
ಬೆಂಗಳೂರು(ಮಾ.01): ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಪರವಾಗಿ ಬೆಳಗಾವಿಯ ನವಿಲುತೀರ್ಥ ಜಲಾಶಯದ ಅಧೀಕ್ಷಕ ಅಭಿಯಂತರ ಕೃಷ್ಣೋಜಿರಾವ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ.
ಈ ಕುರಿತು ರಾಜ್ಯ ಸರ್ಕಾರ ಗೋವಾ ಮತ್ತು ಮಹಾರಾಷ್ಟ್ರಕ್ಕೆ ಪತ್ರ ಬರೆದಿದ್ದು, ಶೀಘ್ರವೇ ಜಂಟಿ ಮೇಲುಸ್ತುವಾರಿ ಸಮಿತಿಗೆ ಪ್ರತಿನಿಧಿಗಳನ್ನು ನೇಮಿಸುವಂತೆ ಮನವಿ ಮಾಡಿದೆ. ಅಲ್ಲದೆ ಈ ಸಮಿತಿ ವಿವಾದಿತ ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಅಗತ್ಯ ನೆರವು ನೀಡಲು ಹಿಡಕಲ್ ಜಲಾಶಯದ ಜಿಆರ್‌ಬಿಸಿ ಸರ್ಕಲ್ ಅಧಿಕ್ಷಕ ಅಭಿಯಂತರ ಆರ್.ವಿ.ದ್ಯಾಮಣ್ಣನವರ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದೆ.
ಮೋದಿ ಮುಂದೆ ಗೋವಾ ಸಿಎಂ ಮಹದಾಯಿ ಕ್ಯಾತೆ
ಮೂರು ರಾಜ್ಯಗಳ ಅಧಿಕಾರಿಗಳನ್ನೊಳಗೊಂಡ ಮೇಲುಸ್ತುವಾರಿ ಸಮಿತಿಯು ಮಾರ್ಚ್ ಮೊದಲ ಅಥವಾ ಎರಡನೇ ವಾರದಲ್ಲಿ ಸ್ಥಳಕ್ಕೆ ಭೇಟಿ ನೀಡಬಹುದಾಗಿದೆ. ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿಗೆ ನೋಡಲ್ ಅಧಿಕಾರಿಯನ್ನು ಗೋವಾ ಮತ್ತು ಮಹಾರಾಷ್ಟ್ರಗಳಿಂದ ನೇಮಕಗೊಂಡ ಅಧಿಕಾರಿಗಳು ಸಂಪರ್ಕಿಸುವಂತೆ ರಾಜ್ಯ ಸರ್ಕಾರ ಪತ್ರದಲ್ಲಿ ತಿಳಿಸಿದೆ.
ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮಲಪ್ರಭಾ ನದಿಗೆ ನೀರು ತಿರುಗಿಸುತ್ತಿದೆ ಎಂದು ಗೋವಾ ರಾಜ್ಯ ನ್ಯಾಯಾಂಗ ನಿಂದನೆ ದೂರು ಸಲ್ಲಿಸಿತ್ತು. ಈ ವಿಚಾರವಾಗಿ ಸುಪ್ರೀಂಕೋರ್ಟ್‌ನ ನ್ಯಾ.ಚಂದ್ರಚೂಡ್ ನೇತೃತ್ವದ ನ್ಯಾಯಪೀಠ ಗೋವಾದ ಮನವಿ ಪರಿಶೀಲಿಸಿ ಇದಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಲು ನಾಲ್ಕು ವಾರಗಳಲ್ಲಿ ತಜ್ಞರನ್ನೊಳಗೊಂಡ ಮೇಲುಸ್ತುವಾರಿ ಸಮಿತಿ ರಚಿಸುವಂತೆ ಆದೇಶಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ