ಗುಜರಾತ್‌ನಲ್ಲಿ ಪಾದಯಾತ್ರೆ ವೇಳೆ ಅಪಘಾತ;ಕೆಆರ್‌ಎಸ್‌ ಕಾಯಾಧ್ಯಕ್ಷ, ಮದ್ದೂರಿನ ಲಿಂಗೇಗೌಡ ದುರ್ಮರಣ!

By Kannadaprabha News  |  First Published Dec 12, 2024, 6:02 AM IST

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರು ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪಾದಯಾತ್ರಿಗಳ ಮೇಲೆ ಲಾರಿ ಹರಿದ ಪರಿಣಾಮ ಲಿಂಗೇಗೌಡ ಮತ್ತು ಮಂಗಳೂರಿನ ಕುಂಜಿ ಮೂಸಾ ಸಾವನ್ನಪ್ಪಿದ್ದಾರೆ.


ಬೆಂಗಳೂರು (ಡಿ.12): ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್‌) ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಎಸ್.ಹೆಚ್. ಲಿಂಗೇಗೌಡರು ಗುಜರಾತಿನಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ.

ಅತ್ಯಾಚಾರ ಆರೋಪದ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ಮಾಡಬೇಕು ಮತ್ತು ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿಗೆ ಭೇಟಿಯಾಗಿ ಮನವಿ ಪತ್ರ ನೀಡಲು ಮಂಗಳೂರಿನಿಂದ ದೆಹಲಿಗೆ ಐದು ಜನರ ತಂಡ ಪಾದಯಾತ್ರ ನಡೆಸುತ್ತಿದ್ದರು. ಬುಧವಾರ 55ನೇ ದಿನ ಪಾದಯಾತ್ರೆ ಗುಜರಾತಿನ ಭರೂಚ್ ಎನ್ನುವ ನಗರ ತಲುಪಿತ್ತು. ಪಾದಯಾತ್ರೆಯ ತಂಡಕ್ಕೆ ನೈತಿಕ ಬೆಂಬಲ ನೀಡಲು ಎಸ್.ಹೆಚ್. ಲಿಂಗೇಗೌಡರೂ ಗುಜರಾತ್‌ಗೆ ತೆರಳಿದ್ದರು.

Tap to resize

Latest Videos

ಈ ಸಂದರ್ಭದಲ್ಲಿ ಭರೂಚ್ ನಗರದ ಹೆದ್ದಾರಿಯ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಯಾತ್ರಿಗಳ ಮೇಲೆ ಬಳಿ ಲಾರಿಯೊಂದು ಹರಿದ ಪರಿಣಾಮ ಎಸ್.ಎಚ್.ಲಿಂಗೇಗೌಡ ಮತ್ತು ಮಂಗಳೂರಿನ ಕುಂಜಿ ಮೂಸಾ ಮೃತಪಟ್ಟಿದ್ದಾರೆ. ಮೃತದೇಹಗಳನ್ನು ರಾಜ್ಯಕ್ಕೆ ತರಲು ಗುಜರಾತ್ ಸರ್ಕಾರದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಅವರ ನಿಧನದಿಂದ ಪಕ್ಷಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದು ಪಕ್ಷದ ಸಂಘಟನಾ ಕಾರ್ಯದರ್ಶಿ ಎಲ್. ಜೀವನ್ ತಿಳಿಸಿದ್ದಾರೆ.

ಪೊಲೀಸರ ದೌರ್ಜನ್ಯ ಖಂಡಿಸಿ ಪಂಚಮಸಾಲಿ ಹೋರಾಟ ತೀವ್ರ, ಹಳ್ಳಿ ಹಳ್ಳಿಗಳಲ್ಲಿ ಹೋರಾಟದ ಕಿಚ್ಚು!

ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಂಪುರ ಗ್ರಾಮದ ಲಿಂಗೇಗೌಡ ಎಂ.ಎ. ಪದವೀಧರರು. ಅಬಕಾರಿ ಇಲಾಖೆಯಲ್ಲಿ ಉದ್ಯೋಗಕ್ಕೆ ಸೇರಿದ್ದ ಅವರು, ಭ್ರಷ್ಟ ವ್ಯವಸ್ಥೆಯಿಂದ ಬೇಸತ್ತು ಹುದ್ದೆಗೆ ರಾಜೀನಾಮೆ ನೀಡಿದ್ದರು. ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಉದ್ದೇಶದಿಂದ 2018ರಲ್ಲಿ ಸ್ವರಾಜ್ ಇಂಡಿಯಾ ಪಕ್ಷದಿಂದ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಿದ್ದರು. 2019ರ ಲೋಕಸಭಾ ಚುನಾವಣೆಗೆ ಮಂಡ್ಯ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. 2019ರಲ್ಲಿಯೇ ಕೆಆರ್‌ಎಸ್‌ ಪಾರ್ಟಿ ಸೇರಿದ್ದರು.

click me!