
ಬೆಂಗಳೂರು (ಜು.30): ಕೆಪಿಎಸ್ಸಿ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಂಡಿರುವ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಆದಾಯಕ್ಕಿಂತ ಹೆಚ್ಚಿನ ಮೊತ್ತದ ಸ್ಥಿರಾಸ್ತಿಯನ್ನು ಶಿವಶಂಕರಪ್ಪ ಸಾಹುಕಾರ್ ಕುಟುಂಬ ಖರೀದಿಸಿದೆ. ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಕೋರಿ ಸಾಮಾಜಿಕ ಕಾರ್ಯಕರ್ತ ಮರಿಲಿಂಗಗೌಡ ಮಾಲಿಪಾಟೀಲ್ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ.
2023-24ರ ಅವಧಿಯಲ್ಲಿ ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ 120 ಎಕರೆ ಕೃಷಿ ಹಾಗೂ ವಾಣಿಜ್ಯ ಭೂಮಿಯ ಖರೀದಿಯು ಸಾಹುಕಾರ್ ಕುಟುಂಬದಿಂದ ನಡೆದಿದೆ. ಶಿವಶಂಕರಪ್ಪ ಅವರ ಪತ್ನಿ ವಿಜಯಲಕ್ಷ್ಮೀ ಅವರ ಹೆಸರಿನಲ್ಲೂ ಜಮೀನು ಖರೀದಿ ಮಾಡಿರುವ ಸೇಲ್ ಡೀಡ್ ಪತ್ರಗಳನ್ನು ದೂರಿನೊಂದಿಗೆ ಲಗತ್ತಿಸಿ ಮರಿಲಿಂಗಗೌಡ ನೀಡಿದ್ದಾರೆ.
ಶಿವಶಂಕರಪ್ಪ ಅವರ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಖರೀದಿ ಮೇಲುನೋಟಕ್ಕೆ ಕಂಡು ಬರುತ್ತಿದೆ. ಜೊತೆಗೆ, ಅವರ ಪತ್ನಿ ವಿಜಯಲಕ್ಷ್ಮೀ ಅವರ ಆದಾಯದ ಮೂಲ ಏನು ಎಂಬುದು ಗೊತ್ತಿಲ್ಲ. ಸಾರ್ವಜನಿಕರ ಹಿತ ಕಾಯುವ ಹುದ್ದೆಯಲ್ಲಿದ್ದ ಶಿವಶಂಕರಪ್ಪ ಸಾಹುಕಾರ್ ಅವರ ಆಸ್ತಿ ವಿವರಗಳು ಸಾರ್ವಜನಿಕರಿಗೆ ಗೊತ್ತಾಗಲೇಬೇಕು. ಹೀಗಾಗಿ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಸಂಬಂಧಿಸಿದ ಇಲಾಖೆಗೆ ಸೂಚಿಸುವಂತೆ ಮರಿಲಿಂಗಗೌಡ ಮನವಿ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ