ಒಂದೇ ಬಾರಿಗೆ 21 ನೂತನ ಉತ್ಪನ್ನಗಳು ಮಾರುಕಟ್ಟೆಗೆ ಬಿಡುಗಡೆ, KSDL ಸಾಧನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

By Kannadaprabha NewsFirst Published Jan 20, 2024, 11:12 PM IST
Highlights

ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (KSDL) ಉತ್ಪಾದಿಸಿರುವ 21 ನೂತನ ಉತ್ಪನ್ನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಮಾರುಕಟ್ಟೆಗೆ ಬಿಡುಗಡೆ ಮಾಡಿದರು. 

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (KSDL) ಉತ್ಪಾದಿಸಿರುವ 21 ನೂತನ ಉತ್ಪನ್ನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಮಾರುಕಟ್ಟೆಗೆ ಬಿಡುಗಡೆ ಮಾಡಿದರು. ಈ ಉತ್ಪನ್ನಗಳಲ್ಲಿ ಮೈಸೂರು ಸ್ಯಾಂಡಲ್ ವೇವ್ಸ್ ಶ್ರೇಣಿಯ 10 ಬಗೆಯ ಪ್ರೀಮಿಯಂ ಮೈಸೂರು ಸ್ಯಾಂಡಲ್ ಸಾಬೂನುಗಳು, 3 ಬಗೆಯ ಶವರ್ ಜೆಲ್, 6 ತರಹದ ಸೋಪ್ ಕಿಟ್, ಹ್ಯಾಂಡ್ ವಾಶ್ ಮತ್ತು ಕುಡಿಯುವ ನೀರು ಸೇರಿವೆ.

ಬಳಿಕ ಮಾತನಾಡಿದ ಮುಖ್ಯಮಂತ್ರಿ, 107 ವರ್ಷಗಳ ಇತಿಹಾಸ ಹೊಂದಿರುವ ಕೆಎಸ್ಡಿಎಲ್, ಒಂದೇ ಬಾರಿಗೆ 21 ಉತ್ಪನ್ನಗಳನ್ನು ಬಿಡುಗಡೆ ಮಾಡಿರುವುದು ಇದೇ ಮೊದಲ ಬಾರಿಯಾಗಿದೆ. ಸಂಸ್ಥೆಯು ಈಗಿನ ತಲೆಮಾರಿನ ಯುವಜನರ ನಿರೀಕ್ಷೆಗೆ ತಕ್ಕಂತೆ ಶವರ್ ಜೆಲ್ ಸೇರಿದಂತೆ ಬಗೆಬಗೆಯ ಉತ್ಪನ್ನಗಳನ್ನು ಉತ್ಪಾದಿಸಲು ಮುಂದಾಗಿರುವುದು ಶ್ಲಾಘನೀಯ ಸಂಗತಿಯಾಗಿದೆ. ಇದರ ಜೊತೆಗೆ ಗುಣಮಟ್ಟಕ್ಕೆ ಆದ್ಯತೆ ಮುಂದುವರಿಯಬೇಕು ಎಂದರು.

Latest Videos

ಈ ಬಾರಿ ಅಭಿಮಾನಿಗಳೊಂದಿಗೆ ಬರ್ತಡೇ ಆಚರಿಸಿಕೊಳ್ಳಲ್ಲ ಎಂದ ನಿಖಿಲ್ ಕುಮಾರಸ್ವಾಮಿ ಕಾರಣ ಇಲ್ಲಿದೆ

ಹಿಂದಿನ ಸಾಲಿನಲ್ಲಿ ಸಂಸ್ಥೆಯು 132 ಕೋಟಿ ರೂ. ಲಾಭ ಮಾಡಿತ್ತು. ಎಂಬಿ ಪಾಟೀಲರು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಮೇಲೆ, ಕಳೆದ ಎಂಟು ತಿಂಗಳಲ್ಲಿ ಲಾಭವು 182 ಕೋಟಿ ರೂ.ಗಳಿಗೇರಿದೆ. ಮುಂಬರುವ ದಿನಗಳಲ್ಲಿ ಸಂಸ್ಥೆಯ ಉತ್ಪಾದನಾ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸಲು ಅವರು ಹಲವು ಮಹತ್ವಾಕಾಂಕ್ಷಿ ಉಪಕ್ರಮಗಳನ್ನು ಕೈಗೊಂಡಿರುವುದು ಸ್ತುತ್ಯರ್ಹ ಸಂಗತಿಯಾಗಿದೆ ಎಂದು ಅವರು ಸಚಿವರ ಬೆನ್ನುತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

ಜ.22 ರಂದು ಅಯೋಧ್ಯಾ ರಾಮನ ಪ್ರಾಣ ಪ್ರತಿಷ್ಠಾಪನೆಗೆ ಸರ್ಕಾರಿ ರಜೆ ನೀಡುವ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ: ಸಿಎಂ

click me!