ಕೆಆರ್‌ಎಸ್‌ ಬಳಿ ಡಿಸ್ನಿಲ್ಯಾಂಡ್‌ ಶತಃ ಸಿದ್ಧ

Published : Feb 20, 2019, 09:38 AM IST
ಕೆಆರ್‌ಎಸ್‌ ಬಳಿ ಡಿಸ್ನಿಲ್ಯಾಂಡ್‌ ಶತಃ ಸಿದ್ಧ

ಸಾರಾಂಶ

KRS ಬಳಿ ಡಿಸ್ನಿ ಲ್ಯಾಂಡ್ ನಿರ್ಮಾಣ ಯೋಜನೆ ನನ್ನ ಕನಸಿನ ಕೂಸು. ಯಾರು ಎಷ್ಟೆಅಡ್ಡಿ ಪಡಿಸಿದರೂ ಡಿಸ್ನಿಲ್ಯಾಂಡ್‌ ಮಾದರಿ ಯೋಜನೆಯ ಅನುಷ್ಠಾನದಿಂದ ಆಗುವ ಲಾಭಗಳ ಕುರಿತು ವಿರೋಧಿಗಳಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಲಾಗುವುದು ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. 

ಮಂಡ್ಯ :  ಕೆಆರ್‌ಎಸ್‌ ಬಳಿ ಡಿಸ್ನಿಲ್ಯಾಂಡ್‌ ಮಾಡುವ ಬೃಹತ್‌ ಯೋಜನೆಯ ಪ್ರಸ್ತಾವನೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಿಳಿಸಿದರು.

ನಗರದಲ್ಲಿ ಮಂಡ್ಯ ಜಿಲ್ಲೆಯ ಶಾಸಕರು, ಸಚಿವರು, ಸಂಸದರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ಮಾತೆಯ ಪ್ರತಿಮೆಯನ್ನು ಸ್ಥಾಪನೆ ಮಾಡುವ ವಿಷಯದಲ್ಲಿ ವಿವಾದ ಉಂಟಾಗಿದೆ. ಇದು ಡಿಸ್ನಿಲ್ಯಾಂಡ್‌ ಯೋಜನೆಗೆ ಅಡ್ಡಿಯಾಗಲಾರದು. ಈ ಯೋಜನೆ ಜಾರಿಯಾದರೆ 50 ಸಾವಿರ ಮಂದಿಗೆ ಉದ್ಯೋಗ ಲಭಿಸಲಿದೆ. ಈ ಯೋಜನೆ ನನ್ನ ಕನಸಿನ ಕೂಸು. ಯಾರು ಎಷ್ಟೆಅಡ್ಡಿ ಪಡಿಸಿದರೂ ಡಿಸ್ನಿಲ್ಯಾಂಡ್‌ ಮಾದರಿ ಯೋಜನೆಯ ಅನುಷ್ಠಾನದಿಂದ ಆಗುವ ಲಾಭಗಳ ಕುರಿತು ವಿರೋಧಿಗಳಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಲಾಗುವುದು ಎಂದರು.

ಇನ್ನು ಸಭೆ ವೇಳೆ ಮಂಡ್ಯ ಲೋಕಸಭಾ ಕ್ಷೇತ್ರದಿಂದ ನಿಖಿಲ್‌ರನ್ನೇ ಕಣಕ್ಕಿಳಸಬೇಕೆಂದು ಶಾಸಕರು ಒತ್ತಡ ಹೇರಿದ್ದಾರೆ ಎನ್ನಲಾಗಿದ್ದು, ಈ ಬಗ್ಗೆ ಕುಮಾರಸ್ವಾಮಿ ಯಾವುದೇ ಅಭಿಪ್ರಾಯ ವ್ಯಕ್ತಪಡಿಸಿಲ್ಲ. ಈ ಬಗ್ಗೆ ಹೈಕಮಾಂಡ್‌ ನಿರ್ಧಾರ ಕೈಗೊಳ್ಳಲಿದೆ ಎಂದಷ್ಟೇ ಹೇಳಿ ಸುಮ್ಮನಾದರು ಎಂದು ತಿಳಿದುಬಂದಿದೆ.

ಚಲುವರಾಯಸ್ವಾಮಿಗೆ ಪರೋಕ್ಷ ಟಾಂಗ್‌:  ನನ್ನ ಹಳೇ ಸ್ನೇಹಿತರೊಬ್ಬರು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಸಾಕಷ್ಟುನೊಂದು ಹೇಳಿದ್ದಾರೆ. ಅದು ನನ್ನ ಗಮನಕ್ಕೆ ಬಂದಿದೆ. ನಾನು ಯಾವುದೇ ರಾಜಕೀಯ ಮಾಡದೇ ಅಭಿವೃದ್ಧಿಯನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಹಲವಾರು ಯೋಜನೆಗಳನ್ನು ಜಾರಿ ಮಾಡಲು ನಿರ್ಧರಿಸಿದ್ದೇನೆ. 

ಹಳೇ ಸ್ನೇಹಿತರು ಕೊರಗುವುದು ಬೇಡ. ಅವರ ಕಳಕಳಿಯಂತೆ ಜಿಲ್ಲೆಯ ಅಭಿವೃದ್ಧಿಗೆ ಬದ್ಧನಾಗಿ ಕೆಲಸ ಮಾಡುತ್ತೇನೆ. ಅವರ ಕಳಕಳಿ, ಅಭಿಮಾನಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೆಸರೇಳದೆ ಮಾಜಿ ಸಚಿವ ಚಲುವರಾಯಸ್ವಾಮಿಗೆ ಟಾಂಗ್‌ ಕೊಟ್ಟರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪವಿತ್ರ ಶಕ್ತಿ ಮೇಲೆ ಬಿಜೆಪಿ, ಆರೆಸ್ಸೆಸ್‌ ದಾಳಿ: ಸಿಎಂ ಸಿದ್ದರಾಮಯ್ಯ ಕಿಡಿ
2028ರಲ್ಲಿ ಜೆಸಿಬಿ ಪಾರ್ಟಿಯಿಂದ ಸ್ಪರ್ಧೆ: ನಾನೇ ಮುಖ್ಯಮಂತ್ರಿ: ಬಸನಗೌಡ ಪಾಟೀಲ್ ಯತ್ನಾಳ ಘೋಷಣೆ