದಾಖಲಾಗಿದ್ದರು.

"

ಮೂಗಿನಲ್ಲಿ ನಿಂಬೆ ಹಣ್ಣಿನ ರಸ ಹಾಕಿಕೊಂಡ ಶಿಕ್ಷಕ ಸಾವು! 

ಆದ್ರೆ, ಬುಧವಾರ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ರಮೇಶ್‌ ಕಳೆದ 10 ವರ್ಷಗಳಿಂದ ಬೆಂಗಳೂರಲ್ಲಿ ಸತೀಶ್ ಜಾರಕಿಹೊಳಿ‌ ಗನ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು. 

ಸತೀಶ್ ಜಾರಕಿಹೊಳಿ ಅವರ ಸಹೋದರ ರಮೇಶ್ ಜಾರಕಿಹೊಳಿ ಅವರಿಗೂ ಕೊರೋನಾ ಸೋಂಕು ತಗುಲಿತ್ತು. ಅಲ್ಲದೇ ಬಹಳಷ್ಟು ರಾಜಕಾರಣಿಗಳು ಆಪ್ತರು ಸಹ ಕಿಲ್ಲರ್ ಕೊರೋನಾಗೆ ಬಲಿಯಾಗಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Indian Oilನಿಂದ 5-10 ಕೆಜಿ ಸಿಲಿಂಡರ್‌ ವಿತರಣೆ; ಬುಕ್ಕಿಂಗ್ ವಾಟ್ಸಪ್ ನಂಬರ್ ಇಲ್ಲಿದೆ
Karnataka News Live: ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ ಭೇಟಿ.. ಐತಿಹಾಸಿಕ ಕ್ಷಣಕ್ಕೆ ಸಾಕ್ಷಿ ಆಗಲಿದೆ ಸಾಂಸ್ಕೃತಿಕ ನಗರಿ..!