
ಬೆಂಗಳೂರು (ನ.13): ಪ್ರಧಾನಿ ನರೇಂದ್ರ ಮೋದಿ(Prime minister Narendra Modi) ಅವರಿಂದ ಚಾಲನೆ ಪಡೆಯಲಿರುವ ನಮ್ಮ ಮೆಟ್ರೋ ಪಿಂಕ್ ಮಾರ್ಗ(Namma Metro Pink line)ದ ಉದ್ಘಾಟನಾ ಸಮಾರಂಭದಲ್ಲಿ ನಿಗದಿಯಾಗಿದ್ದ ತಮ್ಮ ಭಾಷಣಕ್ಕೆ ಇದ್ದಕ್ಕಿದ್ದಂತೆ ಅವಕಾಶ ನೀಡದೆ ಇರುವುದಕ್ಕೆ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ(Krishna Byre gowda) ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಕೃಷ್ಣಬೈರೇಗೌಡ ಅವರು ಪ್ರಧಾನಿಯವರ ಕಾರ್ಯಕ್ರಮದಲ್ಲಿ ನಿಗದಿಯಾಗಿದ್ದ ವಿವರಗಳ ಸ್ಕ್ರೀನ್ ಶಾಟ್ ಟ್ಯಾಗ್ ಮಾಡಿದ್ದಾರೆ.
‘ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ನನಗೆ ಸಿಕ್ಕ ಬಹುಮಾನ - ನನ್ನ ಭಾಷಣ ಕಟ್!. ಬೆಂಗಳೂರು ಅಭಿವೃದ್ಧಿ ಸಚಿವನಿಗೆ ಮೆಟ್ರೋ ಉದ್ಘಾಟನೆಯಲ್ಲಿ ಮಾತನಾಡಲು ಇಲ್ಲ ಅವಕಾಶ. ಸಭಾ ಕಾರ್ಯಕ್ರಮದ ಡ್ರಾಫ್ಟ್ ನಲ್ಲಿ ನನ್ನ ಮಾತಿಗೆ ಅವಕಾಶ ನಿಗದಿಯಾಗಿತ್ತು. ನಿನ್ನೆ ರಾತ್ರಿ ಬಂದ ಅಂತಿಮ ಪಟ್ಟಿಯಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವರ ಮಾತನ್ನು ಕಟ್ ಮಾಡಲಾಗಿದೆ.
ಬಹುತೇಕ ಬಂಡವಾಳ, ಖರ್ಚು ನಮ್ಮದು. ಕರ್ನಾಟಕಕ್ಕೆ ನ್ಯಾಯಯುತ ಪಾಲು ಕೇಳಿದರೆ ಈ ರೀತಿ ಶಿಕ್ಷೆ. ಪರವಾಗಿಲ್ಲ, ನೀವು ನನ್ನ ಮಾತನ್ನು ಕಟ್ ಮಾಡಬಹುದು. ಆದರೆ, ಬೆಂಗಳೂರಿನ ಅಭಿವೃದ್ಧಿಗೆ ಕೆಲಸ ಮಾಡೋದನ್ನು ನಿಲ್ಲಿಸಲಿಕ್ಕೆ ಆಗೋದಿಲ್ಲ. ಇನ್ನೂ ಹೆಚ್ಚಿನ ಪರಿಶ್ರಮದಿಂದ ಕೆಲಸ ಮಾಡುತ್ತೇವೆ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೇಳಿದ್ದಕ್ಕೆ ಸಿಕ್ಕ ಬಹುಮಾನ - ನನ್ನ ಭಾಷಣ ಕಟ್!
ಬೆಂಗಳೂರು ಅಭಿವೃದ್ಧಿ ಸಚಿವನಿಗೆ ಮೆಟ್ರೋ ಉದ್ಘಾಟನೆಯಲ್ಲಿ ಮಾತನಾಡಲು ಇಲ್ಲ ಅವಕಾಶ.
ಸಭಾ ಕಾರ್ಯಕ್ರಮದ ಡ್ರಾಫ್ಟ್ ನಲ್ಲಿ ನನ್ನ ಮಾತಿಗೆ ಅವಕಾಶ ನಿಗದಿಯಾಗಿತ್ತು. ನಿನ್ನೆ ರಾತ್ರಿ ಬಂದ ಅಂತಿಮ ಪಟ್ಟಿಯಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವರ ಮಾತನ್ನು ಕಟ್ ಮಾಡಲಾಗಿದೆ.
ಬಹುತೇಕ ಬಂಡವಾಳ ಖರ್ಚು ನಮ್ಮದು. ಕರ್ನಾಟಕಕ್ಕೆ ನ್ಯಾಯಯುತ ಪಾಲು ಕೇಳಿದರೆ ಈ ರೀತಿ ಶಿಕ್ಷೆ.
ಪರವಾಗಿಲ್ಲ, ನೀವು ನನ್ನ ಮಾತನ್ನು ಕಟ್ ಮಾಡಬಹುದು. ಆದರೆ ಬೆಂಗಳೂರಿನ ಅಭಿವೃದ್ಧಿಗೆ ಕೆಲಸ ಮಾಡೋದನ್ನ ನಿಲ್ಲಿಸಲಿಕ್ಕೆ ಆಗೋದಿಲ್ಲ. ಇನ್ನೂ ಹೆಚ್ಚಿನ ಪರಿಶ್ರಮದಿಂದ ಕೆಲಸ ಮಾಡುತ್ತೇವೆ.
— Krishna Byre Gowda (@krishnabgowda) November 12, 2026
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ