ಕೆಪಿಎಸ್‌ಸಿ ನೇಮಕಾತಿ ಅಕ್ರಮ: ಇಡಿ ದಾಳಿ ಬೆನ್ನಲ್ಲೇ ಶಿವಶಂಕರಪ್ಪ ಸಾಹುಕಾರ್ ಮತ್ತು ಸದಸ್ಯೆ ಗೀತಾ ಅರೆಸ್ಟ್

Published : Oct 06, 2026, 04:58 PM IST
KPSC Chairman Shivashankarappa Sahukar

ಸಾರಾಂಶ

ಪಶುವೈದ್ಯಾಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಸದಸ್ಯೆ ಡಾ. ಬಿ.ವಿ. ಗೀತಾ ನಿವಾಸಗಳ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೋಟ್ಯಂತರ ರೂಪಾಯಿ ಲಂಚ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪದಡಿ ಶೋಧ ಕಾರ್ಯ ನಡೆಸಿ ಇಬ್ಬರನ್ನೂ ಬಂಧಿಸಲಾಗಿದೆ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿ ಹಾಗೂ ವಿವಿಧ ಸರ್ಕಾರಿ ಹುದ್ದೆಗಳ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಭಾರಿ ಅಕ್ರಮ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ ತೀವ್ರಗೊಳಿಸಿದೆ. ಪ್ರಕರಣದ ಪ್ರಮುಖ ರೂವಾರಿಗಳಾದ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಹಾಲಿ ಸದಸ್ಯೆ ಡಾ. ಬಿ.ವಿ. ಗೀತಾ ಅವರ ಮನೆಗಳ ಮೇಲೆ ಈಡಿ ಅಧಿಕಾರಿಗಳ ತಂಡ ಭಾರಿ ಶೋಧ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಕೂಡ ಅಧಿಕಾರಿಗಳು ಬಂಧಿಸಿದ್ದಾರೆ.

ಸಂಜಯನಗರದ ನಿವಾಸದಲ್ಲಿ ಸಿಆರ್‌ಪಿಎಫ್ ಕಾವಲಿನಲ್ಲಿ ಈಡಿ ತನಿಖೆ

ಸಂಜಯನಗರದಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸಕ್ಕೆ ಎರಡು ಇನೋವಾ ವಾಹನಗಳಲ್ಲಿ ಬಂದಿಳಿದ ನಾಲ್ಕಕ್ಕೂ ಹೆಚ್ಚು ಈಡಿ ಅಧಿಕಾರಿಗಳ ತಂಡ, ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಯೋಧರ ಕಟ್ಟುನಿಟ್ಟಿನ ಭದ್ರತೆಯಲ್ಲಿ ಬೆಳಿಗ್ಗೆ ಸುಮಾರು 12 ಗಂಟೆಯಿಂದಲೇ ಸುದೀರ್ಘ ಪರಿಶೀಲನೆ ನಡೆಸಿತು.

ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ನಡೆದ ಹುದ್ದೆಗಳ ಹಂಚಿಕೆ, ಪ್ರಶ್ನೆಪತ್ರಿಕೆ ಸೋರಿಕೆ, ಬ್ಯಾಂಕ್ ಖಾತೆಗಳ ವಹಿವಾಟು ಹಾಗೂ ಆಸ್ತಿ-ಪಾಸ್ತಿಗಳಿಗೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ಅಧಿಕಾರಿಗಳು ತೀವ್ರ ತನಿಖೆಗೆ ಒಳಪಡಿಸಿದರು.

ಸದಸ್ಯೆ ಗೀತಾ ಮನೆಯಲ್ಲೂ ಶೋಧ

ಶಿವಶಂಕರಪ್ಪ ಅವರ ಜೊತೆಗೆ ಕೆಪಿಎಸ್‌ಸಿ ಸದಸ್ಯೆ ಡಾ. ಬಿ.ವಿ. ಗೀತಾ ಅವರ ನಿವಾಸದ ಮೇಲೂ ಏಕಕಾಲದಲ್ಲಿ ದಾಳಿ ನಡೆಸಿ ಮಹತ್ವದ ಕಡತಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಯಿತು. ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮದ ಹಿನ್ನೆಲೆ ಶಿವಶಂಕರಪ್ಪ ಸಾಹುಕಾರ್ ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಪಶುವೈದ್ಯಾಧಿಕಾರಿ ಸೇರಿದಂತೆ ಹಲವು ಹುದ್ದೆಗಳ ನೇಮಕಾತಿಯಲ್ಲಿ ಕೋಟ್ಯಂತರ ರೂಪಾಯಿ ಲಂಚ ಪಡೆಯಲಾಗಿದೆ ಎಂಬ ಗಂಭೀರ ಆರೋಪಗಳಿವೆ. ಅರ್ಹ ಅಭ್ಯರ್ಥಿಗಳಿಂದ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿ, ಅಕ್ರಮ ಮಾರ್ಗಗಳ ಮೂಲಕ ಒಎಂಆರ್ ಶೀಟ್ ಮೌಲ್ಯಮಾಪನ ಮತ್ತು ಮೆರಿಟ್ ಪಟ್ಟಿಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ತನಿಖಾ ವರದಿಗಳ ಹಿನ್ನೆಲೆಯಲ್ಲಿ ಈಡಿ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಈ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಅಕ್ರಮ ಹಣ ವರ್ಗಾವಣೆ ಹಾಗೂ ರಾಜಕಾರಣಿಗಳು ಮತ್ತು ಅಧಿಕಾರಿಗಳ ಅಪವಿತ್ರ ಮೈತ್ರಿಯ ಮೂಲ ಹುಡುಕಲು ಈಡಿ ನಡೆಸಿರುವ ಈ ಸರಣಿ ದಾಳಿಗಳು ಕೆಪಿಎಸ್‌ಸಿ ವಲಯದಲ್ಲಿ ದೊಡ್ಡ ಸಂಚಲನವನ್ನೇ ಸೃಷ್ಟಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕೆಪಿಎಸ್‌ಸಿ ಅಕ್ರಮ: ಶಾಂತಾ ಹೊಸಮನಿಗೆ ಮಧ್ಯಂತರ ರಿಲೀಫ್ ಇಲ್ಲ; ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ!
ಮುಂಗಾರಿನಲ್ಲೂ ಮುರಿದುಬಿದ್ದ ದಾಖಲೆ: ಬಿಸಿಲ ಧಗೆಗೆ ಕರ್ನಾಟಕದಲ್ಲಿ ಬಿಯರ್‌‌ ಮಾರಾಟ ಭಾರೀ ಹೆಚ್ಚಳ!