
ಬೆಂಗಳೂರು(ಮಾ.12): ರಾಜ್ಯ ಸರ್ಕಾರಿ ನೌಕರರ ಹೋರಾಟದ ಬೆನ್ನಲ್ಲೇ ಕೆಪಿಟಿಸಿಎಲ್ ಹಾಗೂ ಎಸ್ಕಾಂಗಳ ನೌಕರರೂ ಮುಷ್ಕರಕ್ಕೆ ಕರೆ ನೀಡಿದ್ದು, ವೇತನ ಪರಿಷ್ಕರಣೆಗೆ ಆಗ್ರಹಿಸಿ ಮಾ.16 ರಿಂದ ಕರ್ತವ್ಯ ಬಹಿಷ್ಕರಿಸಿ ಮುಷ್ಕರ ನಡೆಸುವುದಾಗಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘ ಮತ್ತು ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಆರ್.ಎಚ್. ಲಕ್ಷ್ಮೇಪತಿ ಹೇಳಿದ್ದಾರೆ.
ತನ್ಮೂಲಕ ಮಾ.16 ರಿಂದ ಕೆಪಿಟಿಸಿಎಲ್ ಹಾಗೂ ವಿದ್ಯುತ್ ಸರಬರಾಜು ಕಂಪೆನಿಗಳ (ಎಸ್ಕಾಂ) ಅಧಿಕಾರಿಗಳು, ನೌಕರರು ಕರ್ತವ್ಯ ಬಹಿಷ್ಕರಿಸಿ ಮನೆಯಲ್ಲೇ ಕುಳಿತು ಮುಷ್ಕರ ನಡೆಸಲಿದ್ದಾರೆ. ಹೀಗಾಗಿ ಸರ್ಕಾರ ಇದಕ್ಕೂ ಮೊದಲು ನಮ್ಮ ಬೇಡಿಕೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.
ಕೆಪಿಟಿಸಿಎಲ್ ರೈತರ ಜಮೀನು ಕಸಿಯುತ್ತಿದ್ದಾರೆ
ವೇತನ ಪರಿಷ್ಕರಣೆಗೆ ಆಗ್ರಹಿಸಿ ಒಕ್ಕೂಟವು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಒಂದು ವೇಳೆ ಬೇಡಿಕೆ ಈಡೇರಿಸದಿದ್ದರೆ ಮುಷ್ಕರ ನಡೆಸುವುದಾಗಿ 14 ದಿನಗಳ ಮೊದಲೇ ನೋಟಿಸ್ ನೀಡಲಾಗಿತ್ತು. ನೋಟಿಸ್ ನೀಡಿ ಹತ್ತು ದಿನ ಕಳೆದರೂ ಇಲ್ಲಿಯವರೆಗೂ ಸರ್ಕಾರದಿಂದ ನಮ್ಮ ಬೇಡಿಕೆಗಳಿಗೆ ಪೂರಕವಾದ ಸ್ಪಂದನೆ ದೊರೆತಿಲ್ಲ. ಆದ್ದರಿಂದ ಅನಿವಾರ್ಯವಾಗಿ ಈಗಾಗಲೇ ನಿಗದಿಯಾಗಿರುವಂತೆ ಮಾಚ್‌ರ್ 16 ರಿಂದ ಸಾಮೂಹಿಕವಾಗಿ ಕರ್ತವ್ಯಕ್ಕೆ ಗೈರುಹಾಜರಾಗುವ ಮೂಲಕ ಅನಿರ್ದಿಷ್ಟಾವಧಿ ಮುಷ್ಕರವನ್ನು ನಡೆಸಲು ಸಭೆಯಲ್ಲಿ ಒಮ್ಮತದ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರು ಹೈಟೆನ್ಷನ್ ವೈರ್ ಕೆಳಗೆ ಮನೆಕಟ್ಟಿದವರಿಗೆ ಈಗ ಟೆನ್ಶನ್!
ತೊಂದರೆಗೆ ಸರ್ಕಾರವೇ ಹೊಣೆ:
ಸೋಮವಾರದಿಂದಲೇ ಈ ಬಗ್ಗೆ ನಮ್ಮ ಎಲ್ಲಾ ನೌಕರರು ಮತ್ತು ಅಧಿಕಾರಿಗಳಿಗೆ ಮುಷ್ಕರದ ರೂಪು ರೇಷೆಗಳನ್ನು ತಿಳಿಸಿಕೊಡಲಿದ್ದೇವೆ. ಸಾರ್ವಜನಿಕರಿಗೆ ಆಗುವ ತೊಂದರೆಗೆ ಸರಕಾರವೇ ಹೊಣೆ. ಕೆಲಸಕ್ಕೆ ಗೈರು ಹಾಜರಾಗುವ ಸಂಧರ್ಭದಲ್ಲಿ ಸಾರ್ವಜನಿಕರಿಗೆ ಆಗುವ ತೊಂದರೆಗಳಿಗೆ ಕ್ಷಮೆ ಕೇಳುತ್ತೇನೆ ಎಂದು ಪ್ರಕಟಣೆ ಮೂಲಕ ತಿಳಿಸಿದ್ದಾರೆ
ಸಭೆಯಲ್ಲಿ ಕೆಇಬಿ ಇಂಜಿನಿಯರುಗಳ ಸಂಘ, ಕೆಇಬಿ ಎಸ್ಸಿ/ಎಸ್ಟಿನೌಕರರ ಕಲ್ಯಾಣ ಸಂಸ್ಥೆ, ಕವಿಪ್ರನಿನಿ ಲೆಕ್ಕಾಧಿಕಾರಿಗಳ ಸಂಘ, ಕವಿಪ್ರನಿನಿ ಡಿಪ್ಲೊಮೊ ಎಂಜಿನಿಯರ್‌ಗಳ ಸಂಘ ಸೇರಿದಂತೆ ವಿವಿಧ ಸಂಘಗಳ ಪದಾಧಿಕಾರಿಗಳು ಹಾಜರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ