
ಬೆಂಗಳೂರು (ಆ.10): ವಿದ್ಯುತ್ ಉತ್ಪಾದನೆ ಮತ್ತು ವಿತರಣೆ ಪ್ರಕ್ರಿಯೆಯನ್ನು ಖಾಸಗಿಯವರಿಗೆ ನೀಡುವ ವಿದ್ಯುಚ್ಛಕ್ತಿ ಕಾಯಿದೆ 2003ಕ್ಕೆ ತಿದ್ದುಪಡಿ ಮಾಡುವ ಸಲುವಾಗಿ ಕರಡು ಮಸೂದೆ ಸಿದ್ದಪಡಿಸಿರುವ ಕ್ರಮ ಖಂಡಿಸಿ ಆಗಸ್ಟ್ 10ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಕರೆ ನೀಡಿದ್ದ ‘ಕರ್ತವ್ಯ ಬಹಿಷ್ಕಾರ’ ನಿರ್ಧಾರವನ್ನು ಹಿಂಪಡೆಯಲಾಗಿದೆ.
ಈ ಸಂಬಂಧ ಕನ್ನಡಪ್ರಭದೊಂದಿಗೆ ಮಾತನಾಡಿದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಅಧ್ಯಕ್ಷ ಟಿ.ಆರ್.ರಾಮಕೃಷ್ಣ, ಕರ್ತವ್ಯ ಬಹಿಷ್ಕರಿಸುವ ನಿಧಾರಕ್ಕೆ ಸಂಬಂಧ ಕೇಂದ್ರ ಸಚಿವರು, ಲೋಕಸಭೆಯ ವಿರೋಧ ಪಕ್ಷದ ನಾಯಕರೊಂದಿಗೆ ಚರ್ಚೆ ನಡೆಸಲಾಗಿದೆ. ರೈತರು ಮತ್ತು ವಿದ್ಯುತ್ ಪ್ರಸರಣ ನಿಗಮ ನೌಕರರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.
ಖಾಸಗೀಕರಣ ಯತ್ನ: ಕೆಪಿಟಿಸಿಎಲ್‌ನಲ್ಲಿ ಎಸ್ಕಾಂಗಳ ವಿಲೀನ ಇಲ್ಲ
ಅಲ್ಲದೆ, ತಿದ್ದುಪಡಿ ಕಾಯಿದೆಯ ಕರಡು ಮಸೂದೆ ಮಂಡನೆಗೆ ಮಂಗಳವಾರ ನಿಗದಿಯಾಗಿತ್ತು. ಆದರೆ, ಮಂಗಳವಾರದ ಕಾರ್ಯಸೂಚಿಯಲ್ಲಿ ಈ ವಿಚಾರ ಪ್ರಸ್ತಾಪವಾಗಿಲ್ಲ. ಹೀಗಾಗಿ ಕರ್ತವ್ಯ ಬಹಿಷ್ಕಾರ ನಿರ್ಧಾರವನ್ನು ಹಿಂಪಡೆಯಲಾಗಿದೆ ಎಂದು ಅವರು ವಿವರಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ